ಒಂದು ವರ್ಷದ ಸಂಭ್ರಮದಲ್ಲಿ ಜನಪ್ರಿಯ ಮಾರುತಿ ಸುಜುಕಿ ಎಸ್-ಪ್ರೆಸ್ಸೊ
2019ರಲ್ಲಿ ಬಿಡುಗಡೆಯಾದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಮಾರುತಿ ಎಸ್-ಪ್ರೆಸ್ಸೊ ಮಿನಿ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದೆ.

ಮಾರುತಿ ಸುಜುಕಿ ಕಂಪನಿಯು ಸಾಮಾನ್ಯ ಜನರಿಗಾಗಿ ಕೈಗೆಟಕುವ ದರದಲ್ಲಿ ಈ ಮಿನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಎಸ್-ಪ್ರೆಸ್ಸೊ ಕಾರಿಗೆ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಈ ಜನಪ್ರಿಯ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿ ಒಂದು ವರ್ಷ ಪೂರೈಸಿದೆ.

ಎಸ್-ಪ್ರೆಸ್ಸೊ ಮಿನಿ ಎಸ್‍ಯುವಿ 998 ಸಿಸಿ ಪೆಟ್ರೋಲ್ ಎಂಜಿನ್ 67 ಬಿಎಚ್‌ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಆರಂಭಿಕ ಕಾರು ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಹೈ ಎಂಡ್ ಮಾದರಿಯಲ್ಲಿ 5-ಸ್ಪೀಡ್ ಆಟೋ ಗೇರ್ ಶಿಫ್ಟ್(ಎಜಿಎಸ್) ಆಯ್ಕೆಯನ್ನು ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಎಸ್-ಪ್ರೆಸ್ಸೊ ಕಾರಿನಲ್ಲಿ ಮೈಕ್ರೋ ಎಸ್‌ಯುವಿ ವಿನ್ಯಾಸದೊಂದಿಗೆ ಆಕರ್ಷಕ ಗ್ರೌಂಡ್ ಕ್ಲಿಯೆರೆನ್ಸ್, 14-ಇಂಚಿನ ಸ್ಟೀಲ್ ವೀಲ್ಹ್, ಸ್ಲಿಕ್ ಫ್ರಂಟ್ ಗ್ರಿಲ್, ಕ್ರೋಮ್ ಇನ್ಸರ್ಟ್, ಹೆಡ್‌ಲ್ಯಾಂಪ್, ವಿಸ್ತರಿತ ಸೆಂಟರ್ ಏರ್ ಇನ್‌ಟೆಕ್, ಸಿ ಶೇಫ್ ಟೈಲ್‌ಗೆಟ್ ಸೌಲಭ್ಯವು ಕಾರಿನ ಅಂದಕ್ಕೆ ಮತ್ತಷ್ಟು ಮೆರಗು ನೀಡುತ್ತವೆ.

ಎಸ್-ಪ್ರೆಸ್ಸೊ ಕಾರಿನ ಇಂಟಿರಿಯರ್ ನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿದ್ದು, ಬಾಡಿ ಕಲರ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೊಲ್‌ನಲ್ಲಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ಯಾಕೊ ಮೀಟರ್, ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯ್ಡ್ ಆಟೋ, ಆರೇಂಜ್ ಕಲರ್ ಆಕ್ಸೆಂಟ್ ಸೌಲಭ್ಯವಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇದರೊಂದಿಗೆ ಈ ಕಾರಿನಲ್ಲಿ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್, ಮ್ಯಾನುವಲ್ ಹೊಂದಾಣಿಕೆಯ ರೇರ್ ವ್ಯೂ ಮಿರರ್, 12ವೊಲ್ಟ್ ಚಾರ್ಜಿಂಗ್ ಸ್ಯಾಕೆಟ್, ಯುಎಸ್‌ಬಿ ಕನೆಕ್ಟ್ ಸಹ ಹೊಂದಿದ್ದು, ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಈ ಕಾರಿನಲ್ಲಿ ಕೀ ಲೆಸ್ ಎಂಟ್ರಿ, ಬ್ಲೂಥೂತ್ ಕನೆಕ್ಟಿವಿಟಿ, ಪವರ್ ವಿಂಡೋ, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಫೀಚರ್ಸ್‌ಗಳನ್ನು ನೀಡಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಎಸ್-ಪ್ರೆಸ್ಸೊ ಕಾರು ಸದ್ಯ ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಆಯ್ಕೆ ಮಾಡಬಹುದಾಗಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಎಸ್-ಪ್ರೆಸ್ಸೊ ಮಾದರಿಯನ್ನು ಸಿಎನ್‍ಜಿ ಆವೃತ್ತಿಯಲ್ಲಿ ಕೂಡ ಬಿಡುಗಡೆಗೊಳಿಸಲಾಗಿದೆ. ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಗರನ್ನು ಸೆಳೆಯುಯಲ್ಲಿ ಯಶಸ್ವಿಯಾಗಿದೆ.


Click it and Unblock the Notifications