ಬಿಡುಗಡೆಯ ಸನಿಹದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಸುಜುಕಿ ಕಂಪನಿಯು ಇತ್ತೀಚೆಗೆ ತನ್ನ ತಾಯ್ನಾಡು ಜಪಾನ್‌ನಲ್ಲಿ ನಾಲ್ಕನೇ ತಲೆಮಾರಿನ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಿತ್ತು. ಮಾರುತಿ ಬ್ರಾಂಡ್ ಅಡಿಯಲ್ಲಿ ಇದು ಭಾರತದಲ್ಲಿ ಹೆಚ್ಚು ಮಾರಾಟವಾಗುವ ಸುಜುಕಿ ಕಾರುಗಳಲ್ಲಿ ಒಂದಾಗಿದೆ.

ಬಿಡುಗಡೆಯ ಸನಿಹದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಮೂರನೇ ತಲೆಮಾರಿನ ಸ್ವಿಫ್ಟ್ ಅನ್ನು 2016ರಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಲಾಯಿತು ಮತ್ತು ಇದನ್ನು 2017 ರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಾಯಿತು. ಮಾರುತಿ ಸ್ವಿಫ್ಟ್ ದೀರ್ಘಕಾಲದವರೆಗೆ ಭಾರತದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ. ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವ ನಿರೀಕ್ಷೆಗಳಿದೆ. ಜನಪ್ರಿಯ ಹ್ಯಾಚ್‌ಬ್ಯಾಕ್ ಸ್ವಿಫ್ ಕಾರನ್ನು ಜಪಾನ್ ದೇಶದಲ್ಲಿ ಮಿಡ್-ಲೈಫ್ ನವೀಕರಣವನ್ನು ಮಾಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಕಾರಿಗಿಂತ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ.

ಬಿಡುಗಡೆಯ ಸನಿಹದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ಸುಜುಕಿ ಸ್ವಿಫ್ಟ್ ಪ್ರಮುಖ ಕ್ರೋಮ್ ಸ್ಟ್ರಿಪ್ ಜೊತೆಗೆ ರೇಡಿಯೇಟರ್ ಗ್ರಿಲ್‌ಗಾಗಿ ಹೊಸ ಹನಿಕ್ಯೂಬ್ ಅನ್ನು ಹೊಂದಿದೆ. ಈ ಹೊಸ ಕಾರಿನ ಮುಂಭಾಗದ ಬಂಪರ್ ನಲ್ಲಿ ಕೂಡ ಕೆಲವು ಬದಲಾವಣೆಗಳನ್ನು ಮಾಡಿದೆ. ಇನ್ನು ಉಳಿದಂತೆ ಕಾರಿನ ಮುಂಭಾಗ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಬಿಡುಗಡೆಯ ಸನಿಹದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ಸುಜುಕಿ ಸ್ವಿಫ್ಟ್ ಕಾರಿನಲ್ಲಿ ಡ್ಯುಯಲ್-ಟೋನ್ ಅಲಾಯ್-ವ್ಹೀಲ್ ಅನ್ನು ಅಳವಡಿಸಲಿದೆ. ಆದರೆ ಭಾರತದಲ್ಲಿ ಬಿಡುಗಡೆಗೊಳಿಸುವ ಹೊಸ ಸ್ವಿಫ್ಟ್ ಕಾರಿನಲ್ಲಿ ಡ್ಯುಯಲ್-ಟೋನ್ ಅಲಾಯ್-ವ್ಹೀಲ್ ಹೊಂದಿರುತ್ತದೆ ಎಂಬುವುದು ಖಚಿತವಾಗಿಲ್ಲ.

ಬಿಡುಗಡೆಯ ಸನಿಹದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನ ಇಂಟಿರಿಯರ್ ನಲ್ಲಿಯು ಕೂಡ ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲ. ಈ ಹ್ಯಾಚ್‌ಬ್ಯಾಕ್ ನಲ್ಲಿ ಹೊಸ ಫ್ರಾಭ್ಯಿಕ್ ಸೀಟ್ ಮತ್ತು ಎಕ್ಸಟ್ ಗಳನ್ನು ಹೊದಿರಲಿದೆ. ಹೊಸ ಸ್ವಿಫ್ ಫೇಸ್‌ಲಿಫ್ಟ್ ಕಾರಿನಲ್ಲಿ ಸ್ಮಾರ್ಟ್‌ಪ್ಲೇ 7.0-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಅನ್ನು ಹೊಂದಿರಲಿದೆ. ಈ ಜನಪ್ರಿಯ ಹ್ಯಾಚ್‌ಬ್ಯಾಕ್‌ನಲ್ಲಿ ಕೆಲವು ಫೀಚರ್ ಗಳನ್ನು ಬದಲಾಯಿಸದೆ ಹಾಗೆ ಮುಂದುವರೆಸಬಹುದು.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಬಿಡುಗಡೆಯ ಸನಿಹದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಜಪಾನ್‌ನಲ್ಲಿ 2020ರ ಸ್ವಿಫ್ಟ್ ಫೇಸ್‌ಲಿಫ್ಟ್ ಫ್ಯೂರ್ ವೈಟ್ ಪರ್ಲ್, ಸೂಪರ್ ಬ್ಲ್ಯಾಕ್ ಪರ್ಲ್, ಸ್ಟಾರ್ ಸಿಲ್ವರ್ ಮೆಟಾಲಿಕ್, ಪ್ರೀಮಿಯಂ ಸಿಲ್ವರ್ ಮೆಟಾಲಿಕ್, ಬರ್ನಿಂಗ್ ರೆಡ್ ಪರ್ಲ್ ಮೆಟಾಲಿಕ್ ಮತ್ತು ಸ್ಪೀಡಿ ಬ್ಲೂ ಮೆಟಾಲಿಕ್ ಸೇರಿದಂತೆ ಆರು ಸಿಂಗಲ್ ಟೋನ್ ಬಣ್ಣಗಳಲ್ಲಿ ಲಭ್ಯವಿದೆ.

ಬಿಡುಗಡೆಯ ಸನಿಹದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಇನ್ನು ಫ್ಲೇಮ್ ಆರೆಂಜ್ ಪರ್ಲ್ ಮೆಟಾಲಿಕ್ & ಬ್ಲ್ಯಾಕ್, ರಶ್ ಯೆಲ್ಲೊ ಮೆಟಾಲಿಕ್ ಸಿಲ್ವರ್ ರೂಫ್ ಎಂಬ ಡ್ಯುಯಲ್-ಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಭಾರತದಲ್ಲಿ ಕೂಡ ಇದೇ ರೀತಿಯ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಬಿಡುಗಡೆಯ ಸನಿಹದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ಸ್ವಿಫ್ಟ್ ಕಾರಿನಲ್ಲಿ ಪ್ರಮುಖ ಬದಲಾವಣೆ ಅಂದರೆ ಎಂಜಿನ್ ಅನ್ನು ಬದಲಾಯಿಸಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೈಬ್ರಿಡ್ ಎಂಜಿನ್ ಹೊಂದಿದೆ. ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಸ್ವಿಫ್ಟ್ ಕಾರಿನಲ್ಲಿ ಆರಂಭದಲ್ಲಿ ನವೀಕರಿಸಿದ ಡಿಜೈರ್ ಕಾಂಪ್ಯಾಕ್ಟ್ ಸೆಡಾನ್‌ನಲ್ಲಿ ಪರಿಚಯಿಸಲಾದ 1.2-ಲೀಟರ್ ಕೆ 12 ಎನ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು.

ಬಿಡುಗಡೆಯ ಸನಿಹದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ಟಾಟಾ ಟಿಯಾಗೊ ಮತ್ತು ಫೋರ್ಡ್ ಫಿಗೊ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ. ಈ ಹೊಸ ಸ್ವಿಫ್ಟ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

Most Read Articles

Kannada
English summary
Maruti Suzuki Swift Facelift With 1.2L DualJet Engine Launch Nears. Read In Kannada.
Story first published: Monday, August 3, 2020, 13:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X