ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಮಾರುತಿ ಸುಜುಕಿ ಬ್ರೆಝಾ ಆವೃತ್ತಿಯ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ್ದು, ಹೊಸ ಕಾರು ಇದೇ ತಿಂಗಳು 15ಕ್ಕೆ ಅಧಿಕೃತವಾಗಿ ಬಿಡುಗಡೆಗೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

ಹೊಸ ಕಾರು ಖರೀದಿಗಾಗಿ ಈಗಾಗಲೇ ರೂ. 25 ಸಾವಿರ ಮುಂಗಡಗದೊಂದಿಗೆ ಬುಕ್ಕಿಂಗ್ ಪ್ರಕ್ರಿಯೆ ಶುರುವಾಗಿದ್ದು, ಹೊಸ ವಿಟಾರಾ ಬ್ರೆಝಾ ಆವೃತ್ತಿಯ ಇದೇ ಮೊದಲ ಬಾರಿಗೆ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗುತ್ತಿದೆ. ಏಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್-6 ನಿಯಮದಿಂದಾಗಿ ಮಾರುತಿ ಸುಜುಕಿ ಸಂಸ್ಥೆಯು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳಿಗೆ ಗುಡ್‌ಬೈ ಹೇಳಿದ್ದು, ವಿಟಾರಾ ಬ್ರೆಝಾ ಮತ್ತು ಎಸ್-ಕ್ರಾಸ್ ಕಾರುಗಳ ಎಂಜಿನ್ ಆಯ್ಕೆ ಮಹತ್ವದ ಬದಲಾವಣೆ ಪರಿಚಯಿಸಿದೆ.

ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

ಗ್ರಾಹಕರ ಬೇಡಿಕೆಯೆಂತೆ ಹೊಸ ಬ್ರೆಝಾ ಪೆಟ್ರೋಲ್ ಆವೃತ್ತಿಯು ಎಲ್ಎಕ್ಸ್ಐ ಎಂಟಿ, ವಿಎಕ್ಸ್ಐ ಎಂಟಿ, ವಿಎಕ್ಸ್ಐ ಎಟಿ, ಜೆಡ್ಎಕ್ಸ್ಐ ಎಂಟಿ, ಜೆಡ್ಎಕ್ಸ್ಐ ಎಟಿ, ಜೆಡ್ಎಕ್ಸ್ಐ ಪ್ಲಸ್ ಎಂಟಿ, ಜೆಡ್ಎಕ್ಸ್ಐ ಪ್ಲಸ್ ಎಟಿ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

2017ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ವಿಟಾರಾ ಬ್ರೆಝಾ ಕಾರು ಆವೃತ್ತಿಯಲ್ಲಿ ಇದುವರೆಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಮಾರಾಟ ಮಾಡುತ್ತಿದ್ದ ಮಾರುತಿ ಸುಜುಕಿ ಇದೀಗ ಮೊದಲ ಬಾರಿಗೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡಿದೆ.

ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

ಈ ಹಿಂದೆ ಫಿಯೆಟ್‌ನಿಂದ ಎರವಲು ಪಡೆಯಲಾಗುತ್ತಿದ್ದ 1.3-ಲೀಟರ್ ಬೂಸ್ಟರ್ ಜೆಟ್ ಡೀಸೆಲ್ ಎಂಜಿನ್‌‌ಗೆ ಗುಡ್‌ಬೈ ಹೇಳಲಾಗಿದ್ದು, ಇದೀಗ ತನ್ನದೇ ನಿರ್ಮಾಣದ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗಾಗಿ ಸಿದ್ದಗೊಳಿಸಿದೆ. ಹೊಸ ವಿಟಾರಾ ಬ್ರೆಝಾದಲ್ಲಿ ಬಳಕೆ ಮಾಡಿರುವ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್‌ ಮಾದರಿಯು ಈಗಾಗಲೇ ಎರ್ಟಿಗಾ ಎಕ್ಸ್ಎಲ್6 ಮತ್ತು ಸಿಯಾಜ್ ಕಾರುಗಳಲ್ಲಿ ಬಳಕೆ ಮಾಡಲಾಗಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಗಳಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದೆ.

ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

ಈ ಮೂಲಕ ಹೊಸ ಪೆಟ್ರೋಲ್ ಎಂಜಿನ್ ಮಾದರಿಯು 105-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 4-ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

ಜೊತೆಗೆ ಹೊಸ ಪೆಟ್ರೋಲ್ ಕಾರಿನಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಆವೃತ್ತಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಮುಂಭಾಗ ಡಿಸೈನ್‌ನಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ.

ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

ಹೊಸ ಕಾರಿನ ಅಂಚುಗಳಲ್ಲಿ ಶಾರ್ಪ್ ಡಿಸೈನ್ ನೀಡಲಾಗಿದ್ದು, ಮರುವಿನ್ಯಾಸಗೊಳಿಸಲಾದ ಕ್ರೋಮ್, ಹೆಡ್‌ಲ್ಯಾಂಪ್ ಕ್ಲಸ್ಟರ್, ದೊಡ್ಡದಾದ ಡಿಆರ್‌ಎಲ್ಎಸ್‌ಗಳು ಮತ್ತು ಹೊಸ ಮಾದರಿಯ ಅಲಾಯ್ ವೀಲ್ಹ್ ಸೌಲಭ್ಯವು ಪೆಟ್ರೋಲ್ ಎಂಜಿನ್ ಬ್ರೆಝಾ ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಿದೆ.

ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಬ್ರೆಝಾ ಪೆಟ್ರೋಲ್ ಕಾರಿನಲ್ಲಿ ಈ ಬಾರಿ ಮೂರು ಹೊಸ ಡ್ಯುಯಲ್ ಟೋನ್ ಬಣ್ಣದೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಸಿಜ್ಲಿಂಗ್ ರೆಡ್ ಜೊತೆ ಮಿಡ್‌ನೈಟ್ ಬ್ಲ್ಯಾಕ್ ರೂಫ್, ಟಾರ್ಕ್ ಬ್ಲ್ಯೂ ಜೊತೆ ಮಿಡ್‌ನೈಟ್ ಬ್ಲ್ಯಾಕ್ ರೂಫ್ ಮತ್ತು ಗ್ರಾನೈಟ್ ಗ್ರೇ ಜೊತೆ ಅಟಮ್ ಆರೇಂಜ್ ಡ್ಯುಯಲ್ ಟೋನ್ ಖರೀದಿಸಬಹುದಾಗಿದೆ.

ಮಾರುತಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ಮಾಹಿತಿ ಬಹಿರಂಗ

ಅಂದಾಜು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಸದ್ಯ ಮಾರುಕಟ್ಟೆಯಲ್ಲಿ ಡೀಸೆಲ್ ಆವೃತ್ತಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಬ್ರೆಝಾ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 7.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು 10.73 ಲಕ್ಷ ಬೆಲೆ ಹೊಂದಿದ್ದು, ಪೆಟ್ರೋಲ್ ಎಂಜಿನ್ ಹೊಂದಿರುವ ಬ್ರೆಝಾ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ರೂ.11.50 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

Most Read Articles

Kannada
English summary
Maruti Suzuki Vitara Brezza BS6 Petrol launch on February 15. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X