ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಬಿಡುಗಡೆಗೊಂಡಿದ್ದ ಮಾರುತಿ ಸುಜುಕಿ ಹೊಸ ವಿಟಾರಾ ಬ್ರೆಝಾ ಪೆಟ್ರೋಲ್ ಕಾರು ಮಾದರಿಯು ಅತಿ ಕಡಿಮೆ ಅವಧಿಯಲ್ಲಿ 25 ಸಾವಿರ ಬುಕ್ಕಿಂಗ್ ಪಡೆದುಕೊಂಡಿದ್ದು, ಸ್ಮಾರ್ಟ್ ಹೈಬ್ರಿಡ್ ಮಾದರಿಗೆ ಹೆಚ್ಚು ಬೇಡಿಕೆ ದಾಖಲಾಗಿದೆ.

ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ವಿಧಿಸಿದ್ದರಿಂದ ಹೊಸ ವಿಟಾರಾ ಬ್ರೆಝಾ ಕಾರಿನ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಮಾರುತಿ ಸುಜುಕಿ ಕಂಪನಿಯು ಇದೀಗ ಹೊಸ ಸುರಕ್ಷಾ ಮಾರ್ಗಸೂಚಿ ಅನ್ವಯ ಆನ್‌ಲೈನ್ ಕಾರು ಪ್ರಕ್ರಿಯೆಗೆ ಚಾಲನೆ ನೀಡಿದೆ. ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಠ ಪ್ರಮಾಣದ ಸುರಕ್ಷಾ ಸೌಲಭ್ಯಗಳನ್ನು ಕೈಗೊಳ್ಳಲಾಗಿದ್ದು, ಹೊಸ ಕಾರುಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ.

ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

ಇನ್ನು ಮಾರುತಿ ಸುಜುಕಿ ಕಂಪನಿಯು ಬಿಎಸ್-6 ಎಮಿಷನ್ ಪ್ರಕಾರ ತನ್ನ ಪ್ರಮುಖ ಕಾರುಗಳ ಮಾರಾಟದಲ್ಲಿ ಹಲವಾರು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿದ್ದು, ಮೊದಲ ಬಾರಿಗೆ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಪೆಟ್ರೋಲ್ ಮಾದರಿಯನ್ನು ಹೊರತಂದಿದೆ.

ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

ಬಿಎಸ್-6 ನಿಯಮ ಜಾರಿಯಿಂದಾಗಿ ಹಲವು ಕಾರು ಕಂಪನಿಗಳು ವಿವಿಧ ಮಾದರಿಯ ಕಾರುಗಳಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ್ದು, ಮಾರುತಿ ಸುಜುಕಿ ಕೂಡಾ ಬ್ರೆಝಾ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಪೆಟ್ರೋಲ್ ಎಂಜಿನ್ ಅನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

ಈ ಹಿಂದೆ ನೀಡಲಾಗುತ್ತಿದ್ದ 1.3-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದ ಮಾರುತಿ ಸುಜುಕಿ ನಿರ್ಮಾಣದ ಬಹುತೇಕ ಕಾರುಗಳು ಇದೀಗ ಸ್ಥಗಿತಗೊಂಡಿದ್ದು, ಡೀಸೆಲ್ ಆಯ್ಕೆಯ ಬದಲಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಆಯ್ಕೆಯನ್ನು ಹೆಚ್ಚಿಸಲಾಗುತ್ತಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆಯಿಂದಾಗಿ ಎಂಜಿನ್ ಸ್ಟಾರ್ಟ್ ಸಂದರ್ಭದಲ್ಲಿ ಎಲೆಕ್ಟ್ರಿಕ್ ಮೋಟಾರ್ ಬಳಕೆಯಾಗಲಿದ್ದು, ಎಂಜಿನ್ ಚಾಲನೆ ನಂತರ ಅದು ಪೆಟ್ರೋಲ್ ಎಂಜಿನ್ ಸಂಪರ್ಕವನ್ನು ಪಡೆದುಕೊಳ್ಳುತ್ತದೆ.

ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

ಈ ವೇಳೆ ಎಂಜಿನ್ ಸ್ಟಾರ್ಟ್ ಸಂದರ್ಭದಲ್ಲಿನ ಇಂಧನ ವ್ಯಯ ತಪ್ಪಿಸುವ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವು ಈಗಾಗಲೇ ವಿಟಾರಾ ಬ್ರೆಝಾ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯಲ್ಲಿ ಜೋಡಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಮ್ಯಾನುವಲ್ ಮಾದರಿಯಲ್ಲೂ ಹೊಸ ತಂತ್ರಜ್ಞಾನ ಜೋಡಣೆ ಮಾಡಲಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

ಸದ್ಯ ಮಾರುತಿ ಸುಜುಕಿ ನಿರ್ಮಾಣದ ಬಹುತೇಕ ಕಾರುಗಳಲ್ಲಿ SHVS(ಸ್ಮಾರ್ಟ್ ಹೈಬ್ರಿಡ್ ವೆಹಿಕಲ್ ಬೈ ಸುಜುಕಿ) ತಂತ್ರಜ್ಞಾನವು ಬಳಕೆ ಮಾಡಲಾಗುತ್ತಿದ್ದು, ಆಟೋಮ್ಯಾಟಿಕ್ ಆವೃತ್ತಿಗಳ ನಂತರ ಇದೀಗ ಮ್ಯಾನುವಲ್ ಆವೃತ್ತಿಗಳಲ್ಲೂ ಜೋಡಣೆ ಮಾಡುತ್ತಿರುವುದು ಮಹತ್ವದ ಬದಲಾವಣೆ ಕಾರಣವಾಗಲಿದೆ.

ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

ಹೊಸ ವಿಟಾರಾ ಬ್ರೆಝಾ ಕಾರಿನಲ್ಲಿ ಅಳವಡಿಸಲು ಉದ್ದೇಶಿಸಲಾಗಿರುವ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದಿಂದಾಗಿ ಮೈಲೇಜ್ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆಯಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 17.03 ಕಿ.ಮೀ ಮೈಲೇಜ್ ನೀಡುತ್ತಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಹೈಬ್ರಿಡ್ ಎಂಜಿನ್ ಪ್ರೇರಿತ ವಿಟಾರಾ ಬ್ರೆಝಾ ಕಾರಿಗೆ ಭಾರೀ ಡಿಮ್ಯಾಂಡ್

ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಜೋಡಣೆಯ ನಂತರ ಪೆಟ್ರೋಲ್ ಮ್ಯಾನುವಲ್ ಆವೃತ್ತಿಯ ಮೈಲೇಜ್ ಪ್ರಮಾಣದಲ್ಲಿ 18.76ಕಿ.ಮೀ ಹೆಚ್ಚಳವಾಗಲಿದ್ದು, SHVS ಹೈಬ್ರಿಡ್ ತಂತ್ರಜ್ಞಾನವು 12ವಿ ಹೈಬ್ರಿಡ್ ಸಿಸ್ಟಂ ಜೊತೆ 1.76 ಕೆವಿ ಎಲೆಕ್ಟ್ರಿಕ್ ಮೋಟಾರ್ ಪಡೆದುಕೊಳ್ಳಲಿದೆ. ಇನ್ನು ಹೊಸ ವಿಟಾರಾ ಬ್ರೆಝಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.34 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.40 ಲಕ್ಷ ಬೆಲೆ ಪಡೆದುಕೊಂಡಿದೆ.

Most Read Articles

Kannada
English summary
New Maruti Suzuki Vitara Brezza cross 25000 bookings details. Read in Kannada.
Story first published: Sunday, May 17, 2020, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more