Just In
- 13 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 14 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 14 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 16 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೆ ಸಿದ್ದವಾಗಿರುವ ಮಾರುತಿ ಹೊಸ ಬ್ರೆಝಾ ಖರೀದಿಗೆ ಬುಕ್ಕಿಂಗ್ ಆರಂಭ
ಮಾರುತಿ ಸುಜುಕಿ ಸಂಸ್ಥೆಯು ಮೊದಲ ಬಾರಿಗೆ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್ಯುವಿ ಆವೃತ್ತಿಯನ್ನು ಪೆಟ್ರೋಲ್ ಮಾದರಿಯಲ್ಲಿ ಪರಿಚಯಿಸುತ್ತಿದ್ದು, ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿರುವ ಹೊಸ ಕಾರು ಖರೀದಿಗಾಗಿ ರೂ. 25 ಸಾವಿರ ಮುಂಗಡಗದೊಂದಿಗೆ ಬುಕ್ಕಿಂಗ್ ಪ್ರಕ್ರಿಯೆ ಶುರುವಾಗಿದೆ.
ಏಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್-6 ನಿಯಮದಿಂದಾಗಿ ಮಾರುತಿ ಸುಜುಕಿ ಸಂಸ್ಥೆಯು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳಿಗೆ ಗುಡ್ಬೈ ಹೇಳಿದ್ದು, ಇದೀಗ ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್ಯುವಿ ಆವೃತ್ತಿಯಾಗಿರುವ ವಿಟಾರಾ ಬ್ರೆಝಾ ಮಾದರಿಯನ್ನು ಪೆಟ್ರೋಲ್ ಎಂಜಿನ್ನೊಂದಿಗೆ ದೆಹಲಿ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಳಿಸಿ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ.
ಗ್ರಾಹಕರ ಬೇಡಿಕೆಯೆಂತೆ ಹೊಸ ಬ್ರೆಝಾ ಪೆಟ್ರೋಲ್ ಆವೃತ್ತಿಯು ಎಲ್ಎಕ್ಸ್ಐ ಎಂಟಿ, ವಿಎಕ್ಸ್ಐ ಎಂಟಿ, ವಿಎಕ್ಸ್ಐ ಎಟಿ, ಜೆಡ್ಎಕ್ಸ್ಐ ಎಂಟಿ, ಜೆಡ್ಎಕ್ಸ್ಐ ಎಟಿ, ಜೆಡ್ಎಕ್ಸ್ಐ ಪ್ಲಸ್ ಎಂಟಿ, ಜೆಡ್ಎಕ್ಸ್ಐ ಪ್ಲಸ್ ಎಟಿ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.
2017ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ವಿಟಾರಾ ಬ್ರೆಝಾ ಕಾರು ಆವೃತ್ತಿಯಲ್ಲಿ ಇದುವರೆಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಮಾರಾಟ ಮಾಡುತ್ತಿದ್ದ ಮಾರುತಿ ಸುಜುಕಿ ಇದೀಗ ಮೊದಲ ಬಾರಿಗೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡಿದೆ.
ಈ ಹಿಂದೆ ಫಿಯೆಟ್ನಿಂದ ಎರವಲು ಪಡೆಯಲಾಗುತ್ತಿದ್ದ 1.3-ಲೀಟರ್ ಬೂಸ್ಟರ್ ಜೆಟ್ ಡೀಸೆಲ್ ಎಂಜಿನ್ಗೆ ಗುಡ್ಬೈ ಹೇಳಲಾಗಿದ್ದು, ಇದೀಗ ತನ್ನದೇ ನಿರ್ಮಾಣದ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ನೊಂದಿಗೆ ಬಿಡುಗಡೆಗಾಗಿ ಸಿದ್ದಗೊಳಿಸಿದೆ. ಹೊಸ ವಿಟಾರಾ ಬ್ರೆಝಾದಲ್ಲಿ ಬಳಕೆ ಮಾಡಿರುವ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ ಮಾದರಿಯು ಈಗಾಗಲೇ ಎರ್ಟಿಗಾ ಎಕ್ಸ್ಎಲ್6 ಮತ್ತು ಸಿಯಾಜ್ ಕಾರುಗಳಲ್ಲಿ ಬಳಕೆ ಮಾಡಲಾಗಿದ್ದು, ಆಟೋಮ್ಯಾಟಿಕ್ ಗೇರ್ಬಾಕ್ಸ್ ಆವೃತ್ತಿಗಳಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದೆ.
ಈ ಮೂಲಕ ಹೊಸ ಪೆಟ್ರೋಲ್ ಎಂಜಿನ್ ಮಾದರಿಯು 105-ಬಿಎಚ್ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 4-ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.
ಜೊತೆಗೆ ಹೊಸ ಪೆಟ್ರೋಲ್ ಕಾರಿನಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಆವೃತ್ತಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ನೀಡಲಾಗಿದ್ದು, ಮುಂಭಾಗ ಡಿಸೈನ್ನಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ.
ಹೊಸ ಕಾರಿನ ಅಂಚುಗಳಲ್ಲಿ ಶಾರ್ಪ್ ಡಿಸೈನ್ ನೀಡಲಾಗಿದ್ದು, ಮರುವಿನ್ಯಾಸಗೊಳಿಸಲಾದ ಕ್ರೋಮ್, ಹೆಡ್ಲ್ಯಾಂಪ್ ಕ್ಲಸ್ಟರ್, ದೊಡ್ಡದಾದ ಡಿಆರ್ಎಲ್ಎಸ್ಗಳು ಮತ್ತು ಹೊಸ ಮಾದರಿಯ ಅಲಾಯ್ ವೀಲ್ಹ್ ಸೌಲಭ್ಯವು ಪೆಟ್ರೋಲ್ ಎಂಜಿನ್ ಬ್ರೆಝಾ ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಿದೆ.
ಹಾಗೆಯೇ ಹೊಸ ಬ್ರೆಝಾ ಪೆಟ್ರೋಲ್ ಕಾರಿನಲ್ಲಿ ಈ ಬಾರಿ ಮೂರು ಹೊಸ ಡ್ಯುಯಲ್ ಟೋನ್ ಬಣ್ಣದೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಸಿಜ್ಲಿಂಗ್ ರೆಡ್ ಜೊತೆ ಮಿಡ್ನೈಟ್ ಬ್ಲ್ಯಾಕ್ ರೂಫ್, ಟಾರ್ಕ್ ಬ್ಲ್ಯೂ ಜೊತೆ ಮಿಡ್ನೈಟ್ ಬ್ಲ್ಯಾಕ್ ರೂಫ್ ಮತ್ತು ಗ್ರಾನೈಟ್ ಗ್ರೇ ಜೊತೆ ಅಟಮ್ ಆರೇಂಜ್ ಡ್ಯುಯಲ್ ಟೋನ್ ಖರೀದಿಸಬಹುದಾಗಿದೆ.
ಅಂದಾಜು ಬೆಲೆ(ಎಕ್ಸ್ಶೋರೂಂ ಪ್ರಕಾರ)
ಸದ್ಯ ಮಾರುಕಟ್ಟೆಯಲ್ಲಿ ಡೀಸೆಲ್ ಆವೃತ್ತಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಬ್ರೆಝಾ ಕಾರು ಎಕ್ಸ್ಶೋರೂಂ ಪ್ರಕಾರ ರೂ. 7.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು 10.73 ಲಕ್ಷ ಬೆಲೆ ಹೊಂದಿದ್ದು, ಪೆಟ್ರೋಲ್ ಎಂಜಿನ್ ಹೊಂದಿರುವ ಬ್ರೆಝಾ ಮಾದರಿಯು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ರೂ.11.50 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.