ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿ

ಮಾರುತಿ ಸುಜುಕಿ ಕಂಪನಿಯು ತಮ್ಮ ವ್ಯಾಗನ್ಆರ್ ಹ್ಯಾಚ್‍ಬ್ಯಾಕ್ ಅನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ಖಚಿತಪಡಿಸಿದೆ. ದೇಶಿಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ಕಾರುಗಳಲ್ಲಿ ವ್ಯಾಗನ್‍ಆರ್ ಒಂದಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿ

ಹೊಸ ಮಾರುತಿ ವ್ಯಾಗನ್ಆರ್ ಪ್ರೊಡಕ್ಷನ್-ಸ್ಪೆಕ್ ಆವೃತ್ತಿಯು ಭಾರತದಲ್ಲಿ ಮತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದೆ. ಈ ಹೊಸ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಗಾಡಿವಾಡಿ ಬಹಿರಂಗಪಡಿಸಿದೆ, ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರದಲ್ಲಿ ಸಂಪೂರ್ಣವಾಗಿ ಕಪ್ಪು ಬಣ್ಣದಿಂದ ಮರೆಮಾಚಲಾಗಿದೆ. ಇದರಿಂದ ಈ ಕಾರಿನ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಿಲ್ಲ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿ

ಹೊಸ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿಯು ಮೂರನೇ ತಲೆಮಾರಿನ ಹ್ಯಾಚ್‍ಬ್ಯಾಕ್ ಅನ್ನು ಆಧರಿಸಿದೆ ಎಂದು ಸ್ಪೈ ಚಿತ್ರಗಳಿಂದ ವ್ಯಕ್ತವಾಗಿದೆ. ಈ ಮೂರನೇ ತಲೆಮಾರಿನ ವ್ಯಾಗನ್ಆರ್ ಹ್ಯಾಚ್‍ಬ್ಯಾಕ್ ಅನ್ನು ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಾಗಿತ್ತು.

MOST READ: ಮೇಡ್ ಇನ್ ಇಂಡಿಯಾ ಮಾದರಿಯಾಗಿ ಬಿಡುಗಡೆಯಾಗಲಿದೆ ಮಾರುತಿ ಜಿಮ್ನಿ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿ

ಈ ಹೊಸ ಕಾರಿನ ಮುಂಭಾಗದಲ್ಲಿ ಕೆಲವು ನವೀಕರಣಗಳನ್ನು ನಡೆಸಲಾಗಿದೆ. ಈ ಹ್ಯಾಚ್‍ಬ್ಯಾಕ್ ನಲ್ಲಿ ಹೊಸ ಸ್ಪ್ಲಿಟ್ ಹೆಡ್‌ಲ್ಯಾಂಪ್ ವಿನ್ಯಾಸವನ್ನು ಒಳಗೊಂಡಿದ್ದು, ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್(ಡಿಆರ್‌ಎಲ್) ಗಳನ್ನು ಮೇಲೆ ಇರಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿ

ಇದರಲ್ಲಿ ಮುಖ್ಯವಾಗಿ ಹೆಡ್‌ಲ್ಯಾಂಪ್ ಕ್ಲಸ್ಟರ್ ಅನ್ನು ಟೈಯೆಗಲ್ ಹೌಸಿಂಗ್ ನಲ್ಲಿ ಇರಿಸಲಾಗಿದೆ. ಮುಂಭಾಗದ ಬಂಪರ್ ಕೆಳಭಾಗದಲ್ಲಿ ಫಾಂಗ್ ಲ್ಯಾಂಪ್ ಅನ್ನು ಅಳವಡಿಸಲಾಗಿದೆ. ಅತ್ಯಂತ ಗಮನಾರ್ಹವಾದ ವ್ಯತ್ಯಾಸವೆಂದರೆ ಗ್ರಿಲ್ ವಿನ್ಯಾಸದಲ್ಲಿ ಬದಲಾವಣೆ ಮಾಡಲಾಗಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿ

ಸೈಡ್ ಮತ್ತು ಹಿಂಭಾಗದ ಪ್ರೊಫೈಲ್ ಪ್ರಸ್ತುತ ಮಾದರಿಗೆ ಹೋಲುತ್ತದೆ. ಈ ಟಾಲ್ ಬಾಯ್ ಹ್ಯಾಚ್‍ಬ್ಯಾಕ್ ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ. ಈ ಹೊಸ ವ್ಯಾಗನ್ಆರ್ ಇಗ್ನಿಸ್ ಮಾದರಿಯಲ್ಲಿರುವಂತಹ 15 ಇಂಚಿನ ಬ್ಲ್ಯಾಕ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿ

ಮಾರುತಿ ಸುಜುಕಿ ಕಂಪನಿಯು ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿಯ ಹೆಚ್ಚಿನ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಈ ಎಲೆಕ್ಟ್ರಿಕ್ ಆವೃತ್ತಿಯು ಉತ್ತಮ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸುತ್ತೇವೆ.

MOST READ: ಹೊಸ ಸ್ಕೋಡಾ ವಿಷನ್ ಇನ್ ಎಸ್‍‍‍ಯುವಿಯ ಪೇಟೆಂಟ್ ಚಿತ್ರ ಬಹಿರಂಗ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿ

ಸ್ಟ್ಯಾಂಡರ್ಡ್ ಚಾರ್ಜಿಂಗ್ ಬ್ಯಾಟರಿಗಳನ್ನು ಸಂಪೂರ್ಣವಾಗಿ ಚಾರ್ಜ್ ಮಾಡಲು ಏಳು-ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಲಾಗಿದ್ದರೆ, ವೇಗದ ಚಾರ್ಜಿಂಗ್ ಒಂದು ಗಂಟೆಯ ಸಮಯದಲ್ಲಿ 0 - 80 ಶೇಕಡಾ ಚಾರ್ಜ್ ಮಾಡಲು ಸಮರ್ಥವಾಗಿರುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿ

ಮಾರುತಿ ಸುಜುಕಿ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿಯು ಭಾರತೀಯ ಮಾರುಕಟ್ಟೆಯಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಈ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿಯನ್ನು ಮುಂದಿನ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

Article Published On: Tuesday, June 9, 2020, 14:10 [IST]
English summary
Maruti WagonR Electric Production-Spec Model Spotted Testing Ahead Of Unveil. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+