ಹೊಸ ಜನಪ್ರಿಯ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾದ ಮರ್ಸಿಡಿಸ್ ಬೆಂಝ್
ಜರ್ಮನಿಯ ಐಷಾರಾಮಿ ಕಾರು ತಯಾರಕ ಸಂಸ್ಥೆಯಾದ ಮರ್ಸಿಡಿಸ್ ಬೆಂಝ್ ತನ್ನ ಹೊಸ ಎ-ಕ್ಲಾಸ್ ಲಿಮೋಸಿನ್ ಸೆಡಾನ್ ಮತ್ತು ಜಿಎಲ್ಎ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ವರ್ಷದ ಅಂತ್ಯದಲ್ಲಿ ಹೊಸ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಸೆಡಾನ್ ಮತ್ತು ಜಿಎಲ್ಎ ಎಸ್‍ಯುವಿಯು ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.

ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಎ-ಕ್ಲಾಸ್ ಲಿಮೋಸಿನ್ ಕಾರನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಮರ್ಸಿಡಿಸ್ ಬೆಂಝ್ ತನ್ನ ಹೊಸ ಎ-ಕ್ಲಾಸ್ ಲಿಮೋಸಿನ್ ಕಾರಿನ ಮಾಹಿತಿಯನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಹಿರಂಗಪಡಿಸಲಾಗಿದೆ. ಮರ್ಸಿಡಿಸ್ ಬೆಂಝ್ ತನ್ನ ಹೊಸ ಎ-ಕ್ಲಾಸ್ ಲಿಮೋಸಿನ್ ಕಾರಿನ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಬಿಸಲಾಗಿದೆ. ಈ ಹೊಸ ಎ-ಕ್ಲಾಸ್ ಲಿಮೋಸಿನ್ ಕಾರಿಗೆ ರೂ.2 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಈ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರು ಆಕರ್ಷಕ ಲುಕ್ ಅನ್ನು ಹೊಂದಿದೆ. ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಅನ್ನು ಅಳವಡಿಸಿದೆ. ಇಂಟಿಗ್ರೇಟೆಡ್ ಡಿಆರ್‍ಎಲ್‍ಗಳನ್ನು ಹೊಂದಿರುವ ಎಲ್‍ಇಡಿ ಹೆಡ್‍ಲ್ಯಾಂಪ್‍ಗಳನ್ನು ಹೊಂದಿದೆ. ಐಷಾರಾಮಿ ಸೆಡಾನ್ ಎ-ಕ್ಲಾಸ್‍ನಲ್ಲಿ ದೊಡ್ಡ ರೂಫ್ ಅನ್ನು ಹೊಂದಿದೆ. ದೊಡ್ಡದಾದ ಸ್ವೆಫ್ಟ್ ಲೈಟ್ ಮತ್ತು ಹಿಂಭಾಗದಲ್ಲಿ ಆಕರ್ಷಕ ಬಂಪರ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಕಾರಿನಲ್ಲಿ 2.0 ಲೀಟರ್, ನಾಲ್ಕು ಸಿಲಿಂಡರ್, ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 306 ಬಿಹೆಚ್‍ಪಿ ಪವರ್ ಮತ್ತು 400 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಇನ್ನು ಈ ಕಾರಿನಲ್ಲಿ 4 ಮ್ಯಾಟಿಕ್ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಕೂಡ ಅಳವಡಿಸಲಾಗಿದೆ. ಈ ಎಎಂಜಿ ಎ35 ಕಾರು ಕೇವಲ 4.8 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಕಾರು ಎಂಎಫ್ಎ 2 ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಈ ಕಾರುಗಳನ್ನು ನಾಕ್ ಡೌನ್(ಸಿಕೆಡಿ) ಮೂಲಕ ಭಾರತಕ್ಕೆ ತರಲಾಗುತ್ತದೆ.
MOST READ: ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಆಡಿ ಆರ್‍ಎಸ್ 7 ಕಾರು

ಇನ್ನು ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸ ಜಿಎಲ್‍ಎ ಎಸ್‍ಯುವಿಯ ಹೆಸರನ್ನು ಸೇರಿಸಲಾಗಿದೆ. ಅಲ್ಲದೇ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಂಡ ಜಿಎಲ್‍ಎ ಎಸ್‍ಯುವಿಯ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಿದೆ.

ಎಂಟ್ರಿ ಲೆವೆಲ್ ಜಿಎಲ್‍ಎ ಎಸ್‍ಯುವಿಯು ಹೊಸ ಎಂಫ್‍ಎ-2 ಪ್ಲಾಟ್‍ಫಾರಂ ಅನ್ನು ಆಧರಿಸಿದೆ. ಈ ಹೊಸ ಜಿಎಲ್‍ಎ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.43 ಲಕ್ಷಗಳಾಗಿದೆ ಎಂದು ನಿರೀಕ್ಷಿಸುತ್ತೇವೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಮರ್ಸಿಡಿಸ್‍ನ ಇತರ ಕಾಂಪ್ಯಾಕ್ಟ್ ಮಾದರಿಗಳಾದ ಹೊಸ ಎ-ಕ್ಲಾಸ್, ಸಿಎಲ್‍ಎ ಮತ್ತು ಜಿಎಲ್‍ಬಿ ಎಸ್‍ಯುವಿಗಳು ಕೂಡ ಇದೇ ಪ್ಲಾಟ್‍ಫಾರ್ಮ್ ಆಧರಿಸಿ ತಯಾರಾಗಿವೆ. ಹೊಸ ಜಿಎಲ್‍ಎ ಎಸ್‍ಯುವಿ, ಕ್ರಾಸ್‌ಒವರ್ ಮಾದರಿಯ ವಿನ್ಯಾಸವನ್ನು ಹೊಂದಿದೆ.

ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಎ-ಕ್ಲಾಸ್ ಸೆಡಾನ್ ಮತ್ತು ಹೊಸ ಜಿಎಲ್ಎ ಎಸ್‍ಯುವಿಯನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಮರ್ಸಿಡಿಸ್ ಬೆಂಝ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ಜನಪ್ರಿಯ ಕಾರುಗಳನ್ನು ಬಿಡುಗಡೆಗೊಳಿಸುತ್ತಿವೆ


Click it and Unblock the Notifications