Just In
- 12 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
- 14 hrs ago Air Taxi: ಬೆಂಗಳೂರು ಸೇರಿ ಈ ನಗರಗಳಲ್ಲಿ ಏರ್ ಟ್ಯಾಕ್ಸಿ.. ಆಕಾಶದಲ್ಲೇ ಆಫೀಸ್ಗೆ ಹೋಗಬಹುದು, ಕಡಿಮೆ ಖರ್ಚು!
- 14 hrs ago ಐಷಾರಾಮಿ ಸ್ಪೋರ್ಟ್ಸ್ ಕಾರಿನಂತೆ ಮಾರ್ಪಾಡಾದ ಬಡವರ ಮಾರುತಿ ಆಲ್ಟೋ ಕಾರಿಗೆ ನೆಟ್ಟಿಗರು ಫಿದಾ
- 15 hrs ago ಈ ಕಾರಿನ ವಿಡಿಯೋ ಬಿಡುಗಡೆ ಮಾಡಿದ ಟೊಯೋಟಾ: ಫ್ರಾಂಕ್ಸ್ ಅಭಿಮಾನಿಗಳಲ್ಲಿ ಮನೆಮಾಡಿದ ಆತಂಕ!
Don't Miss!
- Movies ಈ ಬಾಲಿವುಡ್ ನಟ-ನಟಿಯರಿಗೆ ಭಾರತದಲ್ಲಿ ಮತ ಚಲಾಯಿಸುವ ಹಕ್ಕು ಇಲ್ಲ!
- News Gold Price: ಚಿನ್ನದ ದರ ಇಳಿಕೆ: ಇಂದಿನ ಬೆಳ್ಳಿ-ಬಂಗಾರದ ಬೆಲೆ ವಿವರ ತಿಳಿಯಿರಿ
- Sports ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಕ್ರಮಾಂಕ ನೀಡಿದ ಆರೋನ್ ಫಿಂಚ್
- Finance ಮುಂಬೈನ ಅಲಿಬಾಗ್ನಲ್ಲಿ 10,000 ಚದರ ಅಡಿ ಜಾಗ ಖರೀದಿಸಿದ ಅಮಿತಾಭ್ ಬಚ್ಚನ್
- Lifestyle ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?
- Technology ಲಾವಾ ಅಗ್ನಿ 2 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ; ಗ್ರಾಹಕರಿಗೆ ಖುಷಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಕಾರು
ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಎ-ಕ್ಲಾಸ್ ಕಾರನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಮರ್ಸಿಡಿಸ್ ಬೆಂಝ್ ತನ್ನ ಹೊಸ ಎ-ಕ್ಲಾಸ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.
ಕರೋನಾ ಸೋಂಕಿನ ಭೀತಿಯಿಂದಾಗಿ ಎ-ಕ್ಲಾಸ್ ಲಿಮೋಸಿನ್ ಕಾರಿನ ಬಿಡುಗಡೆ ವಿಳಂಬವಾಗಿದೆ. ಕೆಲವು ವರದಿಗಳ ಪ್ರಕಾರ ಈ ವರ್ಷದಲ್ಲೇ ಭಾರತದಲ್ಲಿ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರು ಬಿಡುಗಡೆಯಾಗಲಿದೆ. ಮರ್ಸಿಡಿಸ್ ಬೆಂಝ್ ತನ್ನ ಹೊಸ ಎ-ಕ್ಲಾಸ್ ಲಿಮೋಸಿನ್ ಕಾರಿನ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಬಿಸಲಾಗಿದೆ. ಈ ಹೊಸ ಎ-ಕ್ಲಾಸ್ ಲಿಮೋಸಿನ್ ಕಾರಿಗೆ ರೂ.2 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಈ ಬೆಂಝ್ ಎ-ಕ್ಲಾಸ್ ಕಾರು ಆಕರ್ಷಕ ಲುಕ್ ಅನ್ನು ಹೊಂದಿದೆ.
ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಅನ್ನು ಅಳವಡಿಸಿದೆ. ಇಂಟಿಗ್ರೇಟೆಡ್ ಡಿಆರ್ಎಲ್ಗಳನ್ನು ಹೊಂದಿರುವ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಐಷಾರಾಮಿ ಸೆಡಾನ್ ಎ-ಕ್ಲಾಸ್ನಲ್ಲಿ ದೊಡ್ಡ ರೂಫ್ ಅನ್ನು ಹೊಂದಿದೆ. ದೊಡ್ಡದಾದ ಸ್ವೆಫ್ಟ್ ಲೈಟ್ ಮತ್ತು ಹಿಂಭಾಗದಲ್ಲಿ ಆಕರ್ಷಕ ಬಂಪರ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ವಿಶೇಷವಾಗಿ ಎ-ಕ್ಲಾಸ್ ಕಾರಿನಲ್ಲಿ ಟ್ವೀಕ್ಡ್ ಫ್ರಂಟ್ ಗ್ರಿಲ್ ಮತ್ತು ಬಂಪರ್, ಸ್ಪೋರ್ಟಿಯರ್ ಅಲಾಯ್ ವ್ಹೀಲ್, ಆಗ್ರೆಸಿವ್ ಹಿಂಭಾಗದ ಡಿಫ್ಯೂಸರ್ ಮತ್ತು ವೃತ್ತಕಾರದ ಡ್ಯುಯಲ್ ಟಿಪ್ ಎಕ್ಸಾಸ್ಟ್ ಪೈಪ್ಗಳನ್ನು ಒಳಗೊಂಡಿದೆ.
ಎ-ಕ್ಲಾಸ್ ಕಾರಿನ ಇಂಟಿರಿಯರ್ನಲ್ಲಿ ದೊಡ್ಡ ಸಲೂನ್ಗಳನ್ನು ಹೊಂದಿದೆ. ಮರ್ಸಿಡಿಸ್ ಬೆಂಝ್ ಎಂಬಿಯುಎಕ್ಸ್ ಸಿಸ್ಟಂ, ವಾಯ್ಸ್ ಕಂಟ್ರೋಲ್ ಮತ್ತು ಫ್ರೀಸ್ಟ್ಯಾಂಡಿಂಗ್ ಇನ್ಫೋಟೇನ್ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇನ್ಫೋಟೇನ್ಮೆಂಟ್ ಡಿಸ್ಪ್ಲೇ ಸುತ್ತಲೂ ಮೂರು ವೃತ್ತಾಕಾರದ ಕ್ರೋಮ್ ಮತ್ತು ಕ್ರೋಮ್ ಕವರ್ ಆಗಿರುವ ಸ್ಟೀಯರಿಂಗ್ ನಿಂದ ಕಾರಿನ ಇಂಟಿರಿಯರ್ ಐಷಾರಾಮಿ ಲುಕ್ ಅನ್ನು ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಸ್ಟ್ಯಾಂಡರ್ಡ್ ಎ-ಕ್ಲಾಸ್ ಸೆಡಾನ್ ಶೀಘ್ರದಲ್ಲೇ ಅನುಸರಿಸುತ್ತದೆ ಮತ್ತು ಇದು 2.0-ಲೀಟರ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ನಿಂದ 194 ಬಿಹೆಚ್ಪಿ ಗರಿಷ್ಠ ಶಕ್ತಿಯನ್ನು ಅಭಿವೃದ್ಧಿಪಡಿಸುತ್ತದೆ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಸಹ ಬಳಸಿಕೊಳ್ಳಬಹುದು.
ಈ ಕಾರಿನಲ್ಲಿ 2.0 ಲೀಟರ್, ನಾಲ್ಕು ಸಿಲಿಂಡರ್, ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 306 ಬಿಹೆಚ್ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಇದರೊಂದಿಗೆ ಸ್ಟ್ಯಾಂಡರ್ಡ್ ಎ-ಕ್ಲಾಸ್ ಸೆಡಾನ್ ನಲ್ಲಿ 94 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುವ 2.0 ಲೀಟರ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಮತ್ತು ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಸಹ ಹೊಂದಿರಲಿದೆ
ಇನ್ನು ಈ ಕಾರಿನಲ್ಲಿ 4 ಮ್ಯಾಟಿಕ್ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಕೂಡ ಅಳವಡಿಸಲಾಗಿದೆ. ಈ ಎಎಂಜಿ ಎ35 ಕಾರು ಕೇವಲ 4.8 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಕಾರು ಎಂಎಫ್ಎ 2 ಪ್ಲಾಟ್ಫಾರ್ಮ್ ಅನ್ನು ಆಧರಿಸಿದೆ. ಈ ಕಾರುಗಳನ್ನು ನಾಕ್ ಡೌನ್(ಸಿಕೆಡಿ) ಮೂಲಕ ಭಾರತಕ್ಕೆ ತರಲಾಗುತ್ತದೆ.
ಈ ಐಷಾರಾಮಿ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಆಡಿ ಎ2 ಮತ್ತು ಬಿಎಂಡಬ್ಲೂ 2 ಸೀರಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಈ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.40 ಲಕ್ಷಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.