400 ಕಿ.ಮೀ ಮೈಲೇಜ್ ನೀಡಲಿದೆ ಈ ಐಷಾರಾಮಿ ಎಲೆಕ್ಟ್ರಿಕ್ ಕಾರು
ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಸ್‍ಯುವಿಯು ಮುಂದಿನ ಎರಡು ವಾರಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ.

ಈ ಇಕ್ಯೂಸಿ ಎಸ್‍ಯುವಿಯು ಭಾರತದಲ್ಲಿ ಈಗಾಗಲೇ ಬಿಡುಗಡೆಯಾಗಬೇಕಾಗಿತ್ತು. ಆದರೆ ಕರೋನಾ ವೈರಸ್ ಭೀತಿಯಿಂದಾಗಿ ಈ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬಿಡುಗಡೆಯನ್ನು ಮುಂದೂಡಿದ್ದರು. ಇದೀಗ ಮರ್ಸಿಡಿಸ್ ಬೆಂಝ್ ಇಂಡಿಯಾದ ಎಂಡಿ ಮತ್ತು ಸಿಇಒ ಮಾರ್ಟಿನ್ ಶ್ವೆಂಕ್ ಅವರು ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಮುಂದಿನ ಎರಡು ವಾರಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದೇಶಿಯ ಮಾರುಕಟ್ಟೆಯಲ್ಲಿರುವ ಐಷಾರಾಮಿ ಕಾರುಗಳ ಪೈಕಿ ಮರ್ಸಿಡಿಸ್ ಬೆಂಝ್ ಕಂಪನಿಯ ಕಾರುಗಳು ಅಗ್ರಸ್ಥಾನದಲ್ಲಿವೆ. ಇದರ ಜೊತೆಗೆ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯೂ ಸಹ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತ್ತಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಇಕ್ಯೂಸಿ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲಿ ಅನಾವರಣಗೊಳಿಸಿತ್ತು. ಇಕ್ಯೂಸಿ ಬ್ರಾಂಡ್‍ನಡಿಯಲ್ಲಿ ಕಂಪನಿಯು ಹಲವಾರು ಕಾರುಗಳನ್ನು ಮಾರಾಟ ಮಾಡಲಿದೆ. ಮತ್ತೊಂದು ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ ಸಹ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಮರ್ಸಿಡಿಸ್ ಬೆಂಝ್ ಕಂಪನಿಯು ಇಕ್ಯೂಸಿ ಎಲೆಕ್ಟ್ರಿಕ್ ಕಾರ್ ಅನ್ನು ಜಾಗತಿಕವಾಗಿ ಮೊದಲ ಬಾರಿಗೆ 2016ರ ಪ್ಯಾರಿಸ್ ಮೋಟಾರ್ ಶೋದಲ್ಲಿ ಅನಾವರಣಗೊಳಿಸಿತ್ತು. ಇಕ್ಯೂಸಿ ಎಲೆಕ್ಟ್ರಿಕ್ ಕಾರಿನಲ್ಲಿ 80 ಕಿ.ವ್ಯಾ ಬ್ಯಾಟರಿಯನ್ನು ಅಳವಡಿಸಲಾಗಿದೆ.
MOST READ: ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಆಡಿ ಆರ್‍ಎಸ್ 7 ಕಾರು

ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 400 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಕಾರು ಕೇವಲ 5.1 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ.

ಜಿಎಲ್‌ಸಿ ಎಸ್‍ಯುವಿ ಮಾದರಿಯ ವಿನ್ಯಾಸವನ್ನು ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಹೊಂದಿದೆ. ಈ ಎಸ್‍ಯುವಿಯಲ್ಲಿ ಹೊಸ ಹೆಡ್‌ಲೈಟ್‌ಗಳೊಂದಿಗೆ ಎಲ್‌ಇಡಿ ಸ್ಟ್ರಿಪ್ ಗ್ರಿಲ್‌ನಲ್ಲಿ ಮರ್ಸಿಡಿಸ್ ಬ್ಯಾಡ್ಜಿಂಗ್ ಅನ್ನು ಅಳವಡಿಸಲಾಗಿದೆ. ಕೇವಲ 40 ನಿಮಿಷಕ್ಕೆ ಶೇಕಡಾ 80 ರಷ್ಟು ಚಾರ್ಜ್ ಆಗುವಂತಹ ಪಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಇದರೊಂದಿಗೆ ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಹೊಸ ಎ-ಕ್ಲಾಸ್ ಲಿಮೋಸಿನ್ ಸೆಡಾನ್ ಮತ್ತು ಜಿಎಲ್ಎ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ವರ್ಷದ ಅಂತ್ಯದಲ್ಲಿ ಹೊಸ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಸೆಡಾನ್ ಮತ್ತು ಜಿಎಲ್ಎ ಎಸ್‍ಯುವಿಯು ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.

ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದರ ನಡುವೆ ಮರ್ಸಿಡಿಸ್ ಬೆಂಝ್ ತನ್ನ ಐಷಾರಾಮಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.


Click it and Unblock the Notifications








