ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಮರ್ಸಿಡಿಸ್ ಬೆಂಝ್ ತನ್ನ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ.

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಮುಂದಿನ ತಿಂಗಳು 8ರಂದು ಬಿಡುಗಡೆಯಾಗಲಿದೆ. ಈ ಇಕ್ಯೂಸಿ ಎಸ್‍ಯುವಿಯು ಭಾರತದಲ್ಲಿ ಈಗಾಗಲೇ ಬಿಡುಗಡೆಯಾಗಬೇಕಾಗಿತ್ತು. ಆದರೆ ಕರೋನಾ ವೈರಸ್ ಭೀತಿಯಿಂದಾಗಿ ಈ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬಿಡುಗಡೆಯನ್ನು ಮುಂದೂಡಿದ್ದರು. ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ.

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಮರ್ಸಿಡಿಸ್ ಬೆಂಝ್ ಕಂಪನಿಯು ಬಿಡುಗಡೆಯಾಗಲಿರುವ ಇಕ್ಯೂಸಿ ಎಸ್‍ಯುವಿಯ ಸಣ್ಣ ಟೀಸರ್ ವೀಡಿಯೋವನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಟೀಸರ್ ವೀಡಿಯೋದಲ್ಲಿ ಇಕ್ಯೂಸಿ ಬ್ಯಾಡ್ಜಿಂಗ್, ಎಲ್ಇಡಿ ಹೆಡ್ ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ ಮತ್ತು ಕೆಲವು ಇಂಟಿರಿಯರ್ ನಲ್ಲಿರುವ ಫೀಚರ್ ಗಳನ್ನು ಪ್ರದರ್ಶಿಸಿದ್ದಾರೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತಕ್ಕೆ ಸಿಬಿಯು ಮಾರ್ಗದ ಮೂಲಕ ತರಲಾಗುತ್ತಿದೆ. ಈ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ 80 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಅಳವಡಿಸಲಾಗಿದೆ.ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 445-471 ಕಿ.ಮೀಗಳವರೆಗೆ ಚಲಿಸುತ್ತದೆ.

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಒಂದು ಮೋಟಾರ್ ಈ ಎಲೆಕ್ಟ್ರಿಕ್ ಎಸ್‍ಯುವಿಯು ಮುಂಭಾಗದ ಆಕ್ಸಲ್ ಅನ್ನು ಚಾಲನೆ ಮಾಡುತ್ತದೆ ಮತ್ತು ಇನ್ನೊಂದು ಮೋಟಾರ್ ಹಿಂಭಾಗದ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿರುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 407 ಬಿಹೆಚ್‍ಪಿ ಪವರ್ ಮತ್ತು 765ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ. ಮರ್ಸಿಡಿಸ್ ಬೆಂಝ್ ಕಂಪನಿಯ ಮೊದಲ ಆಲ್-ಎಲೆಕ್ಟ್ರಿಕ್ ಸರಣಿ ಉತ್ಪಾದನಾ ಮಾದರಿಯಾಗಿದೆ.

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

2016ರ ಪ್ಯಾರಿಸ್ ಮೋಟಾರ್ ಶೋದಲ್ಲಿ ಪ್ರದರ್ಶಿಸಲಾದ ಜನರೇಷನ್ ಇಕ್ಯೂ ಕಾನ್ಸೆಪ್ಟ್‌ನ ವಿನ್ಯಾಸವನ್ನು ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಹೊಂದಿದೆ. ಇನ್ನು ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಹೊಸ ಪ್ರೀಮಿಯಂ ವಿನ್ಯಾಸವನ್ನು ಒಳಗೊಂಡಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಮರ್ಸಿಡಿಸ್ ಬೆಂಝ್ ಕಂಪನಿಯು ಈ ಹೊಸ ಐಷಾರಾಮಿ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯನ್ನು ಬಹಿರಂಗಪಡಿಸಿಲ್ಲ. ಆದರೆ ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.5 ಕೋಟಿಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಎಲೆಕ್ಟ್ರಿಕ್ ಎಸ್‍ಯುವಿಯು ಕೇವಲ 5.1 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ. ಈ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಎಸ್‍ಯುವಿಗೆ ಯಾವುದೇ ನೇರ ಪ್ರತಿಸ್ಪರ್ಧಿಗಳಿಲ್ಲ, ಆದರೆ ಮುಂದಿನ ದಿನಗಳಲ್ಲಿ ಆಡಿ ಕಂಪನಿಯು ಇ-ಟ್ರಾನ್ ಅನ್ನು ಭಾರತದಲ್ಲಿ ಬಿಡುಗಡೆಗೊಂಡರೆ ಇಕ್ಯೂಸಿ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Mercedes-Benz EQC To Go On Sale In India Next Month. Read In Kannada.
Story first published: Monday, September 28, 2020, 17:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X