ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು

ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರನ್ನು ಜಾಗತಿಕವಾಗಿ ಅನಾವಣಗೊಳಿಸುವ ಮೊದಲೆ ಟೇಸರ್ ಬಿಡುಗಡೆ ಮಾಡಿದೆ. ಹೊಸ ತಲೆಮಾರಿನ ಐಷಾರಾಮಿ-ಸೆಡಾನ್ ಎಸ್-ಕ್ರಾಸ್ ಮುಂದಿನ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕರೋನಾ ಬೀತಿಯು ಇರುವುದರಿಂದ ಈ ಐಷಾರಾಮಿ ಕಾರಿನ ಬಿಡುಗಡೆಯು ವಿಳಂಬವಾಗಬಹುದು. ದೇಶದಲ್ಲಿ ನಡೆಯುತ್ತಿರುವ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಎರಡು ತಿಂಗಳ ಲಾಕ್‌ಡೌನ್ ನಂತರ ನೌಕರರನ್ನು ಕೆಲಸಕ್ಕೆ ಮರಳುವಂತೆ ಡೈಮ್ಲರ್ ಗ್ರೂಪ್ ಸಿಇಒ ಓಲಾ ಕಲ್ಲೆನಿಯಸ್ ವೀಡಿಯೊದಲ್ಲಿ ಸ್ವಾಗತಿಸಿದ್ದಾರೆ. ಇದರೊಂದಿಗೆ ಹೊಸ ತಲೆಮಾರಿನ ಎಸ್-ಕ್ಲಾಸ್ ಕಾರಿನ ಟೀಸರ್ ಅನ್ನು ಬಿಡುಗಡೆಗೊಳಿಸಲಾಗಿದೆ. ಈ ಹೊಸ ಕಾರು ಅತ್ಯಾಕರ್ಷಕ ಹೈಟಿಕ್ ಫೀಚರ್ ಗಳನ್ನು ಹೊಂದಿರಲಿದೆ ಎಂದು ಹೇಳಿದ್ದಾರೆ

ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು

ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಉನ್ನತ ಮಟ್ಟದ ಐಷಾರಾಮಿ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಕಾರು ಇದಾಗಿದೆ. ಇನ್ನು ಮರ್ಸಿಡಿಸ್ ಬೆಂಝ್ ಇ-ಕ್ಲಾಸ್ ಭಾರತದಲ್ಲಿ ಬ್ರ್ಯಾಂಡ್ ನ ಹೆಚ್ಚು ಮಾರಾಟವಾಗುವ ಕಾರು ಆಗಿದೆ.

MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು

ಪ್ರಸ್ತುತ ತಲೆಮಾರಿನ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ (ಡಬ್ಲ್ಯು 222) ಭಾರತದಿಂದ 2014ರಿಂದ ಮಾರಾಟವಾಗುತ್ತಿದೆ. ಈ ಸೆಡಾನ್ ಅನ್ನು ಐಷಾರಾಮಿ-ಸೆಡಾನ್ ಆದ ಮುಂದಿನ ತಲೆಮಾರಿನ ಎಸ್-ಕ್ಲಾಸ್ (ಡಬ್ಲ್ಯು 223) ಬಿಡುಗಡೆಗೊಳಿಸುವುದರ ಮೂಲಕ ಬದಲಾಯಿಸಲಾಗುವುದು.

ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು

ಹೊಸ ತಲೆಮಾರಿನ ಎಸ್-ಕ್ಲಾಸ್ ಸೆಡಾನ್ ಬಗ್ಗೆ ಕಂಪನಿಯು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಈ ಹೊಸ ತಲೆಮಾರಿನ ಎಸ್-ಕ್ಲಾಸ್ ಡ್ಯಾಶ್ ಬೋರ್ಡ್ ನಲ್ಲಿ ದೊಡ್ಡ ಇನ್ಫೋಟೇನೆಮೆಂಟ್ ಡಿಸ್ ಪ್ಲೇಯನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಹೊಸ ಇನ್ಪೋಟೇನೆಮೆಂಟ್ ಸಿಸ್ಟಂ ಅನ್ನು ಸುಲುಭವಾಗಿ ಬಳಸಲು ಆಕರ್ಷಕ ವಿನ್ಯಾಸವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು

ಈ ಐಷಾರಾಮಿ ಕಾರಿನ ಹಿಂಭಾಗದ ಪ್ರಯಾಣಿಕರ ಮನುರಂಜನೆಗಾಗಿ ಹಿಂಭಾಗದಲ್ಲಿ ರೇರ್ ಸೆಂಟರ್ ಕನ್ಸೋಲ್, ಅರ್ಮ್ ರೇಸ್ಟ್, ಮಸಾಜ್ ಫಂಕ್ಷನ್ ಮತ್ತು ದೊಡ್ಡ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು

ಹೊಸ ತಲೆಮಾರಿನ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ರೇದಾರ್ ಗೈಡೆಡ್ ಕ್ರೂಸ್ ಕಂಟ್ರೋಲ್, ಮಲ್ಟಿಪಲ್ ಏರ್‌ಬ್ಯಾಗ್, 360 ಡಿಗ್ರಿ ಕ್ಯಾಮೆರಾ, ನೈಟ್ ವಿಷನ್ ಕ್ಯಾಮೆರಾ ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಪೆಟ್ರೋಲ್, ಡೀಸೆಲ್, ಮೈಲ್ಡ್-ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇನ್ನು ಮರ್ಸಿಡಿಸ್ ಬೆಂಝ್ ಎಸ್600 ರ ಕೂಪೆ ಮತ್ತು ಕ್ಯಾಬ್ರಿಯೊಲೆಟ್ ಆವೃತ್ತಿಗಳನ್ನು ಕಂಪನಿಯು ಸ್ಥಗಿತಗೊಳಿಸಲಿದೆ ಎಂಬ ವದಂತಿಗಳಿವೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು

ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು 7 ಸೀರಿಸ್, ಜಾಗ್ವಾರ್ ಎಕ್ಸ್‌ಜೆ, ಆಡಿ ಎ8, ಪೋರ್ಷೆ ಪನಾಮೆರಾ ಮತ್ತು ಮೆಸಾರಟಿ ಕಾರು ಕ್ವಾಟ್ರೊಪೋರ್ಟ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
New Mercedes-Benz S-Class Teased. Read in Kannada.
Story first published: Saturday, May 16, 2020, 21:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X