Just In
- 7 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 10 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 10 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 11 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ
ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿ ಮರ್ಸಿಡಿಸ್ ಬೆಂಝ್ ತನ್ನ ಎಸ್-ಕ್ಲಾಸ್ ಮಾದರಿಯನ್ನು 2020ರ ಸೆಪ್ಟೆಂಬರ್ ತಿಂಗಳ 2 ರಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.
ಈ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನಲ್ಲಿ ಅತ್ಯಾಕರ್ಷಕ ಹೈಟಕ್ ಫೀಚರ್ಗಳನ್ನು ಹೊಂದಿರಲಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನ ಇಂಟಿರಿಯರ್ ಚಿತ್ರಗಳು ಆನ್ಲೈನ್ನಲ್ಲಿ ಬಹಿರಂಗವಾಗಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಎಂಬಿಯುಎಕ್ಸ್ ಇನ್ಫೋಟೇನೆಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಈ ಎಸ್-ಕ್ಲಾಸ್ ಕಾರಿನ ಇ-ಆಕ್ಟಿವ್ ಬಾಡಿ ಕಂಟ್ರೋಲ್ ಸಿಸ್ಟಂ ಅನ್ನು ಹೊಂದಿದೆ. ಈ ಸಿಸ್ಟಂ ಈಗಾಗಲೇ ಜಿಎಲ್ಇ ಮತ್ತು ಜಿಎಲ್ಎಸ್ ನಂತಹ ಎಸ್ಯುವಿಗಳಲ್ಲಿ ಈ ಫೀಚರ್ ಲಭ್ಯವಿದೆ. ಇದು ಅಪಘಾತದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆಯನ್ನು ನೀಡುತ್ತದೆ.
ಪ್ರಸ್ತುತ ತಲೆಮಾರಿನ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ (ಡಬ್ಲ್ಯು 222) ಭಾರತದಿಂದ 2014ರಿಂದ ಮಾರಾಟವಾಗುತ್ತಿದೆ. ಈ ಹೊಸ ತಲೆಮಾರಿನ ಎಸ್-ಕ್ಲಾಸ್ ಡ್ಯಾಶ್ ಬೋರ್ಡ್ ನಲ್ಲಿ ನಾಲ್ಕು-ಟಚ್ಸ್ಕ್ರೀನ್ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ 12.8-ಇಂಚಿನ ಟ್ಯಾಬ್ಲೆಟ್ ಟಚ್ಸ್ಕ್ರೀನ್ ಕೇಂದ್ರ ಸ್ಥಾನದಲ್ಲಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಈ ಐಷಾರಾಮಿ ಕಾರಿನ ಹಿಂಭಾಗದ ಪ್ರಯಾಣಿಕರ ಮನುರಂಜನೆಗಾಗಿ ಹಿಂಭಾಗದಲ್ಲಿ ರೇರ್ ಸೆಂಟರ್ ಕನ್ಸೋಲ್, ಅರ್ಮ್ ರೇಸ್ಟ್, ಮಸಾಜ್ ಫಂಕ್ಷನ್ ಮತ್ತು ದೊಡ್ಡ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇನ್ನು ಎಸ್-ಕ್ಲಾಸ್ ಡ್ಯಾಶ್ಬೋರ್ಡ್ ಹೊಸ ವಿನ್ಯಾಸವನ್ನು ಹೊಂದಿರಲಿದೆ. ಈ ಹೊಸ ಎಸ್-ಕ್ಲಾಸ್ ಕಾರಿನಲ್ಲಿ ಮೌಂಟಡ್ ಕಂಟ್ರೋಲ್ ನೊಂದಿಗೆ ಹೊಸ ಸ್ಟೀಯರಿಂಗ್ ವ್ಜೀಲ್ ಅನ್ನು ಅಳವಡಿಸಲಾಗಿದೆ.
ಇನ್ನು ಈ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಮುಂದಿನ ವರ್ಷದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಉನ್ನತ ಮಟ್ಟದ ಐಷಾರಾಮಿ ಮತ್ತು ಉತ್ತಮ ಪರ್ಫಾಮೆನ್ಸ್ ಹೊಂದಿರುವ ಕಾರು ಇದಾಗಿದೆ.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್ಯುವಿ
ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಭಾರತದಲ್ಲಿ ಬ್ರ್ಯಾಂಡ್ ನ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಈ ಕಾರಿನಲ್ಲಿ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಅಳವಡಿಸಲಾಗಿದೆ.
ಹೊಸ ತಲೆಮಾರಿನ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ರೇಡಾರ್ ಗೈಡೆಡ್ ಕ್ರೂಸ್ ಕಂಟ್ರೋಲ್, ಮಲ್ಟಿಪಲ್ ಏರ್ಬ್ಯಾಗ್, 360 ಡಿಗ್ರಿ ಕ್ಯಾಮೆರಾ, ನೈಟ್ ವಿಷನ್ ಕ್ಯಾಮೆರಾ ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿದೆ.
MOST READ: ಗ್ಲೋಬಲ್ ಎನ್ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು
ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಪೆಟ್ರೋಲ್, ಡೀಸೆಲ್, ಮೈಲ್ಡ್-ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇನ್ನು ಮರ್ಸಿಡಿಸ್ ಬೆಂಝ್ ಎಸ್600 ರ ಕೂಪೆ ಮತ್ತು ಕ್ಯಾಬ್ರಿಯೊಲೆಟ್ ಆವೃತ್ತಿಗಳನ್ನು ಕಂಪನಿಯು ಸ್ಥಗಿತಗೊಳಿಸಲಿದೆ ಎಂಬ ವದಂತಿಗಳಿವೆ.
ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಮುಂದಿನ ವರ್ಷದಲ್ಲಿ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು 7 ಸೀರಿಸ್, ಜಾಗ್ವಾರ್ ಎಕ್ಸ್ಜೆ, ಆಡಿ ಎ8, ಪೋರ್ಷೆ ಪನಾಮೆರಾ ಮತ್ತು ಮೆಸಾರಟಿ ಕಾರು ಕ್ವಾಟ್ರೊಪೋರ್ಟ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.