ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಎಂಜಿ ಮೋಟಾರ್ ಸಂಸ್ಥೆಯು ತನ್ನ ಹೆಕ್ಟರ್ ಎಸ್‍ಯುವಿಯನ್ನು ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಎಂಜಿ ಹೆಕ್ಟರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೂಸ ಸಂಚಲನವನ್ನು ಮೂಡಿಸಿತ್ತು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಎಂಜಿ ಹೆಕ್ಟರ್ ಎಸ್‍ಯುವಿಗೆ ಇತ್ತೀಚೆಗೆ ದಾಖಲೆಯ ಮಟ್ಟದಲ್ಲಿ ಬುಕ್ಕಿಂಗ್ ದಾಖಲಾಗಿತ್ತು. ನಂತರದಲ್ಲಿ ಎಂಜಿ ಹೆಕ್ಟರ್ ಬುಕ್ಕಿಂಗ್ ಅನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇನ್ನು ಇತ್ತೀಚೆಗೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ವಡೋದರಾದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದೆ. ಕೆಲವು ಸೂಕ್ಷ ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ. ಈ ಎಸ್‍ಯುವಿಯ ಮುಂಭಾಗದ ಗ್ರಿಲ್ ಅನ್ನು ನವೀಕರಿಸಲಾಗಿದೆ. ಆದರೆ ಗ್ರಿಲ್‌ನಲ್ಲಿನ ಕ್ರೋಮ್ ವಿಭಜಿಸಲಾದ ಹೆಡ್‌ಲ್ಯಾಂಪ್‌ಗಳ ವಿನ್ಯಾಸ ಮತ್ತು ಮುಂಭಾಗದ ಬಂಪರ್ ಇತ್ಯಾದಿಗಳು ಮೊದಲಿನಂತೆಯೇ ಇರುತ್ತವೆ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಹೊಸ 17 ಇಂಚಿನ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಅನ್ನು ಕೂಡ ಹೊಂದಿದೆ. ಅದನ್ನು ಹೊರತುಪಡಿಸಿ ಎಸ್‍ಯುವಿಯ ಸೈಡ್ ಪ್ರೊಫೈಲ್ ಸಂಪೂರ್ಣವಾಗಿ ಬದಲಾಗುವುದಿಲ್ಲ. ಹಿಂಭಾಗದ ವಿಭಾಗ, ಟೈಲ್‌ಲ್ಯಾಂಪ್‌ಗಳ ನಡುವಿನ ಪಟ್ಟಿಯಲ್ಲಿ ಒಂದೇ ವ್ಯತ್ಯಾಸವಿದೆ. ಪ್ರಸ್ತುತ ಮಾದರಿಯು ಟೈಲ್‌ಲೈಟ್‌ಗಳ ನಡುವೆ ಅಡ್ಡಲಾಗಿ ರೆಡ್ ಸ್ಟ್ರಿಪ್ ಅನ್ನು ಹೊಂದಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ದಪ್ಪ ಕ್ರೋಮ್ ಅಂಡರ್ಲೈನ್ ಹೊಂದಿರುವ ಬ್ಲ್ಯಾಕ್ ಸ್ಟ್ರೀಪ್ ಅನ್ನು ಹೊಂದಿದೆ. ಹಿಂಭಾಗದ ಬಂಪರ್, ರಿಫ್ಲೆಕ್ಟರ್‌ಗಳು ಇತ್ಯಾದಿಗಳು ಬದಲಾಗುವುದಿಲ್ಲ. ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಕೆಲವು ಸಣ್ಣ ಬದಲಾವಣೆಗಳನ್ನು ಮಾತ್ರ ಪಡೆಯುತ್ತದೆ, ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಹೊಂದಿರುವುದಿಲ್ಲ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಎಂಜಿ ಹೆಕ್ಟರ್ ಎಸ್‍ಯುವಿಯಲ್ಲಿ 1.5 ಲೀಟರ್ ಟಬೋಜಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 143 ಬಿಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇನ್ನು ಈ ಎಸ್‍ಯುವಿಯ 2.0 ಲೀಟರ್ 143 ಬಿಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಸದ್ಯ ಮಾರುಕಟ್ಟೆಯಲ್ಲಿರುವ ಎಸ್‍‍ಯು‍ವಿನಲ್ಲಿ ಲೈವ್ ಟ್ರಾಫಿಕ್ ಅಲರ್ಟ್‍‍ಗಳು, ಟಯರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ(ಟಿ‍‍ಪಿಎಂಎಸ್), ಜಿಯೋ-ಫೆನ್ಸಿಂಗ್, ತುರ್ತು ಕರೆ, ಸಾಮಾನ್ಯ ಸಹಾಯಕ್ಕಾಗಿ ಸಂಪರ್ಕಿಸಲು ಒಂದು ಬಟನ್ ಮತ್ತು ಪ್ರೀಮಿಯಂ ಗಾನಾ ಆ್ಯಪ್‍ನ ವೈವಿಧ್ಯಮಯ ಮ್ಯೂಸಿಕ್ ಸಂಗ್ರಹ, ಆನ್-ಬೋರ್ಡ್ ನ್ಯಾವಿಗೇಷನ್ ಫೀಚರ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಸ್ಮಾರ್ಟ್‍‍ಪೋನ್ ಅಪ್ಲಿಕೇಶನ್ ಮತ್ತು ವಾಯ್ಸ್ ಕಾಮೆಂಡ್‍‍ಗಳ ಮೂಲಕ ಎಸ್‍‍ಯು‍ವಿ ವಿವಿಧ ಫಿಚರ್ ಗಳನ್ನು ನಿಯಂತ್ರಿಸಬಹುದು. ಇದರಲ್ಲಿ ಎಸಿ, ಸನ್‍‍ರೂಫ್‍, ಟೈಲ್‍‍ಗೇಟ್ ಮತ್ತು ಡೋರ್‍‍ಗಳು ಸೇರಿವೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಇದರಲ್ಲಿ ಬ್ಲ್ಯಾಕ್ ಕಲರ್ ಥೀಮ್ ಹೊಂದಿರುವ ಇಂಟರಿಯರ್‍‍ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಫೋಟೇನ್‌ಮೆಂಟ್ ಕಂಟ್ರೋಲ್, ಆಟೋ ಎಸಿ, ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಆಟೋಮ್ಯಾಟಿಕ್ ಹೆಡ್‍‍‍ಲ್ಯಾಂಪ್, 10.4 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಡಿಸ್‍‍ಪ್ಲೇ ಸೌಲಭ್ಯವಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಹೆಕ್ಟರ್ ಎಸ್‍ಯುವಿಯಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದು, ಏರ್‍‍ಬ್ಯಾಗುಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಫ್ರಂಟ್ ಆಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಸೌಲಭ್ಯವನ್ನು ಒದಗಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಎಂಜಿ ಹೆಕ್ಟರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಜೀಪ್ ಕಂಪಾಸ್, ಮಹೀಂದ್ರಾ ಎಕ್ಸ್‌ಯುವಿ 500 ಮತ್ತು ಟಾಟಾ ಹ್ಯಾರಿಯರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
MG Hector Facelift Spied On Test. Read In Kannada.
Story first published: Wednesday, September 30, 2020, 14:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X