ಎಂಜಿ ಹೆಕ್ಟರ್ ಪ್ಲಸ್ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಹೆಕ್ಟರ್ ಪ್ಲಸ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಎಂಜಿ ಮೋಟಾರ್ ಕಂಪನಿಯು ಈ ಹೊಸ ಹೆಕ್ಟರ್ ಪ್ಲಸ್ ಎಸ್‍ಯುವಿಗಾಗಿ ಅಧಿಕೃತ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ.

ಎಂಜಿ ಹೆಕ್ಟರ್ ಪ್ಲಸ್ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಗಾಗಿ ಗ್ರಾಹಕರು ಟೋಕನ್ ಮೊತ್ತ ರೂ.50,000 ಪಾವತಿಸಿ ಬುಕ್ಕಿಂಗ್ ಅನ್ನು ಮಾಡಿಕೊಳ್ಳಬಹುದಾಗಿದೆ. ಈ ಎಸ್‍ಯುವಿಗಾಗಿ ಆನ್‌ಲೈನ್ ಮೂಲಕ ಅಥವಾ ಭಾರತದಾದ್ಯಂತದ ಯಾವುದೇ ಎಂಜಿ ಮೋಟಾರ್ ಡೀಲರ್ ಬಳಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಗುಜರಾತ್‌ನ ಹ್ಯಾಲೊಲ್‌ನಲ್ಲಿರುವ ಕಂಪನಿಯ ಘಟಕದಲ್ಲಿ ಹೆಕ್ಟರ್ ಪ್ಲಸ್ ಉತ್ಪಾದನೆ ಈಗಾಗಲೇ ಪ್ರಾರಂಭವಾಗಿದೆ. ಆರು ಸೀಟಿನ ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿ ಈಗಾಗಲೇ ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ.

ಎಂಜಿ ಹೆಕ್ಟರ್ ಪ್ಲಸ್ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಮುಂದಿನ ವಾರಗಳಲ್ಲಿ ಹೆಕ್ಟರ್ ಪ್ಲಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಈ ಎಸ್‍ಯುವಿಯು ಬಿಡುಗಡೆಯಾದ ಕೂಡಲೇ ವಿತರಣೆಯು ಪ್ರಾರಂಭವಾಗಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಎಂಜಿ ಹೆಕ್ಟರ್ ಪ್ಲಸ್ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಎಂಜಿ ಹೆಕ್ಟರ್ ಪ್ಲಸ್ 6 ಸೀಟರ್ ಅಥವಾ 7 ಸೀಟರ್ ಆವೃತ್ತಿಯಲ್ಲಿ ಲಭ್ಯವಿರಲಿದೆ . ಆದರೆ ಆರಂಭದಲ್ಲಿ ಆರು ಸೀಟುಗಳನ್ನು ಒಳಗೊಂಡಿರುವ ಹೆಕ್ಟರ್ ಪ್ಲಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ಈ ಎಸ್‍ಯುವಿಯ ಎರಡನೇ ಸಾಲಿನಲ್ಲಿ ಪ್ರತ್ಯೇಕ ಕ್ಯಾಪ್ಟನ್ ಸೀಟುಗಳ ಸೌಲಭ್ಯವನ್ನು ಹೊಂದಿದೆ.

ಎಂಜಿ ಹೆಕ್ಟರ್ ಪ್ಲಸ್ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಎಂಜಿ ಹೆಕ್ಟರ್ ಪ್ಲಸ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಎಂಜಿ ಹೆಕ್ಟರ್ ಎಸ್‍ಯುವಿಯಂತೆ ಮುಂಭಾಗದಲ್ಲಿ ಎಲ್ಇಡಿ ಡಿಆರ್‍‍ಎಲ್ ಗಳ ಕೆಳಗೆ ಬ್ಲ್ಯಾಕ್ಡ್ ಔಟ್ ಫ್ರಂಟ್ ಗ್ರಿಲ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಹೆಡ್‍ ಲ್ಯಾಂಪ್ ಮತ್ತು ಫಾಂಗ್ ಲ್ಯಾಂಪ್‍ನ ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಲಾಗಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಎಂಜಿ ಹೆಕ್ಟರ್ ಪ್ಲಸ್ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಎಂಜಿ ಹೆಕ್ಟೆರ್ ಪ್ಲಸ್ ಎಸ್‍ಯುವಿಯ ಒಟ್ಟಾರೆ ವಿನ್ಯಾಸವು ಹೆಚ್ಚು ಕಡಿಮೆ ಎಂಜಿ ಹೆಕ್ಟರ್ ಮಾದರಿಯಂತಿದೆ. ಹೊಸ ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‍ ಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

ಎಂಜಿ ಹೆಕ್ಟರ್ ಪ್ಲಸ್ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಯಲ್ಲಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 143 ಬಿಹೆಚ್‌ಪಿ ಪವರ್ ಮತ್ತು 250 ಎನ್ಎಂ ಅನ್ನು ಉತ್ಪಾದಿಸುತ್ತದೆ. ಇನ್ನು ಪೆಟ್ರೋಲ್ ಹೈಬ್ರಿಡ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ ಅನ್ನು 48ವಿ ಎಲೆಕ್ಟ್ರಿಕ್ ಮೋಟರ್‌ಗೆ ಜೋಡಿಸಲಾಗಿದೆ.

MOST READ: ದೋಷ ಪೂರಿತ 22 ಲಕ್ಷ ಕಾರುಗಳನ್ನು ರಿಕಾಲ್ ಮಾಡಲು ಮುಂದಾದ ವೊಲ್ವೊ

ಎಂಜಿ ಹೆಕ್ಟರ್ ಪ್ಲಸ್ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಯಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 173 ಬಿಹೆಚ್‌ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ.

ಎಂಜಿ ಹೆಕ್ಟರ್ ಪ್ಲಸ್ ಎಸ್‍‍‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ

ಎಂಜಿ ಮೋಟಾರ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಮೂರನೇ ಮಾದರಿ ಹೆಕ್ಟರ್ ಪ್ಲಸ್ ಆಗಿದೆ. ಎಂಜಿ ಹೆಕ್ಟರ್ ಪ್ಲಸ್ ಭಾರತೀಯ ಮಾರುಕಟ್ಟಿಯಲ್ಲಿ ಬಿಡುಗಡೆಯಾದ ಬಳಿಕ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ನೇರ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
MG Hector Plus Bookings Open Officially For Rs 50,000. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X