ಎಂಜಿ ಬಹುನೀರಿಕ್ಷಿತ ಹೆಕ್ಟಕ್ ಪ್ಲಸ್ ಎಸ್‌ಯುವಿ ಕಾರಿನ ಟೀಸರ್ ಚಿತ್ರ ಬಹಿರಂಗ

ಭಾರತದಲ್ಲಿ ಕಾರು ಬಿಡುಗಡೆ ಮಾಡಿ ವರ್ಷದ ಸಂಭ್ರಮದಲ್ಲಿರುವ ಎಂಜಿ ಮೋಟಾರ್ ಕಂಪನಿಯು ತನ್ನ ಹೊಸ ಕಾರು ಮಾದರಿಯಾದ 7 ಸೀಟರ್ ಹೆಕ್ಟರ್ ಪ್ಲಸ್ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ಉತ್ಪಾದನೆಯನ್ನು ಆರಂಭಿಸಿದ ಬೆನ್ನಲ್ಲೇ ಟೀಸರ್ ಚಿತ್ರವನ್ನು ಸಹ ಬಹಿರಂಗಪಡಿಸಲಾಗಿದೆ.

ಬಹುನೀರಿಕ್ಷಿತ ಹೆಕ್ಟಕ್ ಪ್ಲಸ್ ಎಸ್‌ಯುವಿ ಕಾರಿನ ಟೀಸರ್ ಚಿತ್ರ ಬಹಿರಂಗ

5 ಸೀಟರ್ ಮಾದಿರಿಯಾದ ಹೆಕ್ಟರ್ ಕಾರು ಮಾದರಿಗಿಂತಲೂ ವಿಭಿನ್ನ ತಂತ್ರಜ್ಞಾನ ಸೌಲಭ್ಯಗಳನ್ನು ಪಡೆದುಕೊಂಡಿರುವ ಹೆಕ್ಟರ್ ಪ್ಲಸ್ ಎಸ್‌ಯುವಿ ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದ್ದು, ಟೀಸರ್ ಚಿತ್ರಗಳಲ್ಲಿ ಹೊಸ ಕಾರಿನಲ್ಲಿ ಟೈಲ್‌ಗೆಟ್ ತೆರೆಯಲು ಲೆಗ್ ಸ್ಪೈಫ್ ಸೌಲಭ್ಯವನ್ನು ನೀಡಿರುವುದು ಬಹಿರಂಗವಾಗಿದೆ.

ಬಹುನೀರಿಕ್ಷಿತ ಹೆಕ್ಟಕ್ ಪ್ಲಸ್ ಎಸ್‌ಯುವಿ ಕಾರಿನ ಟೀಸರ್ ಚಿತ್ರ ಬಹಿರಂಗ

ಹೊಸ ಹೆಕ್ಟರ್ ಪ್ಲಸ್ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಅಥವಾ 7 ಸೀಟರ್ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿರಲಿದ್ದು, 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+2+3 ಆಸನ ಮಾದರಿ ಹೊಂದಿರಲಿದೆ.

ಬಹುನೀರಿಕ್ಷಿತ ಹೆಕ್ಟಕ್ ಪ್ಲಸ್ ಎಸ್‌ಯುವಿ ಕಾರಿನ ಟೀಸರ್ ಚಿತ್ರ ಬಹಿರಂಗ

5 ಸೀಟರ್ ಹೆಕ್ಟರ್ ಕಾರಿನ ಉತ್ಪಾದನಾ ಪ್ಲಾಟ್‌ಫಾರ್ಮ್ ಅಡಿಯಲ್ಲೇ ಹೊಸ ಆವೃತ್ತಿಯನ್ನು ಪರಿಚಯಿಸುತ್ತಿರುವ ಎಂಜಿ ಕಂಪನಿಯು ಹೆಕ್ಟರ್ ಪ್ಲಸ್ ಮೂಲಕ 7 ಸೀಟರ್ ಎಸ್‌ಯುವಿ ಖರೀದಿದಾರರನ್ನು ಸೆಳೆಯಲು ಮುಂದಾಗಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಇದು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.

ಬಹುನೀರಿಕ್ಷಿತ ಹೆಕ್ಟಕ್ ಪ್ಲಸ್ ಎಸ್‌ಯುವಿ ಕಾರಿನ ಟೀಸರ್ ಚಿತ್ರ ಬಹಿರಂಗ

ಎಂಜಿನ್ ಸಾಮರ್ಥ್ಯ

ಸದ್ಯ ಮಾರುಕಟ್ಟೆಯಲ್ಲಿರುವ 5 ಸೀಟರ್ ಹೆಕ್ಟರ್ ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 7 ಸೀಟರ್ ಹೆಕ್ಟರ್ ಪ್ಲಸ್ ಕಾರು ಕೂಡಾ ಸಾಮಾನ್ಯ ಕಾರಿನಂತೆಯೇ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಬಹುನೀರಿಕ್ಷಿತ ಹೆಕ್ಟಕ್ ಪ್ಲಸ್ ಎಸ್‌ಯುವಿ ಕಾರಿನ ಟೀಸರ್ ಚಿತ್ರ ಬಹಿರಂಗ

ಈ ಮೂಲಕ ಮತ್ತಷ್ಟು ಎಸ್‌ಯುವಿ ಕಾರು ಖರೀದಿದಾರರನ್ನು ಸೆಳೆಯಲಿರುವ ಎಂಜಿ ಮೋಟಾರ್ ಕಂಪನಿಯು ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ ಜೊತೆಗೆ ಟೊಯೊಟಾ ಇನೋವಾ ಕ್ರಿಸ್ಟಾ ಆವೃತ್ತಿಗೂ ಪೈಪೋಟಿ ನೀಡಲಿದ್ದು, ಸಾಮಾನ್ಯ ಹೆಕ್ಟರ್ ಕಾರಿಗಿಂತಲೂ ತುಸು ದುಬಾರಿಯಾಗಿರಲಿದೆ.

ಬಹುನೀರಿಕ್ಷಿತ ಹೆಕ್ಟಕ್ ಪ್ಲಸ್ ಎಸ್‌ಯುವಿ ಕಾರಿನ ಟೀಸರ್ ಚಿತ್ರ ಬಹಿರಂಗ

ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಸೌಲಭ್ಯಗಳಿದ್ದು, ಹೊಸ ಮಾದರಿಯ ಹೆಡ್‌ಲ್ಯಾಂಪ್, ಹೊಲೊಜೆನ್ ಫ್ರಂಟ್ ಗ್ರಿಲ್, ಫ್ರಂಟ್ ಮತ್ತು ರಿಯರ್ ಬಂಪರ್, ಹೊಸ ವಿನ್ಯಾಸದ ರಿಯರ್ ಟೈಲ್ ಲೈಟ್, ಸ್ಕೀಡ್ ಪ್ಲೇಟ್ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ವಿವಿಧ ಮಾದರಿಯ ಸುರಕ್ಷಾ ಸೌಲಭ್ಯಗಳನ್ನು ಜೋಡಿಸಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಬಹುನೀರಿಕ್ಷಿತ ಹೆಕ್ಟಕ್ ಪ್ಲಸ್ ಎಸ್‌ಯುವಿ ಕಾರಿನ ಟೀಸರ್ ಚಿತ್ರ ಬಹಿರಂಗ

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೆಕ್ಟರ್ ಪ್ಲಸ್ ಮಾದರಿಯು ಸಾಮಾನ್ಯ ಕಾರಿಗಿಂತಲೂ ರೂ. 1.50 ಲಕ್ಷದಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಹೊಂದಿರಲಿದೆ.

Most Read Articles

Kannada
English summary
New MG Hector Plus SUV Teased. Read in Kannada.
Story first published: Thursday, June 18, 2020, 16:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X