ಮಾರಾಟದಲ್ಲಿ ಹೊಸ ದಾಖಲೆ ಬರೆದ ಎಂಜಿ ಹೆಕ್ಟರ್ ಎಸ್‍ಯುವಿ

ಎಂಜಿ ಮೋಟಾರ್ ಕಂಪನಿಯು ತನ್ನ ಹೆಕ್ಟರ್ ಎಸ್‍ಯುವಿಯನ್ನು ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಎಂಜಿ ಹೆಕ್ಟರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೂಸ ಸಂಚಲನವನ್ನು ಮೂಡಿಸಿತ್ತು.

ಮಾರಾಟದಲ್ಲಿ ಹೊಸ ದಾಖಲೆ ಬರೆದ ಎಂಜಿ ಹೆಕ್ಟರ್ ಎಸ್‍ಯುವಿ

ಇತ್ತೀಚಿನ ವರದಿಗಳ ಪ್ರಕಾರ. ಎಂಜಿ ಮೋಟಾರ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೆಕ್ಟರ್ ಎಸ್‍ಯುವಿಯು 25,000 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಕೇವಲ ಒಂದು ವರ್ಷದಲ್ಲಿ ಎಂಜಿ ಹೆಕ್ಟರ್ ಎಸ್‍ಯುವಿಯು ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಎಂಜಿ ಹೆಕ್ಟರ್ ಎಸ್‍ಯುವಿಯ ಮಾರಾಟದ ಸಂಖ್ಯೆಗಳನ್ನು ನೋಡಿದಾಗ ಗ್ರಾಹಕರಿನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ ಎಂದು ತಿಳಿಯುತ್ತದೆ. ಎಂಜಿ ಹೆಕ್ಟರ್ ಎಸ್‍ಯುವಿಯು ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ ಗಳಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತಿದೆ.

ಮಾರಾಟದಲ್ಲಿ ಹೊಸ ದಾಖಲೆ ಬರೆದ ಎಂಜಿ ಹೆಕ್ಟರ್ ಎಸ್‍ಯುವಿ

ಎಂಜಿ ಹೆಕ್ಟರ್ ಎಸ್‍ಯುವಿಯಲ್ಲಿ 1.5 ಲೀಟರ್ ಟಬೋಜಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 143 ಬಿಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಮಾರಾಟದಲ್ಲಿ ಹೊಸ ದಾಖಲೆ ಬರೆದ ಎಂಜಿ ಹೆಕ್ಟರ್ ಎಸ್‍ಯುವಿ

ಇನ್ನು ಈ ಎಸ್‍ಯುವಿಯಲ್ಲಿ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 143 ಬಿಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಮಾರಾಟದಲ್ಲಿ ಹೊಸ ದಾಖಲೆ ಬರೆದ ಎಂಜಿ ಹೆಕ್ಟರ್ ಎಸ್‍ಯುವಿ

ಈ ಎಸ್‍‍ಯು‍ವಿನಲ್ಲಿ ಲೈವ್ ಟ್ರಾಫಿಕ್ ಅಲರ್ಟ್‍‍ಗಳು, ಟಯರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ(ಟಿ‍‍ಪಿಎಂಎಸ್), ಜಿಯೋ-ಫೆನ್ಸಿಂಗ್, ತುರ್ತು ಕರೆ, ಸಾಮಾನ್ಯ ಸಹಾಯಕ್ಕಾಗಿ ಸಂಪರ್ಕಿಸಲು ಒಂದು ಬಟನ್ ಮತ್ತು ಪ್ರೀಮಿಯಂ ಗಾನಾ ಆ್ಯಪ್‍ನ ವೈವಿಧ್ಯಮಯ ಮ್ಯೂಸಿಕ್ ಸಂಗ್ರಹ, ಆನ್-ಬೋರ್ಡ್ ನ್ಯಾವಿಗೇಷನ್ ಅನ್ನು ಹೊಂದಿದೆ.

ಮಾರಾಟದಲ್ಲಿ ಹೊಸ ದಾಖಲೆ ಬರೆದ ಎಂಜಿ ಹೆಕ್ಟರ್ ಎಸ್‍ಯುವಿ

ಸ್ಮಾರ್ಟ್ ಫೋನ್ ಅಪ್ಲಿಕೇಶನ್ ಮತ್ತು ವಾಯ್ಸ್ ಕಾಮೆಂಡ್‍‍ಗಳ ಮೂಲಕ ಎಸ್‍‍ಯು‍ವಿ ವಿವಿಧ ಫೀಚರ್ ಗಳನ್ನು ನಿಯಂತ್ರಿಸಬಹುದು. ಇದರಲ್ಲಿ ಎಸಿ, ಸನ್‍‍ರೂಫ್‍, ಟೈಲ್‍‍ಗೇಟ್ ಮತ್ತು ಡೋರ್‍‍ಗಳು ಸೇರಿವೆ.

ಮಾರಾಟದಲ್ಲಿ ಹೊಸ ದಾಖಲೆ ಬರೆದ ಎಂಜಿ ಹೆಕ್ಟರ್ ಎಸ್‍ಯುವಿ

ಇದರಲ್ಲಿ ಬ್ಲ್ಯಾಕ್ ಕಲರ್ ಥೀಮ್ ಹೊಂದಿರುವ ಇಂಟರಿಯರ್‍‍ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಫೋಟೇನ್‌ಮೆಂಟ್ ಕಂಟ್ರೋಲ್, ಆಟೋ ಎಸಿ, ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಆಟೋಮ್ಯಾಟಿಕ್ ಹೆಡ್‍‍‍ಲ್ಯಾಂಪ್, 10.4 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಡಿಸ್‍‍ಪ್ಲೇ ಸೌಲಭ್ಯವಿದೆ.

ಮಾರಾಟದಲ್ಲಿ ಹೊಸ ದಾಖಲೆ ಬರೆದ ಎಂಜಿ ಹೆಕ್ಟರ್ ಎಸ್‍ಯುವಿ

ಹೆಕ್ಟರ್ ಎಸ್‍ಯುವಿಯಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದು, ಏರ್‍‍ಬ್ಯಾಗುಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಫ್ರಂಟ್ ಆಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಸೌಲಭ್ಯವನ್ನು ನೀಡಲಾಗಿದೆ.

ಮಾರಾಟದಲ್ಲಿ ಹೊಸ ದಾಖಲೆ ಬರೆದ ಎಂಜಿ ಹೆಕ್ಟರ್ ಎಸ್‍ಯುವಿ

ಎಂಜಿ ಹೆಕ್ಟರ್ ಎಸ್‍ಯುವಿಯು ಉತ್ತಮ ಸ್ಪೇಸ್ ಅನ್ನು ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿದೆ. ಈ ಎಂಜಿ ಹೆಕ್ಟರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಜೀಪ್ ಕಂಪಾಸ್, ಮಹೀಂದ್ರಾ ಎಕ್ಸ್‌ಯುವಿ 500 ಮತ್ತು ಟಾಟಾ ಹ್ಯಾರಿಯರ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
MG Hector Sales Crosses 25,000 Mark: New Milestone Achieved. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X