ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಎಂಜಿ ಮೋಟಾರ್ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ವಾಹನವಾಗಿ ಜೆಡ್ಎಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದರು. ಈ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಯು ಭಾರತದ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಜೆಡ್ಎಸ್ ಇವಿ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಯಶ್ವಸಿಯಾಗಿದೆ ಎಂದು ಎಂಜಿ ಮೋಟಾರ್ ಕಂಪಮಿಯು ನಂಬಿದೆ. ಜೆಡ್ಎಸ್ ಎಲೆಕ್ಟ್ರಿಕ್ ಜೊತೆಗೆ ಜೆಡ್ಎಸ್ ಸಾಮಾನ್ಯ ಎಸ್‍ಯುವಿ ಮಾದರಿಯನ್ನು ಚೀನಾ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಇದು ಚೀನಾ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಇನ್ನು ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದರು.

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಇತ್ತೀಚಿನ ಸಂವಾದದಲ್ಲಿ, ಎಂಜಿ ಮೋಟರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಚಾಬಾ ಅವರು ಮಾತನಾಡಿ, ಎಂಜಿ ಹೆಕ್ಟರ್ ಗಿಂತ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಹೆಚ್ಚು ಕೈಗೆಟುಕುವಂತಾಗುತ್ತದೆ ಮತ್ತು ಮುಂದಿನ ವರ್ಷದ ಮಧ್ಯಾಂತರ ಅವಧಿಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ಅವರು ಹೇಳಿದ್ದಾರೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಎಸ್‌ಯುವಿಯು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಅನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಜೆಡ್ಎಸ್ ಎಸ್‍ಯುವಿಯಲ್ಲಿ 1.0 ಲೀಟರ್ ಪೆಟ್ರೋಲ್ ಟರ್ಬೋಚಾರ್ಜ್ಡ್, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 109 ಬಿಹೆಚ್‍ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಇದರೊಂದಿಗೆ 1.3 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಮತ್ತು 1.5 ಲೀಟರ್ ಎಂಜಿನ್ ಆಯ್ಕೆಯನ್ನು ಕೂಡ ನೀಡಬಹುದು. ಈ ಜೆಡ್ಎಸ್ ಪೆಟ್ರೋಲ್ ಆವೃತ್ತಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13 ಲಕ್ಷಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಎಸ್‍ಯುವಿಯಲ್ಲಿ ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೇಲ್ ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್ ಮತ್ತು 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್ ಅನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಇದರೊಂದಿಗೆ ಈ ಎಸ್‍ಯುವಿಯಲ್ಲಿ ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಅನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಭಾರತದಲ್ಲಿ ಎಂಜಿ ಮೋಟಾರ್ ಸಂಸ್ಥೆಯು ಬಿಡುಗಡೆಗೊಳಿಸಿದ ಮೊದಲ ಹೆಕ್ಟರ್ ಮಾದರಿಯು ಮಿಡ್ ಎಸ್‍ಯುವಿ ವಿಭಾಗದಲ್ಲಿ ಹೊಸ ಸಂಚಲನವನ್ನು ಮೂಡಿಸಿತು. ಹೆಕ್ಟರ್ ಬಳಿಕ ಎಂಜಿ ಸಂಸ್ಥೆಯು ತನ್ನ ಇತರ ಜನಪ್ರಿಯ ಎಸ್‍ಯುವಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು.

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಎಂಜಿ ತನ್ನ ಹೆಕ್ಟರ್ ಎಸ್‍ಯುವಿಯ ಬಳಿಕ ಭಾರತದಲ್ಲಿ ತನ್ನ ಪೋರ್ಟ್ಫೋಲಿಯೊದಲ್ಲಿರುವ ಝಡ್ಎಸ್ ಇವಿ, ಹೆಕ್ಟರ್ ಪ್ಲಸ್ ಮತ್ತು ಗ್ಲೋಸ್ಟರ್ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಿದರು. ಇದೀಗ ಹೊಸ ಜೆಡ್ಎಸ್ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ನಿಸ್ಸಾನ್ ಕಿಕ್ಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
MG ZS petrol India Launch Details. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X