Just In
- 4 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 7 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 7 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 8 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ
ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ವಾಹನವಾಗಿ ಜೆಡ್ಎಸ್ ಎಸ್ಯುವಿಯನ್ನು ಬಿಡುಗಡೆಗೊಳಿಸಿದರು. ಈ ಜೆಡ್ಎಸ್ ಎಲೆಕ್ಟ್ರಿಕ್ ಎಸ್ಯುವಿಯು ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ.
ಜೆಡ್ಎಸ್ ಇವಿ ಎಸ್ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಯಶ್ವಸಿಯಾಗಿದೆ ಎಂದು ಎಂಜಿ ಮೋಟಾರ್ ಕಂಪಮಿಯು ನಂಬಿದೆ. ಜೆಡ್ಎಸ್ ಎಲೆಕ್ಟ್ರಿಕ್ ಜೊತೆಗೆ ಜೆಡ್ಎಸ್ ಸಾಮಾನ್ಯ ಎಸ್ಯುವಿ ಮಾದರಿಯನ್ನು ಚೀನಾ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಇದು ಚೀನಾ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಇನ್ನು ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಳಿಸಿದ್ದರು.
ಎಕ್ಸ್ಪ್ರೆಸ್ ಡ್ರೈವ್ ನೊಂದಿಗೆ ಇತ್ತೀಚಿನ ಸಂವಾದದಲ್ಲಿ, ಎಂಜಿ ಮೋಟರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಚಾಬಾ ಅವರು ಮಾತನಾಡಿ, ಎಂಜಿ ಹೆಕ್ಟರ್ ಗಿಂತ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಹೆಚ್ಚು ಕೈಗೆಟುಕುವಂತಾಗುತ್ತದೆ ಮತ್ತು ಮುಂದಿನ ವರ್ಷ ಭಾರತದಲ್ಲಿ ಪರಿಚಯಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಈ ಹೊಸ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಇತ್ತೀಚೆಗೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಎಸ್ಯುವಿಯು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್ಬೆಸ್ ಅನ್ನು ಹೊಂದಿದೆ.
ಈ ಎಸ್ಯುವಿಯಲ್ಲಿ ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್ಲ್ಯಾಂಪ್ ಜೊತೆ ಡಿಆರ್ಎಲ್ಎಸ್, ಎಲ್ಇಡಿ ಟೇಲ್ ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್ ಮತ್ತು 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್ ಅನ್ನು ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಇದರೊಂದಿಗೆ ಈ ಎಸ್ಯುವಿಯಲ್ಲಿ ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.
ಈ ಎಸ್ಯುವಿಯಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಅನ್ನು ಹೊಂದಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್
ಈ ಹೊಸ ಜೆಡ್ಎಸ್ ಎಸ್ಯುವಿಯಲ್ಲಿ 1.0 ಲೀಟರ್ ಪೆಟ್ರೋಲ್ ಟರ್ಬೋಚಾರ್ಜ್ಡ್, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 109 ಬಿಹೆಚ್ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಇದರೊಂದಿಗೆ 1.3 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಮತ್ತು 1.5 ಲೀಟರ್ ಎಂಜಿನ್ ಆಯ್ಕೆಯನ್ನು ಕೂಡ ನೀಡಬಹುದು. ಈ ಜೆಡ್ಎಸ್ ಪೆಟ್ರೋಲ್ ಆವೃತ್ತಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13 ಲಕ್ಷಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.
ಈ ಹೊಸ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ನಿಸ್ಸಾನ್ ಕಿಕ್ಸ್ ಎಸ್ಯುವಿಗಳಿಗೆ ಪೈಪೋಟಿ ನೀಡುತ್ತದೆ.