ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ವಾಹನವಾಗಿ ಜೆಡ್ಎಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದರು. ಈ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಯು ಭಾರತದಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಜೆಡ್ಎಸ್ ಇವಿ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಯಶ್ವಸಿಯಾಗಿದೆ ಎಂದು ಎಂಜಿ ಮೋಟಾರ್ ಕಂಪಮಿಯು ನಂಬಿದೆ. ಜೆಡ್ಎಸ್ ಎಲೆಕ್ಟ್ರಿಕ್ ಜೊತೆಗೆ ಜೆಡ್ಎಸ್ ಸಾಮಾನ್ಯ ಎಸ್‍ಯುವಿ ಮಾದರಿಯನ್ನು ಚೀನಾ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಇದು ಚೀನಾ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಇನ್ನು ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದರು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಮಾದರಿಯಲ್ಲೇ ಹೊಸ ವಿನ್ಯಾಸವನ್ನು ಹೊಂದಿರುವ ಜೆಡ್ಎಸ್ ಪೆಟ್ರೋಲ್ ಆವೃತ್ತಿಯನ್ನು ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಇತ್ತೀಚೆಗೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಜೆಡ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಆಟೋಕಾರ್ ಇಂಡಿಯಾ ಬಹಿರಂಗಪಡಿಸಿದೆ. ಈ ಹೊಸ ಎಸ್‌ಯುವಿಯು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಎಸ್‍ಯುವಿಯಲ್ಲಿ ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೇಲ್ ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್ ಮತ್ತು 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್ ಅನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಇದರೊಂದಿಗೆ ಈ ಎಸ್‍ಯುವಿಯಲ್ಲಿ ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಅನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಜೆಡ್ಎಸ್ ಎಸ್‍ಯುವಿಯಲ್ಲಿ 1.0 ಲೀಟರ್ ಪೆಟ್ರೋಲ್ ಟರ್ಬೋಚಾರ್ಜ್ಡ್, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 109 ಬಿಹೆಚ್‍ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 1.3 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಮತ್ತು 1.5 ಲೀಟರ್ ಎಂಜಿನ್ ಆಯ್ಕೆಯನ್ನು ಕೂಡ ನೀಡಬಹುದು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಜೆಡ್ಎಸ್ ಪೆಟ್ರೋಲ್ ಆವೃತ್ತಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13 ಲಕ್ಷಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ನಿಸ್ಸಾನ್ ಕಿಕ್ಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
MG ZS Petrol facelift spotted in India. Read In Kannada.
Story first published: Thursday, September 10, 2020, 18:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X