Just In
- 9 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 10 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 10 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
- 11 hrs ago
ಎರಡನೇ ಬಾರಿ ರೋಲ್ಸ್ ರಾಯ್ಸ್ ಕುಲಿನನ್ ಕಾರು ಖರೀದಿಸಿದ ಮುಖೇಶ್ ಅಂಬಾನಿ
Don't Miss!
- Movies
ಪ್ರತಿಷ್ಟಿತ ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಕನ್ನಡದ ಸ್ಟಾರ್ ನಟ
- News
ರೈತರ ಪ್ರತಿಭಟನೆ: ಜನವರಿ 19ಕ್ಕೆ ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಸಭೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇದೇ ತಿಂಗಳು 16ಕ್ಕೆ ಅನಾವರಣಗೊಳ್ಳಲಿದೆ ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್ಯುವಿ
ನಿಸ್ಸಾನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಇದೇ ತಿಂಗಳು 16ಕ್ಕೆ ಆನ್ಲೈನ್ ಪ್ಲ್ಯಾಟ್ಫಾರ್ಮ್ ಮೂಲಕ ಅನಾವರಣಗೊಳಿಸಲಿದೆ.

ಅಂತರ್ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೊಸದಾಗಿ ಬಿಡುಗಡೆಯಾಗಲಿರುವ 12 ಹೊಸ ನಿಸ್ಸಾನ್ ಕಾರುಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಕಂಪ್ಯಾಕ್ಟ್ ಎಸ್ಯುವಿ ಕಾರು ಕೂಡಾ ಒಂದಾಗಿದ್ದು, ಹೊಸ ಕಾರಿನ ಕಾರಿನ ಬಿಡುಗಡೆ ಕುರಿತಾಗಿ ಈಗಾಗಲೇ ನಿಸ್ಸಾನ್ ಇಂಡಿಯಾ ಕಂಪನಿಯು ವಿವಿಧ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ. ಹೊಸ ಕಾರು ಅನಾವರಣಗೊಂಡ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಪ್ರವೇಶಿಸಲಿದ್ದು, ಗ್ರಾಹಕರ ಆಯ್ಕೆಯಲ್ಲಿ ಹೊಸ ಸಂಚಲನ ಮೂಡಿಸಲಿದೆ.

ನಿಸ್ಸಾನ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರನ್ನು ಸೆಳೆಯಲು ಸಿದ್ದವಾಗಿರುವ ಹೊಸ ಕಾರಿನ ತಾಂತ್ರಿಕ ಅಂಶಗಳು ಈಗಾಗಲೇ ಬಹಿರಂಗವಾಗಿವೆ.

ಸದ್ಯಕ್ಕೆ ಹೊಸ ಕಾರನ್ನು EM2 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಮಾಡಲಾಗಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ. ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್ಯುವಿ 300 ಮಾದರಿಗಳಿಗೆ ಪೈಪೋಟಿಯಾಗಿ ಈ ಕಾರು ಬಿಡುಗಡೆಯಾಗಲಿದ್ದು, ಬೆಲೆ ವಿಚಾರದಲ್ಲೂ ಪ್ರತಿಸ್ಪರ್ಧಿ ಕಾರುಗಳಿಗಳಿಂತಲೂ ಉತ್ತಮವಾಗಿದೆ.

ಮಾರುಕಟ್ಟೆಯಲ್ಲಿರುವ ಕಿಕ್ಸ್ ಎಸ್ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಮ್ಯಾಗ್ನೆಟ್ ಕಾರು ಪೆಟ್ರೋಲ್ ಎಂಜಿನ್ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ವಿನೂತನ ಡಿಸೈನ್ ಪಡೆದುಕೊಂಡಿದೆ.

ಬಿಎಸ್-6 ನಿಯಮ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ಹೈ ಎಂಡ್ ಕಾರುಗಳಲ್ಲಿ ಹೊರತುಪಡಿಸಿ ಸಣ್ಣ ಮತ್ತು ಮಧ್ಯಮ ಗಾತ್ರದ ಕಾರುಗಳಲ್ಲಿ ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡಲಾಗುತ್ತಿದೆ.

ಇದಕ್ಕಾಗಿ ಸಹಭಾಗಿತ್ವದ ಯೋಜನೆ ಅಡಿ ನಿಸ್ಸಾನ್ ಜೊತೆಗೂಡಿರುವ ರೆನಾಲ್ಟ್ ಕಂಪನಿಯು ಮತ್ತಷ್ಟು ಹೊಸ ಪೆಟ್ರೋಲ್ ಎಂಜಿನ್ಗಳ ಅಭಿವೃದ್ದಿಗೆ ಚಾಲನೆ ನೀಡಿದ್ದು, ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಎರಡೂ ಕಂಪನಿಗಳು ಬಳಕೆ ಮಾಡಿಕೊಳ್ಳಲಿವೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ರೆನಾಲ್ಟ್ ಹೊಚ್ಚ ಹೊಸ ಕಿಗರ್ ಮತ್ತು ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್ಯುವಿ ಕಾರಿನಲ್ಲಿ ಒಂದೇ ಮಾದರಿಯ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಗೆ ಲಭ್ಯವಾಗಲಿದ್ದು, ಉತ್ತಮ ಎಂಜಿನ್ ಪರ್ಫಾಮೆನ್ಸ್ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳಲಿವೆ.

ಇನ್ನು ಹೊಸ ಮ್ಯಾಗ್ನೆಟ್ ಕಾರಿನಲ್ಲಿ ಫುಲ್ ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ಲೈಟ್, ಎಲ್ ಶೇಪ್ ಎಲ್ಇಡಿ ಡಿಆರ್ಎಲ್ಎಸ್ ಮತ್ತು ಸನ್ರೂಫ್ ಸೇರಿದಂತೆ ಹಲವು ಕಾರ್ ಕನೆಕ್ಟೆಡ್ ಫೀಚರ್ಸ್ಗಳನ್ನು ನೀಡಲಾಗುತ್ತಿದ್ದು, ಕಿಕ್ಸ್ ಮಾದರಿಯಲ್ಲಿನ ಕೆಲವು ಫೀಚರ್ಸ್ಗಳನ್ನು ಸಹ ಹೊಸ ಕಾರಿನ ಹೊರಭಾಗದ ವಿನ್ಯಾಸಗಳಲ್ಲಿ ಅಳವಡಿಸಲಾಗಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)
ಇದೇ ತಿಂಗಳು 16ಕ್ಕೆ ಅನಾವರಣಗೊಳ್ಳಲಿರುವ ನಿಸ್ಸಾನ್ ಹೊಸ ಮ್ಯಾಗ್ನೆಟ್ ಕಾರು ಅಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9 ಲಕ್ಷ ಬೆಲೆ ಅಂತರದೊಳಗೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.