ಮತ್ತೊಮ್ಮೆ ಸ್ಪಾಟ್ ಟೆಸ್ಟ್​ ನಡೆಸಿದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ನಿಸ್ಸಾನ್ ಕಂಪನಿಯು ತನ್ನ ಹೊಸ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ವಿನ್ಯಾಸದ ಬಗ್ಗೆ ಹಲವು ಮಾಹಿತಿಗಳು ಬಹಿರಂಗವಾಗಿವೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ ನಡೆಸಿದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಮರೆಮಾಚುವಿಕೆ ಇಲ್ಲದೇ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಈ ಹೊಸ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಟೀಮ್ ಬಿಹೆಚ್‍ಪಿ ಬಹಿರಂಗಪಡಿಸಿದೆ. ನಿಸ್ಸಾನ್ ಮ್ಯಾಗ್ನೈಟ್ ರೆನಾಲ್ಟ್-ನಿಸ್ಸಾನ್ ಅಲೈಯನ್ಸ್‌ನ ಸಿಎಮ್‌ಎಫ್-ಎ ಪ್ಲಸ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಇನ್ನು 2015ರ ಟೋಕಿಯೋ ಮೋಟಾರ್ ಶೋನಲ್ಲಿ ದಟ್ಸನ್ ಗೋ-ಕ್ರಾಸ್ ಕಾನ್ಸೆಪ್ಟ್ ಅನ್ನು ಪ್ರದರ್ಶಿಸಿದ್ದರು. ಆದರೆ ಕಡಿಮೆ ಬೆಲೆಯ ದಟ್ಸನ್ ಎಸ್‍ಯುವಿ ಅಸೆಂಬ್ಲಿ ಮಾರ್ಗವನ್ನು ಪೂರೈಸಲು ವಿಫಲವಾಗಿತ್ತು.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ ನಡೆಸಿದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಬ್ಲೂ ಬಾಡಿ ಮತ್ತು ಸಿಲ್ವರ್ ರೂಫ್ ಅನ್ನು ಹೊಂದಿದೆ. ಇದು ಟಾಟಾ ನೆಕ್ಸಾನ್ ನೆಕ್ಸನ್ ಡ್ಯುಯಲ್-ಟೋನ್ ಆವೃತ್ತಿಗೆ ಹೋಲುತ್ತದೆ. ಇದು 2018ರ ಆಟೋ ಎಕ್ಸ್‌ಪೋ ಇನ್ ಕಾನ್ಸೆಪ್ಟ್ ಅವತಾರ್‌ನಲ್ಲಿ ಅನಾವರಣಗೊಂಡಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ ನಡೆಸಿದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ಮ್ಯಾಗ್ನೈಟ್ ಎಸ್‍ಯುವಿಯು ನಿಸ್ಸಾನ್ ಬ್ರ್ಯಾಂಡ್‌ನ ಸಿಗ್ನೇಚರ್ ಹೆಡ್‌ಲ್ಯಾಂಪ್, ಕ್ರೋಮ್ ಆಕಾರದ ಗ್ರಿಲ್, ಎದ್ದು ಕಾಣುವ ಕ್ರೀಸ್ ಲೈನ್‌ಗಳನ್ನು ಹೊಂದಿದೆ. ಈ ಮ್ಯಾಗ್ನೆಟ್ ಎಸ್‍ಯುವಿಯಲ್ಲಿ ಎಲ್ಇಡಿ ಡಿಆರ್‌ಎಲ್ ಗಳನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಅಲಾಯ್ ವ್ಹೀಲ್ ಮತ್ತು ರೂಫ್ ಇಂಟಿಗ್ರೇಟೆಡ್ ಸ್ಪಾಯ್ಲರ್ ಒಳಗೊಂಡಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ ನಡೆಸಿದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ಈ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಹಲವಾರು ನೂತನ ಫೀಚರುಗಳನ್ನು ಹೊಂದಿರಲಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಅತ್ಯಾಧುನಿಕ ಕನೆಕ್ಟಿವಿಟಿ ಫೀಚರುಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ ನಡೆಸಿದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ಕಂಪನಿಯ ಪ್ರಕಾರ ನಿಸ್ಸಾನ್ ಮ್ಯಾಗ್ನೈಟ್ ಕಾನ್ಸೆಪ್ಟ್‌ನ ಇಂಟಿರಿಯರ್ ವಿಶಾಲವಾದದ್ದು, ಅನನ್ಯವಾಗಿ ಆಕಾರದ ಏರ್ ಕಾನ್ ವೆಂಟ್ಸ್ ಮತ್ತು ಮಾರ್ಡನ್ ವಿನ್ಯಾಸದ ಕಾಬ್ಯಾನ್ ಅನ್ನು ಒಳಗೊಂಡಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ ನಡೆಸಿದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಇನ್ಸ್ ಟ್ರೂಮೆಂಟ್ ಕನ್ಸೋಲ್‌ನಲ್ಲಿ ಎಂಐಡಿ, ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಮಲ್ಟಿ-ಫಂಕ್ಷನ್ ಸ್ಟೀಯರಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೊಂದಿರಲಿವೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ ನಡೆಸಿದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ಮ್ಯಾಗ್ನೈಟ್ ಕಾಂಪ್ಯಾಕ್ಟ್-ಎಸ್‌ಯುವಿಯಲ್ಲಿ 1.0-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿರಲಿದೆ. ಈ ಎಂಜಿನ್ 71 ಬಿಹೆಚ್‍ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಜಿನ್ ನೊಂದಿಗೆ 5-ಸ್ಫೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಲಾಗುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ ನಡೆಸಿದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ಹೊಸ ನಿಸ್ಸಾನ್ ಮ್ಯಾಗ್ನೈಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸುಜುಕಿ ಬ್ರಿಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Nissan Magnite Spotted Undisguised In Dual-Tone Colour. Read In Kanada.
Story first published: Thursday, October 8, 2020, 18:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X