Just In
- 8 hrs ago ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- 9 hrs ago Nissan Magnite: ನಿಸ್ಸಾನ್ ಮ್ಯಾಗ್ನೆಟ್ನ ಈ ಮಾದರಿಗಳನ್ನು ಹಿಂಪಡೆಯಲು ನಿರ್ಧಾರ.. ಕಾರಣವೇನು?
- 10 hrs ago Maruti Suzuki: ಮಾರುತಿ ಸುಜುಕಿಯ ಸುರಕ್ಷಿತ ಕಾರುಗಳಿವು.. 8 ಲಕ್ಷ ಆರಂಭಿಕ ಬೆಲೆ
- 10 hrs ago 11 ರೀತಿಯ ವಾಹನಗಳ ಲೈಸೆನ್ಸ್ ಹೊಂದಿರುವ ಅಜ್ಜಿ: ಇವರ ಜೀವನೋತ್ಸಾಹಕ್ಕೆ ನೆಟ್ಟಿಗರು ಫಿಧಾ
Don't Miss!
- Movies Seetha Rama ; ಸತ್ಯ ಹೇಳಲು ಹೊರಟ ಚಾಂದಿನಿಯನ್ನು ತಡೆದ ಭಾರ್ಗವಿ ಮನದಲ್ಲಿ ಸರ್ಪ್ರೈಸ್ ಪ್ಲಾನ್..!
- Sports KKR vs RR IPL 2024: ಜೋಸ್ ದಿ ಬಾಸ್ ಬಟ್ಲರ್ ಆರ್ಭಟಕ್ಕೆ ಕೆಕೆಆರ್ ಹೈರಾಣ; ರಾಯಲ್ ಆಗಿ ಗೆದ್ದ ರಾಜಸ್ಥಾನ
- Lifestyle ಬೇಸಿಗೆಯಲ್ಲಿ ಇಡ್ಲಿ, ದೋಸೆಯ ಹಿಟ್ಟು ಹುಳಿ ಬಂದರೆ ಹುಳಿ ಕಡಿಮೆಯಾಗಲು ಏನು ಮಾಡಬೇಕು?
- News Dwarakish: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ದ್ವಾರಕೀಶ್ ಪಡೆದಿದ್ದ ಮತಗಳೆಷ್ಟು?
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್ಯುವಿ
ನಿಸ್ಸಾನ್ ಕಂಪನಿಯು ಹೊಸ ಮ್ಯಾಗ್ನೆಟ್ ಸಬ್-4 ಮೀಟರ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಬೆಂಗಳೂರಿನಲ್ಲಿ ಈ ಹೊಸ ನಿಸ್ಸಾನ್ ಮ್ಯಾಗ್ನೆಟ್ ಎಸ್ಯುವಿಯು ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.
ನಿಸ್ಸಾನ್ ಕಂಪನಿಯು ಮ್ಯಾಗ್ನೆಟ್ ಎಸ್ಯುವಿಯನ್ನು ಸಂಪೂರ್ಣವಾಗಿ ಮರೆಮಾಚಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಮ್ಯಾಗ್ನೆಟ್ ಎಸ್ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಮ್ಯಾಗ್ನೆಟ್ ಎಸ್ಯುವಿಯು ನಿಸ್ಸಾನ್ ಬ್ರ್ಯಾಂಡ್ನ ಸಿಗ್ನೇಚರ್ ಹೆಡ್ಲ್ಯಾಂಪ್, ಕ್ರೋಮ್ ಆಕಾರದ ಗ್ರಿಲ್ , ಎದ್ದು ಕಾಣುವ ಕ್ರೀಸ್ ಲೈನ್ಗಳನ್ನು ಹೊಂದಿದೆ. ಈ ಮ್ಯಾಗ್ನೆಟ್ ಎಸ್ಯುವಿಯಲ್ಲಿ ಎಲ್ಇಡಿ ಡಿಆರ್ಎಲ್ ಗಳನ್ನು ಹೊಂದಿದೆ.
ಈ ನಿಸ್ಸಾನ್ ಮ್ಯಾಗ್ನೆಟ್ ಎಸ್ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಎಸ್ಯುವಿಯ ಇಂಟಿರಿಯರ್ ನಲ್ಲಿ ಹಲವಾರು ಫೀಚರುಗಳನ್ನು ಹೊಂದಿರಲಿದೆ. ಈ ಎಸ್ಯುವಿಯಲ್ಲಿ ಅತ್ಯಾಧುನಿಕ ಕನೆಕ್ಟಿವಿಟಿ ಫೀಚರುಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಈ ಎಸ್ಯುವಿಯ ಇಂಟಿರಿಯರ್ ನಲ್ಲಿ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಇನ್ಸ್ ಟ್ರೂಮೆಂಟ್ ಕನ್ಸೋಲ್ನಲ್ಲಿ ಎಂಐಡಿ, ಮಲ್ಟಿ-ಫಂಕ್ಷನ್ ಸ್ಟೀಯರಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೊಂದಿರಲಿದೆ.
ರೆನಾಲ್ಟ್ ನಿಸ್ಸಾನ್ ಅನ್ನು ಮಾಡ್ಯುಲರ್ ಪ್ಲಾಟ್ಫಾರ್ಮ್ ಅನ್ನು ಆಧರಿಸಿ ತಯಾರಿಸಲಾಗಿದೆ. ಇದೇ ಪ್ಲಾಟ್ಫಾರ್ಮ್ ಅನ್ನು ಆಧರಿಸಿ ಹೊಸ ರೆನಾಲ್ಟ್ ಕಿಂಗರ್ ಎಸ್ಯುವಿಯನ್ನು ಕೂಡ ಉತ್ಪಾದಿಸಲಾಗುತ್ತದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ
ಹೊಸ ಸಬ್-4 ಮೀಟರ್ ನಿಸ್ಸಾನ್ ಕಾಂಪ್ಯಾಕ್ಟ್ ಎಸ್ಯುವಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು. ಟರ್ಬೋಚಾರ್ಜ್ಡ್ 1 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಶೀಘ್ರದಲ್ಲೇ ರೆನಾಲ್ಟ್ ಟ್ರೈಬರ್ ಕಾಂಪ್ಯಾಕ್ಟ್ ಎಂಪಿವಿಯಲ್ಲಿ ಕೂಡ ಅಳವಡಿಸಲಿದೆ. ಇದೇ ಎಂಜಿನ್ ಅನ್ನು ನಿಸ್ಸಾನ್ ಮ್ಯಾಗ್ನೆಟ್ ಎಸ್ಯುವಿಗೆ ಅಳವಡಿಸಬಹುದು.
ಈ ಎಂಜಿನ್ ಸುಮಾರು 80-100 ಬಿಹೆಚ್ಪಿ ಪವರ್ ಮತ್ತು 150-200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಬಹುದು. ಈ ಎಂಜಿನ್ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು
ಇದರೊಂದಿಗೆ ನಿಸ್ಸಾನ್ ಕಂಪನಿಯು ತನ್ನ 2021ರ ರೋಗ್ ಎಸ್ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಈ ಹೊಸ ನಿಸ್ಸಾನ್ ರೋಗ್ ಎಸ್ಯುವಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.
ಇನ್ನು ಹೊಸ ನಿಸ್ಸಾನ್ ಮ್ಯಾಗ್ನೆಟ್ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಬ್ರಿಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್ಯುವಿ 300 ಎಸ್ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.