Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮತ್ತೊಮ್ಮೆ ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೈಟ್
ನಿಸ್ಸಾನ್ ಕಂಪನಿಯು ತನ್ನ ಹೊಸ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಸಂಪೂರ್ಣವಾಗಿ ಮರೆಮಾಚಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಮ್ಯಾಗ್ನೆಟ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಮ್ಯಾಗ್ನೈಟ್ ಎಸ್‍ಯುವಿಯು ನಿಸ್ಸಾನ್ ಬ್ರ್ಯಾಂಡ್‌ನ ಸಿಗ್ನೇಚರ್ ಹೆಡ್‌ಲ್ಯಾಂಪ್, ಕ್ರೋಮ್ ಆಕಾರದ ಗ್ರಿಲ್ , ಎದ್ದು ಕಾಣುವ ಕ್ರೀಸ್ ಲೈನ್‌ಗಳನ್ನು ಹೊಂದಿದೆ. ಈ ಮ್ಯಾಗ್ನೆಟ್ ಎಸ್‍ಯುವಿಯಲ್ಲಿ ಎಲ್ಇಡಿ ಡಿಆರ್‌ಎಲ್ ಗಳನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಅಲಾಯ್ ವ್ಹೀಲ್ ಮತ್ತು ರೂಫ್ ಇಂಟಿಗ್ರೇಟೆಡ್ ಸ್ಪಾಯ್ಲರ್ ಅನ್ನು ಒಳಗೊಂಡಿದೆ.

ನಿಸ್ಸಾನ್ ಕಂಪನಿಯು ಈಗಾಗಲೇ ಮ್ಯಾಗ್ನೈಟ್ ಕಾನ್ಸೆಪ್ಟ್ ಅನ್ನು ಅನಾವರಣಗೊಳಿಸಲಾಗಿದೆ. ಈ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಒಂದೆರಡು ಬಾರಿ ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಎಲ್ಲಾ ವಾಹನಗಳು ಎಆರ್‌ಎಐನಿಂದ ಪ್ರಮಾಣಪತ್ರವನ್ನು ಪಡೆಯುವ ಮೊದಲು ನಿರ್ದಿಷ್ಟ ಸಂಖ್ಯೆಯ ಕಿಲೋಮೀಟರ್‌ಗಳನ್ನು ಪರೀಕ್ಷೆಯಲ್ಲಿ ಪೂರ್ಣಗೊಳಿಸಬೇಕು.ಏಕರೂಪದ ಪ್ರಮಾಣಪತ್ರವನ್ನು ನೀಡಿದ ನಂತರ ವಾಹನಗಳು ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅರ್ಹವಾಗಿರುತ್ತದೆ.

ಈ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಹಲವಾರು ಫೀಚರುಗಳನ್ನು ಹೊಂದಿರಲಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಅತ್ಯಾಧುನಿಕ ಕನೆಕ್ಟಿವಿಟಿ ಫೀಚರುಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಕಂಪನಿಯ ಪ್ರಕಾರ ನಿಸ್ಸಾನ್ ಮ್ಯಾಗ್ನೈಟ್ ಕಾನ್ಸೆಪ್ಟ್‌ನ ಇಂಟಿರಿಯರ್ ವಿಶಾಲವಾದದ್ದು, ಅನನ್ಯವಾಗಿ ಆಕಾರದ ಏರ್ ಕಾನ್ ವೆಂಟ್ಸ್ ಮತ್ತು ಮಾರ್ಡನ್ ವಿನ್ಯಾಸದ ಕಾಬ್ಯಾನ್ ಅನ್ನು ಒಳಗೊಂಡಿದೆ.

ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಇನ್ಸ್ ಟ್ರೂಮೆಂಟ್ ಕನ್ಸೋಲ್‌ನಲ್ಲಿ ಎಂಐಡಿ, ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಮಲ್ಟಿ-ಫಂಕ್ಷನ್ ಸ್ಟೀಯರಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೊಂದಿರಲಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮ್ಯಾಗ್ನೈಟ್ ಕಾಂಪ್ಯಾಕ್ಟ್-ಎಸ್‌ಯುವಿಯಲ್ಲಿ 1.0-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 71 ಬಿಹೆಚ್‍ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಜಿನ್ ನೊಂದಿಗೆ 5-ಸ್ಫೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಲಾಗುತ್ತದೆ.

ಇನ್ನು ಹೊಸ ನಿಸ್ಸಾನ್ ಮ್ಯಾಗ್ನೈಟ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸುಜುಕಿ ಬ್ರಿಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.