ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ನಿಸ್ಸಾನ್

ನಿಸ್ಸಾನ್ ಕಂಪನಿಯು ತನ್ನ ಹೊಸ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಇದೀಗ ನಿಸ್ಸಾನ್ ಕಂಪನಿಯು ತನ್ನ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‌ರೌಂಡ್ ವೀಡಿಯೋವನ್ನು ಬಿಡುಗಡೆಗೊಳಿಸಿದ್ದಾರೆ.

ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ನಿಸ್ಸಾನ್

ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‌ರೌಂಡ್ ವೀಡಿಯೋದಲ್ಲಿ ಡಿಸೈನ್ ಮ್ಯಾನೇಜರ್, ಟಕುಮಿ ಯೋನಿಯಾಮಾ ಅವರು ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ವಿವರಿಸಿದ್ದಾರೆ. ಡಿಸೈನರ್ ಪ್ರಕಾರ, ಮ್ಯಾಗ್ನೈಟ್ ಟೈಕರ್ ನಿಂದ ಸ್ಫೂರ್ತಿ ಪಡೆದು ಆಕರ್ಷಕ ಲುಕ್ ಅನ್ನು ಹೊಂದಿದೆ. ಮ್ಯಾಗ್ನೆಟ್ ಎಸ್‍ಯುವಿಯು ನಿಸ್ಸಾನ್ ಬ್ರ್ಯಾಂಡ್‌ನ ಸಿಗ್ನೇಚರ್ ಹೆಡ್‌ಲ್ಯಾಂಪ್, ಕ್ರೋಮ್ ಆಕಾರದ ಗ್ರಿಲ್ , ಎದ್ದು ಕಾಣುವ ಕ್ರೀಸ್ ಲೈನ್‌ಗಳನ್ನು ಹೊಂದಿದೆ.

ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ನಿಸ್ಸಾನ್

ಈ ಮ್ಯಾಗ್ನೈಟ್ ಎಸ್‍ಯುವಿಯಲ್ಲಿ ಎಲ್ಇಡಿ ಡಿಆರ್‌ಎಲ್ ಗಳನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಅಲಾಯ್ ವ್ಹೀಲ್ ಮತ್ತು ರೂಫ್ ಇಂಟಿಗ್ರೇಟೆಡ್ ಸ್ಪಾಯ್ಲರ್ ಅನ್ನು ಒಳಗೊಂಡಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ನಿಸ್ಸಾನ್

ಈ ನಿಸ್ಸಾನ್ ಮ್ಯಾಗ್ನೈಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಹಲವಾರು ಫೀಚರುಗಳನ್ನು ಹೊಂದಿರಲಿದೆ. ಈ ಎಸ್‍ಯುವಿಯಲ್ಲಿ ಅತ್ಯಾಧುನಿಕ ಕನೆಕ್ಟಿವಿಟಿ ಫೀಚರುಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ.

ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ನಿಸ್ಸಾನ್

ಕಂಪನಿಯ ಪ್ರಕಾರ ನಿಸ್ಸಾನ್ ಮ್ಯಾಗ್ನೈಟ್ ಕಾನ್ಸೆಪ್ಟ್‌ನ ಇಂಟಿರಿಯರ್ ವಿಶಾಲವಾದದ್ದು, ಅನನ್ಯವಾಗಿ ಆಕಾರದ ಏರ್ ಕಾನ್ ವೆಂಟ್ಸ್ ಮತ್ತು ಮಾರ್ಡನ್ ವಿನ್ಯಾಸದ ಕಾಬ್ಯಾನ್ ಅನ್ನು ಒಳಗೊಂಡಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ನಿಸ್ಸಾನ್

ಮೊನೊ-ಫಾರ್ಮ್ ಆಕಾರದ ಸ್ಪೋರ್ಟಿ-ಕಾಣುವ ಮುಂಭಾಗದ ಸೀಟುಗಳು ಆರಾಮದಾಯಕ ಅನುಭವನ್ನು ಹೆಚ್ಚಿಸುತ್ತದೆ. ಹಿಂಭಾಗದ ಸೀಟುಗಳು ಪ್ರೀಮಿಯಂ ಮಾದರಿಗೆ ಸೇರಿರುವ ಕುಶನಿಂಗ್ ಅನ್ನು ಒಳಗೊಂಡಿದೆ.

ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ನಿಸ್ಸಾನ್

ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಇನ್ಸ್ ಟ್ರೂಮೆಂಟ್ ಕನ್ಸೋಲ್‌ನಲ್ಲಿ ಎಂಐಡಿ, ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಮಲ್ಟಿ-ಫಂಕ್ಷನ್ ಸ್ಟೀಯರಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೊಂದಿರಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮ್ಯಾಗ್ನೈಟ್ ಕಾಂಪ್ಯಾಕ್ಟ್-ಎಸ್‌ಯುವಿಯಲ್ಲಿ 1.0-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿರಲಿದೆ. ಟ್ರೈಬರ್ ಎಂಪಿವಿಯಲ್ಲಿಯು ಕೂಡ ಇದೇ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 71 ಬಿಹೆಚ್‍ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಜಿನ್ ನೊಂದಿಗೆ 5-ಸ್ಫೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಲಾಗುತ್ತದೆ.

ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ನಿಸ್ಸಾನ್

ಇನ್ನು ಹೊಸ ನಿಸ್ಸಾನ್ ಮ್ಯಾಗ್ನೈಟ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಬ್ರಿಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Nissan Magnite Walkaround Video Released. Read In Kannada.
Story first published: Friday, August 28, 2020, 18:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X