ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ನಿಸ್ಸಾನ್ ಮತ್ತು ರೆನಾಲ್ಟ್ ಕಂಪನಿಗಳು ಭಾರತದಲ್ಲಿ ಹೊಸ ಮಾದರಿಯ ಕಾರುಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ನಿಸ್ಸಾನ್ ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಶೀಘ್ರದಲ್ಲೇ ಬಿಡುಗಡೆಯಾಗುವ ಸುಳಿವು ನೀಡಿದೆ.

ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಪ್ರಸ್ತುತ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟವು ತೀವ್ರಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದು, ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮಾದರಿಗಳಿಗೆ ಪೈಪೋಟಿಯಾಗಿ ನಿಸ್ಸಾನ್ ಸಂಸ್ಥೆಯು ಕೂಡಾ ಹೊಸ ವಿನ್ಯಾಸದ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯೊಂದನ್ನು ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿದೆ. ಸದ್ಯಕ್ಕೆ EM2 ಕೋಡ್ ನೆಮ್ ಆಧಾರದ ಮೇಲೆ ಹೊಸ ಕಾರಿನ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ.

ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಮಾರುಕಟ್ಟೆಯಲ್ಲಿರುವ ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಮ್ಯಾಗ್ನೆಟ್ ಕಾರು ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಕಾರಿಗಿಂತಲೂ ಉತ್ತಮ ತಾಂತ್ರಿಕ ಅಂಶಗಳನ್ನು ಪಡೆದುಕೊಳ್ಳುವ ಸುಳಿವು ನೀಡಿದೆ.

ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ರೆನಾಲ್ಟ್ ಕೂಡಾ ಬ್ರೆಝಾ ಮತ್ತು ವೆನ್ಯೂ ಕಾರಿಗೆ ಪೈಪೋಟಿ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಕಿಗರ್ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಸಿದ್ದಗೊಂಡಿರುವ ನಿಸ್ಸಾನ್ ಹೊಸ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಇತ್ತೀಚೆಗೆ ರೆನಾಲ್ಟ್ ಕಾರು ಉತ್ಪಾದನಾ ಸಂಸ್ಥೆಯು ಭಾರತದಲ್ಲಿ ಡೀಸೆಲ್ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವುದಾಗಿ ಅಧಿಕೃತವಾಗಿ ಹೇಳಿಕೊಂಡಿದ್ದು, ಪೆಟ್ರೋಲ್ ಕಾರುಗಳ ಉತ್ಪಾದನೆ ಮೇಲೆ ಹೆಚ್ಚು ಗಮನಹರಿಸಲು ಮುಂದಾಗಿದೆ. ಇದಕ್ಕಾಗಿ ನಿಸ್ಸಾನ್ ಜೊತೆಗೆ ಮತ್ತಷ್ಟು ಹೊಸ ಪೆಟ್ರೋಲ್ ಎಂಜಿನ್‌ಗಳ ಅಭಿವೃದ್ದಿಗೆ ಚಾಲನೆ ನೀಡಿದ್ದು, ಸಹಭಾಗಿತ್ವದ ಯೋಜನೆ ಅಡಿ ನಿರ್ಮಾಣವಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಎರಡು ಸಂಸ್ಥೆಗಳು ಬಳಕೆ ಮಾಡಿಕೊಳ್ಳಲಿವೆ.

ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೀಗಾಗಿ ರೆನಾಲ್ಟ್ ಕಿಗರ್‌ ಮತ್ತು ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಒಂದೇ ಮಾದರಿಯ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಗೆ ಲಭ್ಯವಾಗಲಿದ್ದು, ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.

ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಎಲ್ಇಡಿ ಟೈಲ್‌ಲೈಟ್ ಸೇರಿದಂತೆ ಕಾರ್ ಕನೆಕ್ಟ್ ಫೀಚರ್ಸ್‌ಗಳನ್ನು ನೀಡಲಾಗುತ್ತಿದ್ದು, ಕಿಕ್ಸ್ ಮಾದರಿಯಲ್ಲೇ ಹೊಸ ಕಾರಿನ ಹೊರಭಾಗದ ವಿನ್ಯಾಸಗಳನ್ನು ಅಭಿವೃದ್ದಿಗೊಳಿಸಲಾಗಿದೆ.

ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಮಾಹಿತಿಗಳ ಪ್ರಕಾರ, ನಿಸ್ಸಾನ್ ಹೊಸ ಮ್ಯಾಗ್ನೆಟ್ ಕಾರು ಮುಂದಿನ ಸೆಪ್ಟೆಂಬರ್ ಹೊತ್ತಿಗೆ ಖರೀದಿಗೆ ಲಭ್ಯವಾಗಲಿದ್ದು, ಹೊಸ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಹಂತಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಇದೀಗ ಚಾಲನೆ ನೀಡಲಾಗುತ್ತಿದೆ.

ನಿಸ್ಸಾನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿರುವ ನಿಸ್ಸಾನ್ ಮತ್ತು ರೆನಾಲ್ಟ್ ಸಂಸ್ಥೆಗಳು ಹೊಸ ಕಾರನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ. 8 ಲಕ್ಷದೊಳಗೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

Most Read Articles

Kannada
English summary
Nissan Magnite could be the upcoming Nissan sub-4 metre SUV. Read in Kannada.
Story first published: Tuesday, March 17, 2020, 10:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X