ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಫ್ರೆಂಚ್ ವಾಹನ ತಯಾರಕ ಕಂಪನಿಯಾದ ರೆನಾಲ್ಟ್ ತನ್ನ ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಬೆಲೆಯು ರೂ.10.49 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಈ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಿದ್ದರು. ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಐದು ರೂಪಾಂತರಗಳಲ್ಲಿ ಲಭ್ಯವಿದೆ. ಆರ್‌ಎಕ್ಸ್‌ಇ, ಆರ್‌ಎಕ್ಸ್‌ಎಸ್ ಮತ್ತು ಆರ್‌ಎಕ್ಸ್‌ಝಡ್ ಎಂಬ ಮ್ಯಾನುವಲ್ ರೂಪಾಂತರಗಳ ಬೆಲೆಗಳು ಕ್ರಮವಾಗಿ ರೂ.10.49 ಲಕ್ಷ, ರೂ.11.39 ಲಕ್ಷ ಮತ್ತು ರೂ.11.99 ಲಕ್ಷಗಳಾಗಿದೆ. ಇನ್ನು ಆರ್‌ಎಕ್ಸ್‌ಎಸ್ ಮತ್ತು ಆರ್‌ಎಕ್ಸ್‌ಝಡ್ ಎಂಬ ಆಟೋಮ್ಯಾಟಿಕ್ ರೂಪಾಂತರಗಳ ಬೆಲೆಗಳು ಕ್ರಮವಾಗಿ ರೂ.12.99 ಲಕ್ಷ ಮತ್ತು ರೂ.13.59 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯಲ್ಲಿ 'ಎಚ್‌ಆರ್ 13' 1.3-ಲೀಟರ್, ನಾಲ್ಕು ಸಿಲಿಂಡರ್, ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 156 ಬಿಹೆಚ್‌ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಸಿವಿಟಿ ಯುನಿಟ್ ಅನ್ನು ಜೋಡಿಸಲಾಗಿದೆ. ಇದರಲ್ಲಿ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.5 ಕಿಮೀ ಮೈಲೇಜ್ ಅನ್ನು ನೀಡಿದರೆ, ಸಿವಿಟಿ ಮಾದರಿಯು 16.42 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮುಂಭಾಗದ ಗ್ರಿಲ್ ಮತ್ತು ಫಾಗ್ ಲ್ಯಾಂಪ್ ಗಳಲ್ಲಿ ಎಂಟ್ರಿ ಲೆವೆಲ್ ಗಿಂತ ಕೆಲವು ಸಣ್ಣ ಬದಲಾವಣೆಗಳನ್ನು ಹೊಂದಿದೆ .ಹೊಸ ರೂಪಾಂತರದ ಹಿಂಭಾಗದಲ್ಲಿ ಕಡಿಮೆ ಕ್ಲಾಡಿಂಗ್, ಮರುವಿನ್ಯಾಸಗೊಳಿಸಲಾದ ಬ್ಲ್ಯಾಕ್ ರೂಫ್ ರೈಲ್ ಮತ್ತು ಡಸ್ಟರ್ ಲೋಗೋವಿನ ಅಕ್ಷರಗಳನ್ನು ಕೆಂಪು ಬಣ್ಣಗಳಿಂದ ಕೂಡಿದೆ. ಹೊಸ 17 ಇಂಚಿನ ಅಲಾಯ್ ವ್ಹೀಲ್ ಅನ್ನು ಸಹ ಅಳವಡಿಸಲಾಗಿದೆ.

ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಇನ್ನು ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಮಾರುಕಟ್ಟೆಯಲಿರುವ ಮಾದರಿಯಂತೆ ಪ್ರೊಜೆಕ್ಟರ್ ಹೆಡ್‌ಲೈಟ್, ಎಲ್‌ಇಡಿ ಡಿಆರ್‌ಎಲ್ ಮತ್ತು ಟೈಲ್ ಲೈಟ್‌ಗಳನ್ನು ಮತ್ತು ಅದರ ಹೆಚ್ಚು ಅಗ್ರೇಸಿವ್ ಆಗಿ ಕಾಣುವ ಬಂಪರ್‌ಗಳನ್ನು ಒಳಗೊಂಡಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ರೆನಾಲ್ಟ್ ಇಂಡಿಯಾ ಸಂಸ್ಥೆಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ವೆಂಕಟ್‌ರಾಮ್ ಅವರು ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಬಗ್ಗೆ ಮಾತನಾಡಿ, ಭಾರತದಲ್ಲಿ ಡಸ್ಟರ್ ಸರಣಿಯಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭವಾಗಿದೆ. ಈ ಹೊಸ ಕಾರು ವಿಶ್ವ ದರ್ಜೆಯ ಎಂಜಿನ್ ಅನ್ನು ಹೊಂದಿದೆ. ಡಸ್ಟರ್ ಅತ್ಯಂತ ಕ್ರಿಯಾತ್ಮಕ ವಾಹನ ಮತ್ತು ಮಾರುಕಟ್ಟೆಯಲ್ಲಿ ಬೇಡಿಕೆಯ ಎಸ್‍ಯುವಿಯಾಗಿದೆ ಎಂದು ಹೇಳಿದರು.

ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಈ ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಡ್ಯುಯಲ್-ಟೋನ್ ಡ್ಯಾಶ್‌ಬೋರ್ಡ್‌ನಲ್ಲಿ 7.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋವನ್ನು ಒಳಗೊಂಡಿದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಇನ್ನು ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯಲ್ಲಿ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, ಡ್ರೈವರ್ ಮತ್ತು ಪ್ಯಾಸೆಂಜರ್ ಏರ್‌ಬ್ಯಾಗ್, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ಸೀಟ್ ಬೆಲ್ಟ್ ರಿಮೈಂಡರ್ ಅಲಾರ್ಮ್ ಮತ್ತು ಹೈಸ್ಪೀಡ್ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರುತ್ತದೆ.

ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಈ ಹೊಸ ಎಸ್‍ಯುವಿಯಲ್ಲಿ ಮನರಂಜನೆಗಾಗಿ 4 ಸ್ಪೀಕರ್‌ಗಳು ಮತ್ತು 2 ಫ್ರಂಟ್ ಟ್ವೀಟರ್‌ಗಳೊಂದಿಗೆ ಪ್ರೀಮಿಯಂ ಆಡಿಯೊ ಸಿಸ್ಟಂ ಅನ್ನು ನೀಡಲಾಗಿದೆ. ಈ ಎಸ್‍ಯುವಿಯಲ್ಲಿ ರಿಮೋಟ್ ಪ್ರಿ-ಕೂಲಿಂಗ್ ಕಾರ್ಯವನ್ನು ಸಹ ಹೊಂದಿದೆ.

ಬಿಡುಗಡೆಯಾಯ್ತು ಬಹುನೀರಿಕ್ಷಿತ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ರೆನಾಲ್ಟ್ ಡಸ್ಟರ್ ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನ ಪ್ರಮುಖ ಎಸ್‍ಯುವಿಯಾಗಿದೆ. ಈ ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಕೆಲವು ಕಾಸ್ಮೆಟಿಕ್ ನವೀಕರಣಗಳೊಂದಿಗೆ ಅತ್ಯುತ್ತಮವಾದ ಪರ್ಫಾಮೆನ್ಸ್ ಮಾದರಿಯಾಗಿದೆ.

Most Read Articles

Kannada
English summary
Renault Duster Turbo Launched In India Details. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X