Just In
Don't Miss!
- News
ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: ಹೊಸ ದಾಖಲೆ ಸೃಷ್ಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರು
ಜನಪ್ರಿಯ ಕಾರು ತಯಾರಕ ಕಂಪನಿಯಾದ ರೆನಾಲ್ಟ್ ತನ್ನ ಜೊಯ್ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದೆ. ಫ್ರೆಂಚ್ ಆಟೋ ತಯಾರಕರಾದ ರೆನಾಲ್ಟ್ 2020ರ ಆಟೋ ಎಕ್ಸ್‌ಪೋದಲ್ಲಿ ಜೊಯ್ ಎಲೆಕ್ಟ್ರಿಕ್ ಕಾರನ್ನು ಪ್ರದರ್ಶಿಸಿದ್ದರು.

ಈ ಮಾದರಿಯು ಮಾರುಕಟ್ಟೆಯ ಕಾರ್ಯಸಾಧ್ಯತೆಯನ್ನು ನಿರ್ಣಯಿಸುವುದಾಗಿ ಕಂಪನಿಯು ಘೋಷಿಸಿತು. ಈ ಹೊಸ ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರನ್ನು ಚೆನೈ ಬಳಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ರಶ್ಲೇನ್ ಬಹಿರಂಗಪಡಿಸಿವೆ. ಇದು ದೇಶದ ಬ್ರ್ಯಾಂಡ್‌ನ ಇವಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಪರೀಕ್ಷೆಯಾಗಬಹುದು.

ಕಂಪನಿಯು ತನ್ನ ಯೋಜನೆಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ರೆನಾಲ್ಟ್ ಜೊಯ್ ಜೊತೆ ಇನ್ನು ಖಚಿತಪಡಿಸಿಲ್ಲ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ಆಲ್-ಎಲೆಕ್ಟ್ರಿಕ್ ಕಾರು ಮುಂದಿನ ವರ್ಷದಲ್ಲಿ ಬಿಡುಗಡೆಯಾಗಬಹುದು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರನ್ನು 2012ರ ಜಿನೀವಾ ಮೋಟಾರ್ ಶೋನಲ್ಲಿ ಪ್ರದರ್ಶಿಸಿದ್ದರು. ಸದ್ಯ ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಈ ಎಲೆಕ್ಟ್ರಿಕ್ ಕಾರು ಹಲವಾರು ಟ್ರಿಮ್ ಆಯ್ಕೆಗಳಲ್ಲಿ ಲಭ್ಯವಿದೆ.

ಯುರೋಪಿಯನ್ ಸ್ಪೆಕ್ ರೆನಾಲ್ಟ್ ಜೊಯ್ ಆರ್110 ಮತ್ತು ಟಾಪ್-ಸ್ಪೆಕ್ ಆರ್135 ಎಂಬ ಎರಡು ಬ್ಯಾಟರಿ ಸಂರಚನೆಗಳಲ್ಲಿ ಲಭ್ಯವಿದೆ. ಎರಡೂ ಮಾದರಿಗಳು ಒಂದೇ ರೀತಿಯ ಎಲೆಕ್ಟ್ರಿಕ್ ಪವರ್‌ಟ್ರೇನ್ ಸಂಯೋಜನೆಯನ್ನು ಮೂರು-ಹಂತದ ಎಲೆಕ್ಟ್ರಿಕ್ ಮೋಟರ್‌ನೊಂದಿಗೆ 52 ಕಿ.ವ್ಯಾ ಬ್ಯಾಟರಿ ಪ್ಯಾಕ್‌ಗೆ ಜೋಡಿಸಿವೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಆರ್110 ಮಾದರಿಯಲ್ಲಿರುವ ಪವರ್‌ಟ್ರೇನ್ 107 ಬಿಹೆಚ್‍ಪಿ ಪವರ್ ಮತ್ತು 225 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಮತ್ತೊಂದೆಡೆ ಟಾಪ್-ಸ್ಪೆಕ್ ಆರ್135 ಮಾದರಿಯಲ್ಲಿರುವ ಪವರ್‌ಟ್ರೇನ್ 134 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಆರ್110 ಮಾದರಿಯು 11.4 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ಸ್ಪೀಡ್ ಅನ್ನು ಕ್ರಮಿಸುತ್ತದೆ. ಆರ್110 ಮಾದರಿಯು 135 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಟಾಪ್-ಸ್ಪೆಕ್ ಆರ್135 ಮಾದರಿಯು 9.5 ಸೆಕೆಂಡುಗಳಲ್ಲಿ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಮಾದರಿಯು 140 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರಿನ ಇಂಟಿರಿಯರ್ ನಲ್ಲಿ 9.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದರಲ್ಲಿ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಬ್ರ್ಯಾಂಡ್‌ನ ಇತ್ತೀಚಿನ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಒಳಗೊಂಡಿರುತ್ತದೆ.

ಇದರೊಂದಿಗೆ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಮೌಂಟಡ್ ಕಂಟ್ರೋಲ್ ಗಳೊಂದಿಗೆ ಮಲ್ಟಿಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್ ಎಬಿಎಸ್ ವಿಥ್ ಇಬಿಡಿ, ಮಲ್ಟಿಪಲ್ ಏರ್‌ಬ್ಯಾಗ್, ಹಿಲ್ ಸ್ಟಾರ್ಟ್ ಅಸಿಸ್ಟ್ ಮತ್ತು ಇನ್ನಿತರ ಫೀಚರ್ ಗಳನ್ನು ಹೊಂದಿರಲಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಇನ್ನು ರೆನಾಲ್ಟ್ ಇಂಡಿಯಾ ಕಂಪನಿಯ ಸಣ್ಣ ಹ್ಯಾಚ್‌ಬ್ಯಾಕ್ ಕ್ವಿಡ್ ಮತ್ತು ಸಬ್‌ಕಾಂಪ್ಯಾಕ್ಟ್ ಎಂಪಿವಿ, ಟ್ರೈಬರ್‌ಗೆ ಬಲವಾದ ಬೇಡಿಕೆಯಿಂದಾಗಿ ಮಾರಾಟದಲ್ಲಿ ಚೇತರಿಕೆಯ ಹಾದಿಯಲ್ಲಿದೆ. ಇವೆರಡೂ ತಿಂಗಳಿಗೆ ಸರಾಸರಿ 5000ಕ್ಕೂ ಹೆಚ್ಚು ಯುನಿಟ್ ಗಳು ಮಾರಾಟವಾಗುತ್ತೀವೆ.

ರೆನಾಲ್ಟ್ ಕಂಪನಿಯು ತನ್ನ ಕಿಗರ್ ಎಂಬ ಮೊದಲ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಅನ್ನು ಕಂಪನಿಯು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.

ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ರೆನಾಲ್ಟ್ ಜೊಯ್ ಎಲೆಕ್ಟ್ರಿಕ್ ಕಾರು ಮುಂದಿನ ದಿನಗಳ ಬಿಡುಗಡೆಯಾಗಲಿರುವ ಮಾರುತಿ ವ್ಯಾಗನ್ಆರ್ ಇವಿ, ಟಾಟಾ ಎಚ್‌ಬಿಎಕ್ಸ್ ಇವಿ, ಹ್ಯುಂಡೈ ಎಎಕ್ಸ್1 ಇವಿ ಮತ್ತು ಸಿಟ್ರೊಯೆನ್ ಇವಿ ಮಾದರಿಗಳಿಗೆ ಪೈಪೋಟಿ ನೀಡುತ್ತದೆ.