ಭಾರತದಲ್ಲಿ ಬಿಡುಗಡೆಗೆ ಮುನ್ನ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಕರೋಕ್ ಎಸ್‍ಯುವಿ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಹೊಸ ಕರೋಕ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಸ್ಕೋಡಾ ಕಂಪನಿಯು ತನ್ನ ಹೊಸ ಕರೋಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸುವ ಮೊದಲು ಭಾರತದಲ್ಲಿ ಸ್ಪಾಟ್ ಟೆಸ್ಟ್ ಅಥವಾ ರೋಡ್ ಟೆಸ್ಟ್ ಅನ್ನು ನಡೆಸಿದೆ.

ಭಾರತೀಯ ರಸ್ತೆಗಳಲ್ಲಿ ಸ್ಕೋಡಾ ಕರೋಕ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಟೀಮ್ ಬಿಹೆಚ್‍ಪಿ ಬಹಿರಂಗಪಡಿಸಿದೆ. ದೇಶಾದ್ಯಂತ ಲಾಕ್ ಡೌನ್ ಅನ್ನು ಸಡಿಲಿಕೆಗೊಳಿಸಲಾಗಿದೆ. ಇದರಿಂದಾಗಿ ಭಾರತೀಯ ರಸ್ತೆಗಳಲ್ಲಿ ಬಿಡುಗಡೆಗೊಳಿಸುವ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ್ದಾರೆ. ಇದರಿಂದ ಸ್ಕೋಡಾ ಕಂಪನಿಯು ಹೊಸ ಕರೋಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ ಎಂದು ನಿರೀಕ್ಷಿಸಬಹುದು. ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯನ್ನು ಕೇವಲ ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರ ಬಿಡುಗಡೆಗೊಳಿಸಲಾಗುತ್ತದೆ.

ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಿದೆ. ಹೊಸ ಸ್ಕೋಡಾ ಕರೋಕ್ ಎಸ್‍ಯುವಿಗಾಗಿ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಹೊಸ ಸ್ಕೋಡಾ ಕರೋಕ್ ಆರಂಭದಲ್ಲಿ (ಸಿಬಿಯು) ಕಂಪ್ಲೀಟ್ ಬಿಲ್ಟ್ ಯುನಿಟ್ ಆಗಿ ಲಭ್ಯವಿರುತ್ತದೆ. ಕರೋನಾ ಭೀತಿಯು ಕಡಿಮೆಯಾಗಿ ಸಹಜ ಸ್ಥಿತಿಗೆ ಬಂದಾಗ ಈ ಸ್ಕೋಡಾ ಕರೋಕ್ ಎಸ್‍ಯುವಿಯನ್ನು ಗ್ರಾಹಕರಿಗೆ ವಿತರಿಸಲಾಗುತ್ತದೆ.
MOST READ: ಡೀಲರ್ ಬಳಿ ಕಾಣಿಸಿಕೊಂಡ ಹೊಸ ಸ್ಕೋಡಾ ಸೂಪರ್ಬ್ ಕಾರು

ಬಿಡುಗಡೆಯಾಗಲಿರುವ ಸ್ಕೋಡಾ ಕರೋಕ್ ಎಸ್‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಈ ಸ್ಕೋಡಾ ಕರೋಕ್ ಎಸ್‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ. ಈ ಹೊಸ ಕರೋಕ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.23 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಈ ಎಸ್‍ಯುವಿಯ ಇಂಟಿರಿಯರ್‍ನಲ್ಲಿ ಆ್ಯಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್ ಲೆದರ್ ಅಪ್‍ಹೋಲೆಸ್ಟರಿ ಸೀಟುಗಳನ್ನು ಹೊಂದಿವೆ.
MOST READ: ಖಚಿತವಾಗದ ಬಹುನಿರೀಕ್ಷಿತ ಜಿಮ್ನಿ ಎಸ್‍ಯುವಿಯ ಬಿಡುಗಡೆ

ಹೊಸ ಸ್ಕೋಡಾ ಕರೋಕ್ ಎಸ್‍ಯುವಿ ಹಲವಾರು ಆಧುನಿಕ ಫೀಚರ್ಸ್‍ಗಳನ್ನು ಹೊಂದಿರಲಿದೆ. ಈ ಹೊಸ ಸ್ಕೋಡಾ ಕರೋಕ್ ಆರು ಬಣ್ಣಗಳ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಇದು ಕ್ಯಾಂಡಿ ವೈಟ್, ಮ್ಯಾಗ್ನೆಟಿಕ್ ಬ್ರೌನ್, ಲಾವಾ ಬ್ಲೂ, ಮ್ಯಾಜಿಕ್ ಬ್ಲ್ಯಾಕ್, ಬ್ರಿಲಿಯಂಟ್ ಸಿಲ್ವರ್ ಮತ್ತು ಕ್ವಾಟರ್ಸ್ ಗ್ರೇ ಬಣ್ಣಗಳಾಗಿದೆ.

ಈ ಎಸ್‍ಯುವಿಯು 1.5 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಕಂಪನಿಯು ಹೊಸ ಕರೋಕ್ ಎಸ್‍ಯುವಿಯನ್ನು ಡೀಸೆಲ್ ಎಂಜಿನ್‍ನಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.

ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಜನಪ್ರಿಯ ಎಂಜಿ ಹೆಕ್ಟರ್, ಜೀಪ್ ಕಂಪಾಸ್ ಮತ್ತು ಹ್ಯುಂಡೈ ಟಕ್ಸನ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications