Just In
- 6 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 6 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 7 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 7 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್ಯುವಿ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಹೊಸ ಕರೋಕ್ ಎಸ್ಯುವಿಯನ್ನು ಇತ್ತೀಚಿಗೆ ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಈ ಹೊಸ ಕರೋಕ್ ಎಸ್ಯುವಿಯನ್ನು ಮುಂದಿನ ಮೇ 6ರಂದು ಭಾರತದಲ್ಲಿ ಬಿಡುಗಡೆಗೊಳಿಸಲಿದೆ.
ಸ್ಕೋಡಾ ಕಂಪನಿಯು ತನ್ನ ಹೊಸ ಕರೋಕ್ ಎಸ್ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಿದೆ. ಹೊಸ ಸ್ಕೋಡಾ ಕರೋಕ್ ಎಸ್ಯುವಿಗಾಗಿ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಹೊಸ ಸ್ಕೋಡಾ ಕರೋಕ್ ಆರಂಭದಲ್ಲಿ (ಸಿಬಿಯು) ಕಂಪ್ಲೀಟ್ ಬಿಲ್ಟ್ ಯುನಿಟ್ ಆಗಿ ಲಭ್ಯವಿರುತ್ತದೆ. ಹೊಸ ಸ್ಕೋಡಾ ಕರೋಕ್ ಎಸ್ಯುವಿಯನ್ನು ಕೇವಲ ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರ ಬಿಡುಗಡೆಗೊಳಿಸಲಾಗುತ್ತದೆ.
ಬಿಡುಗಡೆಯಾಗಲಿರುವ ಸ್ಕೋಡಾ ಕರೋಕ್ ಎಸ್ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿರಲಿದೆ. ಈ ಸ್ಕೋಡಾ ಕರೋಕ್ ಎಸ್ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್ಫಾರ್ಮ್ ಅನ್ನು ಆಧರಿಸಿದೆ.
ಈ ಎಸ್ಯುವಿಯ ಇಂಟಿರಿಯರ್ನಲ್ಲಿ ಆ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್ ಲೆದರ್ ಅಪ್ಹೋಲೆಸ್ಟರಿ ಸೀಟುಗಳನ್ನು ಹೊಂದಿವೆ.
ಹೊಸ ಸ್ಕೋಡಾ ಕರೋಕ್ ಎಸ್ಯುವಿ ಹಲವಾರು ಆಧುನಿಕ ಫೀಚರ್ಸ್ಗಳನ್ನು ಹೊಂದಿರಲಿದೆ. ಈ ಹೊಸ ಎಸ್ಯುವಿಯ ಕ್ಯಾಬಿನ್ ಬ್ಲಾಕ್ ಮತ್ತು ಬೀಜ್ ಬಣ್ಣಗಳಲ್ಲಿ ಲಭ್ಯವಿರಲಿದೆ.
ಈ ಎಸ್ಯುವಿಯು 1.5 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 7 ಸ್ಪೀಡ್ ಡಿಎಸ್ಜಿ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ.
ಕಂಪನಿಯು ಹೊಸ ಕರೋಕ್ ಎಸ್ಯುವಿಯನ್ನು ಡೀಸೆಲ್ ಎಂಜಿನ್ನಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.
ದೇಶಿಯ ಮಾರುಕಟ್ಟೆಯಲ್ಲಿ ಒಂದು ಕಾಲದಲ್ಲಿ ಪ್ರಾಬಲ್ಯ ಮೆರೆಯುತ್ತಿದ್ದ ಸ್ಕೋಡಾ ನಿಧಾನವಾಗಿ ತನ್ನ ಬೇಡಿಕೆಯನ್ನು ಕಳೆದುಕೊಂಡಿದೆ. ಇದರಿಂದ ಮತ್ತೆ ಭಾರತದ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಲು ಸಜ್ಜಾಗುತ್ತಿದೆ. ಸ್ಕೋಡಾ ಮುಂದಿನ ಎರಡು ವರ್ಷಗಳಲ್ಲಿ 2.0 ಯೋಜನೆಯಡಿಯಲ್ಲಿ ಹಲವು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ.
ಹೊಸ ಸ್ಕೋಡಾ ಕರೋಕ್ ಎಸ್ಯುವಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಎಂಜಿ ಹೆಕ್ಟರ್, ಜೀಪ್ ಕಂಪಾಸ್ ಮತ್ತು ಹ್ಯುಂಡೈ ಟಕ್ಸನ್ ಎಸ್ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.