Just In
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ ಆಕರ್ಷಕ ಲುಕ್ ಮತ್ತು ನೂತನ ಫೀಚರ್ಸ್‍ಗಳನ್ನು ಬಿಡುಗಡೆಯಾಗಲಿದೆ.

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪಾತ್ಯ ಸಾಧಿಸಲು ಸಜ್ಜಾಗುತ್ತಿದೆ. ಭಾರತದಲ್ಲಿ 2.0 ಯೋಜನೆಯಡಿ ಮುಂದಿನ ವರ್ಷದಿಂದ ಹೆಚ್ಚು ಸ್ಥಳೀಯವಾಗಿ ವಾಹನಗಳನ್ನು ಉತ್ಪಾದಿಸಲು ಪ್ರಾಮುಖ್ಯತೆಯನ್ನು ನೀಡುತ್ತದೆ. ಮುಂಬರುವ ವರ್ಷಗಳಲ್ಲಿ ಫೋಕ್ಸ್ ವ್ಯಾಗನ್ ಕಂಪನಿಯೊಂದಿಗೆ ಜೊತೆಗೂಡಿ ಒಂದು ಬಿಲಿಯನ್ ಯುರೋಗಳಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ ತನ್ನ ಮಾರುಕಟ್ಟೆ ಪಾಲನ್ನು ವಿಸ್ತರಿಸಲು ಯೋಜನೆ ರೂಪಿಸಿದೆ.

ಹೊಸ ಕೊಡಿಯಾಕ್ ಆಕರ್ಷಕ ಲುಕ್ ಮತ್ತು ನೂತನ ಫೀಚರ್ಸ್‍ಗಳನ್ನು ಬಿಡುಗಡೆಯಾಗಲಿದೆ. ಹೊಸ ಕೊಡಿಯಾಕ್ ಎಸ್‍ಯುವಿಯು ಮುಂದಿನ ವರ್ಷದ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಇತ್ತೀಚೆಗೆ ಭಾರತದಲ್ಲಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

2020ರ ಆಟೋ ಎಕ್ಸ್ ಪೋದಲ್ಲಿ ಈ ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅನಾವರಣಗೊಳಿಸಲಾಗಿತ್ತು. ಹೊಸ ಕೊಡಿಯಾಕ್ ಎಸ್‍ಯುವಿಯು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. 2020ರ ಆಟೋ ಎಕ್ಸ್ ಪೋದಲ್ಲಿ ಈ ಹೊಸ ಕೊಡಿಯಾಕ್ ಎಸ್‍ಯುವಿಯನ್ನು ಅನಾವರಣಗೊಳಿಸಲಾಗಿತ್ತು.

ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ ಡೀಸೆಲ್ ಎಂಜಿನ್ ನೊಂದಿಗೆ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿತ್ತು. ಆದರೆ ಹೊಸ ವರದಿಗಳ ಪ್ರಕಾರ, ಈ ಎಸ್‍ಯುವಿಯಲ್ಲಿ 2.0 ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡ್ಯುಯಲ್-ಕ್ಲಚ್ ಟ್ರಾನ್ಸ್‌ಮಿಷ ಅನ್ನು ನೀಡಲಾಗುತ್ತದೆ. ಕೊಡಿಯಾಕ್ ಆಲ್-ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಎಸ್‍ಯುವಿಯಲ್ಲಿ 360 ಡಿಗ್ರಿ ಕ್ಯಾಮರವನ್ನು ಅಳವಡಿಸಲಾಗಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಕೊಡಿಯಾಕ್ ಫೇಸ್‌ಲಿಫ್ಟ್ ಆಫ್-ರೋಡ್ ಫೀಚರ್ಸ್‍ಗಳನ್ನು ಹೊಂದಿದೆ. ಹೊಸ ಎಸ್‌ಯುವಿಯು ಸ್ಟೈಲ್ ಎಂಬ ಮೂಲ ಮಾದರಿ ಹಾಗೂ ಲೌರಿನ್ ಅಂಡ್ ಕ್ಲೆಮೆಂಟ್ ಎಂಬ ಟಾಪ್ ಮಾದರಿಗಳಲ್ಲಿ ಲಭ್ಯವಿದೆ. ಕೊಡಿಯಾಕ್ ಸ್ಕೌಟ್ ಈ ಸೆಗ್‍ಮೆಂಟಿನಲ್ಲಿರುವ ಇತರ ಎರಡು ರೂಪಾಂತರಗಳಿಗಿಂತ ಉತ್ತಮವಾದ ಆಫ್-ರೋಡರ್ ಆಗಿರಲಿದೆ.

ಈ ಎಸ್‍ಯುವಿನಲ್ಲಿ 18 ಇಂಚಿನ ಅಲಾಯ್ ವ್ಹೀಲ್‍ಗಳು, ಎಲ್‍ಇಡಿ ಹೆಡ್‍ಲ್ಯಾಂಪ್, ಗ್ರಿಲ್, ರೂಫ್ ರೈಲ್ಸ್, ವಿಂಡೋಸ್ ಮತ್ತು ಒಆರ್‍ವಿಎಂ ಹೌಸಿಂಗ್, ಮುಂಭಾಗ ಮತ್ತು ಹಿಂಭಾಗದ ಅಂಡರ್‍ಬಾಡಿ ಪ್ರೊಟೆಕ್ಷನ್ ಸೇರಿದಂತೆ ಹಲವಾರು ಫೀಚರ್‍ಗಳಿವೆ. ಸ್ಕೋಡಾ ಕೊಡಿಯಾಕ್ ಇಂಟಿರಿಯರ್‍ನಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇಂಟಿರಿಯರ್ ಪ್ರೀಮಿಯಂ ಲುಕ್ ಅನ್ನು ಹೊಂದಿದೆ. ಇಂಟಿರಿಯರ್‍ನಲ್ಲಿ ಸೀಟ್‍ಗಳು, ಏರ್‍ಬ್ಯಾಗ್‍ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಪವರ್ ಹೊಂದಾಣಿಕೆ ಮಾಡಬಹುದಾದ ಫ್ರಂಟ್ ಡ್ರೈವರ್ ಮತ್ತು ಪ್ರಯಾಣಿಕರ ಸೀಟ್‍ಗಳು ಮತ್ತು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್‍ಗಳಿವೆ.

ಕೊಡಿಯಾಕ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಹೀಂದ್ರಾ ಜಿ4, ಟೊಯೋಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಕೊಡಿಯಾಕ್ ಎಸ್‍ಯುವಿಯು ಸ್ಕೋಡಾ ಕಂಪನಿಯ ಪ್ರಮುಖ ಎಸ್‍ಯುವಿಗಳಲ್ಲಿ ಒಂದಾಗಿದೆ.