ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ಕೊಡಿಯಾಕ್ ಎಸ್‍‍‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಕೊಡಿಯಾಕ್ ಆಕರ್ಷಕ ಲುಕ್ ಮತ್ತು ಉನ್ನತ ಫೀಚರ್ಸ್‍‍ಗಳನ್ನು ಹೊಂದಿರುವ ಪ್ರೀಮಿಯಂ ಎಸ್‍ಯುವಿಯಾಗಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

2020ರ ಆಟೋ ಎಕ್ಸ್ ಪೋದಲ್ಲಿ ಈ ಹೊಸ ಕೊಡಿಯಾಕ್ ಎಸ್‍‍‍ಯುವಿಯನ್ನು ಅನಾವರಣಗೊಳಿಸಲಾಗಿತ್ತು. ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು ಡೀಸೆಲ್ ಎಂಜಿನ್‍‍ನೊಂದಿಗೆ ಮಾತ್ರ ಲಭ್ಯವಿತ್ತು. ಆದರೆ ಹೊಸ ಸ್ಕೋಡಾ ಪೆಟ್ರೋಲ್ ಆಯ್ಕೆಯನ್ನು ಹೊಂದಿದೆ. ಈ ಹೊಸ ಕೊಡಿಯಾಕ್ ಎಸ್‍‍‍ಯುವಿಯಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 187 ಬಿಹೆಚ್‍ಪಿ ಪವರ್ ಮತ್ತು 320 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡ್ಯುಯಲ್-ಕ್ಲಚ್ ಟ್ರಾನ್ಸ್‌ಮಿಷ ಅನ್ನು ನೀಡಲಾಗುತ್ತದೆ. ಕೊಡಿಯಾಕ್ ಆಲ್-ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಎಸ್‍‍ಯುವಿಯಲ್ಲಿ 360 ಡಿಗ್ರಿ ಕ್ಯಾಮರವನ್ನು ಅಳವಡಿಸಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಕೊಡಿಯಾಕ್ ಆಫ್-ರೋಡ್ ಫೀಚರ್ಸ್‍‍ಗಳನ್ನು ಹೊಂದಿದೆ. ಹೊಸ ಎಸ್‌ಯುವಿಯು ಸ್ಟೈಲ್ ಎಂಬ ಮೂಲ ಮಾದರಿ ಹಾಗೂ ಲೌರಿನ್ ಅಂಡ್ ಕ್ಲೆಮೆಂಟ್ ಎಂಬ ಟಾಪ್ ಮಾದರಿಗಳಲ್ಲಿ ಲಭ್ಯವಿದೆ. ಕೊಡಿಯಾಕ್ ಸ್ಕೌಟ್ ಈ ಸೆಗ್‍‍ಮೆಂಟಿನಲ್ಲಿರುವ ಇತರ ಎರಡು ರೂಪಾಂತರಗಳಿಗಿಂತ ಉತ್ತಮವಾದ ಆಫ್-ರೋಡರ್ ಆಗಿರಲಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಈ ಎಸ್‍‍ಯು‍ವಿನಲ್ಲಿ 18 ಇಂಚಿನ ಅಲಾಯ್ ವ್ಹೀಲ್‍‍ಗಳು, ಎಲ್‍ಇ‍ಡಿ ಹೆಡ್‍‍ಲ್ಯಾಂಪ್, ಗ್ರಿಲ್, ರೂಫ್ ರೈಲ್ಸ್, ವಿಂಡೋಸ್ ಮತ್ತು ಒಆರ್‍‍ವಿಎಂ ಹೌಸಿಂಗ್, ಮುಂಭಾಗ ಮತ್ತು ಹಿಂಭಾಗದ ಅಂಡ‍‍ರ್‍‍ಬಾಡಿ ಪ್ರೊಟೆಕ್ಷನ್ ಸೇರಿದಂತೆ ಹಲವಾರು ಫೀಚರ್‍‍ಗಳಿವೆ. ಸ್ಕೋಡಾ ಕೊಡಿಯಾಕ್ ಇಂಟಿರಿಯರ್‍‍ನಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಇಂಟಿರಿಯರ್ ಪ್ರೀಮಿಯಂ ಲುಕ್ ಅನ್ನು ಹೊಂದಿದೆ. ಇಂಟಿರಿಯರ್‍‍ನಲ್ಲಿ ಸೀಟ್‍ಗಳು, ಏರ್‍‍ಬ್ಯಾಗ್‍ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಪವರ್ ಹೊಂದಾಣಿಕೆ ಮಾಡಬಹುದಾದ ಫ್ರಂಟ್ ಡ್ರೈವರ್ ಮತ್ತು ಪ್ರಯಾಣಿಕರ ಸೀಟ್‍‍ಗಳು ಮತ್ತು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್‍‍ಗಳಿವೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಇದರೊಂದಿಗೆ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ 9.2 ಇಂಚಿನ ಟಚ್‍‍ಸ್ಕ್ರೀನ್ ಇನ್ಪೋಟೈನ್‍‍ಮೆಂಟ್ ಸಿಸ್ಟಂ ಅನ್ನು 10 ಸ್ಪೀಕರ್ 575 ಡಬ್ಲ್ಯು ಕ್ಯಾಂಟನ್ ಸೌಂಡ್ ಸಿಸ್ಟಂಗೆ ಜೋಡಿಸಲಾಗಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಇನ್ನು ಸ್ಟ್ಯಾಂಡರ್ಡ್ ಕೊಡಿಯಾಕ್‍‍ನಲ್ಲಿರುವ ಟಯರ್ ಫ್ರೆಶರ್ ಮಾನಿಟರಿಂಗ್ ಸಿಸ್ಟಂ ಮತ್ತು ಆಫ್ ರೋಡ್ ಡ್ರೈವ್ ಮೋಡ್ ವೈಶಿಷ್ಟ್ಯಗಳು ಈ ಟಾಪ್ ಎಂಡ್ ಎಸ್‍‍ಯುವಿಯಲ್ಲಿ ಲಭ್ಯವಿಲ್ಲ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಕೊಡಿಯಾಕ್ ಎಸ್‍ಯುವಿಯು ಸ್ಕೋಡಾ ಕಂಪನಿಯ ಪ್ರಮುಖ ಎಸ್‍‍ಯು‍ವಿಗಳಲ್ಲಿ ಒಂದಾಗಿದೆ. ಕೊಡಿಯಾಕ್ ಎಸ್‍‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಹೀಂದ್ರಾ ಜಿ4, ಟೊಯೋಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda Kodiaq to get a 2.0L turbo petrol engine. Read In Kannada.
Story first published: Tuesday, June 16, 2020, 18:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X