ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಮಾರಾಟವನ್ನು ಪುನಾರಂಭಿಸಿದ ಸ್ಕೋಡಾ
ಸ್ಕೋಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರಿನ 200 ಯುನಿಟ್‍ಗಳನ್ನು ಮಾರಾಟ ಮಾಡಲಾಗಿದೆ ಎಂದು ಈ ಹಿಂದೆ ವರದಿಗಳು ಪ್ರಕಟವಾಗಿತ್ತು. ಆದರೆ ಇದರಲ್ಲಿ ಕೆಲವರು ಈ ಕಾರನ್ನು ಬುಕ್ಕಿಂಗ್ ಮಾಡಿ ನಂತರ ಅದನ್ನು ರದ್ದುಪಡಿಸಲಾಗಿದೆ.

ಸ್ಕೋಡಾ ಕಂಪನಿಯು ಹೇಳುವ ಪ್ರಕಾರ, ಆರಂಭದಲ್ಲಿ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಮಾರಾಟವನ್ನು ಮಾಡಿದ್ದಾರೆ. ಆದರೆ ಕರೋನಾ ಭೀತಿಯಿಂದಾಗಿ ಬುಕ್ಕಿಂಗ್ ಮಾಡಿದ ಕೆಲವರು ರದ್ದುಗೊಳಿಸಿದ್ದಾರೆ. ಇದರಿಂದ ಆಕ್ಟೀವಿಯಾ ಆರ್‍ಎಸ್ 245 ಕಾರು ಇನ್ನು ಕೂಡ ಮಾರಾಟಕ್ಕೆ ಲಭ್ಯವಿದೆ. ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ ಎಂದು ಕಂಪನಿ ಹೇಳಿದೆ.

ಸ್ಕೋಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಕೇವಲ 200 ಯುನಿಟ್‍ಗಳಿಗೆ ಸೀಮಿತಗೊಳಿಸಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಸ್ಕೋಡಾ ಇಂಡಿಯಾ ಕಂಪನಿಯು ಎಲ್ಲಾ ಯುನಿಟ್ ಗಳು ಮಾರಾಟವಾಗಿರುವುದರಿಂದ ಬುಕ್ಕಿಂಗ್ ಅನ್ನು ಕ್ಲೋಸ್ ಮಾಡಿದ್ದರು.
MOST READ: ಭಾರತದಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ಸ್ಕೋಡಾ ಕರೋಕ್ ಎಸ್‍ಯುವಿ

ಆದರೆ ಕೆಲವು ಗ್ರಾಹಕರು ಬುಕ್ಕಿಂಗ್ ಮಾಡಿ ನಂತರ ರದ್ದುಪಡಿಸಿದ್ದರು. ಇದರಿಂದಾಗಿ ಈ ಕಾರುಗಳ ಮಾರಾಟವನ್ನು ಸ್ಕೋಡಾ ಪುನಾರಂಭಿಸಿದೆ. ಸೀಮಿತ ಆವೃತ್ತಿಯಾದ ಸ್ಕೊಡಾ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಖರೀದಿಸಲು ಗ್ರಾಹಕರಿಗೆ ಸ್ಕೋಡಾ ಅವಕಾಶ ನೀಡಿದೆ.

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.36 ಲಕ್ಷಗಳಾಗಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಮೊದಲ ಯುನಿಟ್ ಅನ್ನು ಇತ್ತೀಚೆಗೆ ಗೋವಾದಲ್ಲಿ ವಿತರಿಸಲಾಗಿದೆ. ಬ್ಲೂ ಬಣ್ಣದ ಈ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಹಲವು ರೀತಿಯ ಸುರಕ್ಷತಾ ಕ್ರಮವನ್ನು ಪಾಲಿಸಿ ವಿತರಿಸಲಾಗಿದೆ.
MOST READ: ಭಾರತದಲ್ಲಿ ಬಿಡುಗಡೆಯಾಯ್ತು ಅತಿ ವೇಗದ ಹೊಸ ಮರ್ಸಿಡಿಸ್ ಎಎಂಜಿ ಜಿಟಿ-ಆರ್ ಕಾರು

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಸೆಡಾನ್ ಇಂಟಿರಿಯರ್‍ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍ನೆಟ್ ಕನೆಕ್ಟಿವಿಟಿ ಫೀಚರ್ಸ್‍ಗಳೊಂದಿಗೆ ಎಂಟು ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಸೆಡಾನ್ 2.0 ಲೀಟರ್ ಟಿಎಸ್‍ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 242 ಬಿಹೆಚ್‍ಪಿ ಪವರ್ ಮತ್ತು 370 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಹೋಂಡಾ ಡಬ್ಲ್ಯುಆರ್-ವಿ ಫೇಸ್‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಸೆಡಾನ್ ಕೇವಲ 6.6 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್, ಬಿಎಂಡಬ್ಲ್ಯೂ 3 ಸೀರಿಸ್ ಮತ್ತು ಜಾಗ್ವಾರ್ ಎಕ್ಸ್‌ಇ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications








