Just In
Don't Miss!
- News
ಖಾತೆ ಹಂಚಿಕೆ ಕುರಿತಂತೆ ಡಾ. ಸುಧಾಕರ್ ವಿಚಾರದಲ್ಲಿ ಎಲ್ಲರೂ ತಟಸ್ಥ ನಿಲುವು ತಾಳಿದ್ಯಾಕೆ?
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಗಲಿದೆ ಪವರ್‌ಫುಲ್ ಸ್ಕೋಡಾ ಆಕ್ಟೀವಿಯಾ ಸೆಡಾನ್
ಸ್ಕೋಡಾ ಕಂಪನಿಯು ತನ್ನ ಹೊಸ ತಲೆಮಾರಿನ ಆಕ್ಟೀವಿಯಾ ಕಾರನ್ನು ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಜಾಗತಿಕವಾಗಿ ಅನಾವರಣಗೊಳಿಸಿತ್ತು. ಇದೀಗ ಸ್ಕೋಡಾ ಇಂಡಿಯಾ ಕಂಪನಿಯು ಹೊಸ ತಲೆಮಾರಿನ ಆಕ್ಟೀವಿಯಾ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಹಿಂದಿನ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಈ ಕಾರು ಉತ್ತಮವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಿದೆ. ಆದರೆ ಸ್ಕೋಡಾ ಕಂಪನಿಯು ಈ ಆಕ್ಟೀವಿಯಾ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ. ಆದರೆ ಈ ವರ್ಷದ ಕೊನೆಯಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಆಕ್ಟೀವಿಯಾ ಕಾರನ್ನು ಬಿಡುಗಡೆಗೊಳಿಸಬೇಕಿತ್ತು. ಆದರೆ ಸ್ಕೋಡಾ ಕಂಪನಿಯು ಈ ಕಾರಿನ ಬಿಡುಗಡೆಯನ್ನು ಮುಂದಿನ ವರ್ಷಕ್ಕೆ ಮುಂದೂಡಿದೆ.

ಹೊಸ ಆಕ್ಟೀವಿಯಾ ಕಾರನ್ನು ಮುಂದಿನ ವರ್ಷದ ಮದ್ಯದಲ್ಲಿ ಬಿಡುಗಡೆಗೊಳಿಸಲಿದೆ ಎಂದು ಸ್ಕೋಡಾ ಕಂಪನಿಯು ಹೇಳಿದೆ. ಇನ್ನು ಸ್ಕೋಡಾ ಆಕ್ಟೀವಿಯಾ ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಆಕ್ಟೀವಿಯಾ ಕಾರು ಹೊಸ ಎಲ್ಇಡಿ ಹೆಡ್ ಲೈಟ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಹೊಂದಿದೆ. ಇದರೊಂದಿಗೆ ಎಲ್ಇಡಿ ಪಾಗ್ ಲ್ಯಾಂಪ್ ಅನ್ನು ಸಹ ಹೊಂದಿದೆ. ಇದರೊಂದಿಗೆ ಎಲ್‌ಇಡಿ ಟೈಲ್-ಲೈಟ್ ಮತ್ತು ಹೊಸ 17 ಇಂಚಿನ ‘ರೋಟಾರೆ ಏರೋ' ಅಲಾಯ್ ವ್ಹೀಲ್ ಗಳನ್ನು ಹೊಂದಿದೆ.

ಇಂಟಿರಿಯರ್‍ನಲ್ಲಿ ಎಲೆಕ್ಟ್ರಾನಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಫ್ರಂಟ್ ಸೀಟ್ ಮುಂಭಾಗದ ಸೀಟ್ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍ನೆಟ್ ಕನೆಕ್ಟಿವಿಟಿ ಫೀಚರ್ಸ್‍ಗಳೊಂದಿಗೆ 10 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಸ್ಕೋಡಾ ಅಕ್ಟೀವಾ ಕ್ರ್ಯಾಶ್ ಟೆಸ್ಟ್ ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿದೆ. 2020ರ ಸ್ಕೋಡಾ ಆಕ್ಟೀವಿಯಾ ಹೊಸ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯುರೋ ಎನ್‍ಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದಿದೆ.

ಸೈಡ್ ಬ್ಯಾರಿಯರ್ ಟೆಸ್ಟ್ ನಲ್ಲಿ ಕಾರಿನ ಕ್ರಿಟಿಕಲ್ ಬಾಡಿಯು ಉತ್ತಮ ರಕ್ಷಣೆಯನ್ನು ಹೊಂದಿದೆ ಎಂದು ರೇಟಿಂಗ್ ನೀಡಲಾಗಿದೆ. ಹೊಸ ಸ್ಕೋಡಾ ಅಕ್ಟೀವಿಯಾ ಚಿಲ್ಡ್ ಒಕಿಪ್ಯಾಡ್ ಪ್ರೊಟಕ್ಷನ್ ಟೆಸ್ಟ್ ನಲ್ಲಿ 43.2 ಅಂಕಗಳನ್ನು ಗಳಿಸಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಈ ಕಾರು 2,686 ಎಂಎಂ ವ್ಹೀಲ್‍ಬೇಸ್ ಹೊಂದಿದೆ. ಹೊಸ ಆಕ್ಟೀವಿಯಾದ ಬೂಟ್ ಸ್ಪೇಸ್ 600 ಲೀಟರ್ ಆಗಿದ್ದು, ಹಿಂದಿನ ಕಾರಿಗೆ ಹೋಲಿಸಿದರೆ 30 ಲೀಟರ್‍ನಷ್ಟು ಹೆಚ್ಚಾಗಿದೆ. ಹೊಸ ಕಾರಿನಲ್ಲಿ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದ ಬ್ಲ್ಯಾಕ್ ಗ್ರಿಲ್‍ನಲ್ಲಿ ಡ್ಯುಯಲ್ ಸ್ಪ್ಲಿಟ್ ಹೆಡ್‍ಲ್ಯಾಂಪ್‍ಗಳನ್ನು ಹೊಂದಿರಲಿದೆ.

ಇನ್ನು ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನಲ್ಲಿ ವಿಡಬ್ಲ್ಯೂ ಗ್ರೂಪ್‌ನ 2.0 ಎಲ್ ಟಿಎಸ್‌ಐ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿರಲಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಎಂಕ್ಯೂವಿ ಪ್ಲಾಟ್‌ಫಾರ್ಮ್‌ನಡಿಯಲ್ಲಿ ಅಭಿವೃದ್ದಿಪಡಿಸಲಾಗುತ್ತದೆ.