ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡ 2020ರ ಸ್ಕೋಡಾ ರ‍್ಯಾಪಿಡ್

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಸೆಡಾನ್ ಆವೃತ್ತಿಯಾದ ರ‍್ಯಾಪಿಡ್ ಹೊಸ ಮಾದರಿಯನ್ನು ಬಿಡುಗಡೆಗೊಳಿಸಿದ್ದು, ಹೊಸ ಕಾರು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಧ್ಯಮ ಕ್ರಮಾಂಕದ ಸೆಡಾನ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡ 2020ರ ರ‍್ಯಾಪಿಡ್

ರ‍್ಯಾಪಿಡ್ 2020ರ ಮಾದರಿಯು ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿದ್ದು, ಹೊಸ ಕಾರು ಈ ಬಾರಿ 1.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.79 ಲಕ್ಷ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡ 2020ರ ರ‍್ಯಾಪಿಡ್

ಹೊಸ ರ‍್ಯಾಪಿಡ್ ಕಾರು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಐದು ವೆರಿಯೆಂಟ್‌ಗಳಲ್ಲಿ ಅಭಿವೃದ್ದಿಗೊಂಡಿದ್ದು, ರೈಡರ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ವೆರಿಯೆಂಟ್‌ಗಳನ್ನು ಪಡೆದುಕೊಂಡಿದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡ 2020ರ ರ‍್ಯಾಪಿಡ್

ಇದರಲ್ಲಿ ರೈಡರ್ ಮಾದರಿಯು ಆರಂಭಿಕ ಆವೃತ್ತಿಯಾಗಿದ್ದರೆ ಮಾಂಟೆ ಕಾರ್ಲೋ ಆವೃತ್ತಿಯು ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರಿನಲ್ಲಿ ಜೋಡಣೆ ಮಾಡಿರುವ 999-ಸಿಸಿ ಟರ್ಬೋ ಚಾರ್ಜ್ಡ್ ತ್ರಿ ಸಿಲಿಂಡರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ ಮತ್ತು 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡ 2020ರ ರ‍್ಯಾಪಿಡ್

ಹೊಸ ಕಾರಿನಲ್ಲಿ ಸದ್ಯಕ್ಕೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಆಟೋಮ್ಯಾಟಿಕ್ ಕಾರು ಮಾದರಿಯೂ ಮುಂದಿನ ಕೆಲವೇ ತಿಂಗಳಿನಲ್ಲಿ ಖರೀದಿಗೆ ಲಭ್ಯವಾಗಲಿದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡ 2020ರ ರ‍್ಯಾಪಿಡ್

ಬಿಎಸ್-6 ನಿಯಮದಿಂದಾಗಿ ರ‍್ಯಾಪಿಡ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಎಂಪಿಐ ಪೆಟ್ರೋಲ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, ಹೊಸ ಎಂಜಿನ್ ಮಾದರಿಯನ್ನು ಫೋಕ್ಸ್‌ವ್ಯಾಗನ್ ವೆಂಟೊ ಕಾರಿನಿಂದ ಎರವಲು ಪಡೆದುಕೊಳ್ಳಲಾಗಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡ 2020ರ ರ‍್ಯಾಪಿಡ್

ಹೊಸ ಎಂಜಿನ್ ಮಾದರಿಯು ಬಿಎಸ್-6 ನಿಯಮ ಜಾರಿ ನಂತರ ಹೊಸ ಎಮಿಷನ್‌ಗೆ ಅನುಗುಣವಾಗಿ ಅಭಿವೃದ್ದಿಗೊಂಡಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿರುವುದಲ್ಲದೆ ಮೈಲೇಜ್ ಪ್ರಮಾಣದಲ್ಲಿ ಶೇ.23ರಷ್ಟು ಸುಧಾರಣೆಗೊಳ್ಳುವ ಮೂಲಕ ಪ್ರತಿ ಲೀಟರ್ ಪೆಟ್ರೋಲ್‌ಗೆ 18.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡ 2020ರ ರ‍್ಯಾಪಿಡ್

ಇನ್ನು ಹೊಸ ರ‍್ಯಾಪಿಡ್ ಕಾರಿನಲ್ಲಿ ಎಂಜಿನ್ ಬದಲಾವಣೆ ಹೊರತುಪಡಿಸಿ ತಾಂತ್ರಿಕ ಅಂಶಗಳನ್ನು ಈ ಹಿಂದಿನ ಮಾದರಿಯೆಂತೆ ಮುಂದುವರಿಸಲಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್‌ಪ್ಲೇ, ಆಂಡ್ರಾಯಿಡ್ ಆಟೋ, ಸ್ಕಫ್ ಪ್ಲೇಟ್, ಫ್ಲ್ಯಾಟ್ ಬಾಟಮ್ ಸ್ಟ್ರೀರಿಂಗ್ ವೀಲ್ಹ್, ಎಲ್‌ಇಡಿ ಲೈಟ್‌ಗಳು, ಲೆದರ್ ಸೀಟ್‌ಗಳು ಪ್ರಮುಖ ಆಕರ್ಷಣೆಯಾಗಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡ 2020ರ ರ‍್ಯಾಪಿಡ್

ಹಾಗೆಯೇ ಪ್ರಯಾಣಿಕ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ವ್ಯೂ ಕ್ಯಾಮೆರಾ ಮತ್ತು ಸೆನ್ಸಾರ್, ಬ್ರೇಕ್ ಅಸಿಸ್ಟ್ ಮತ್ತು 16-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಪ್ರಮುಖ ಆರು ಬಣ್ಣಗಳ ಆಯ್ಕೆ ಹೊಂದಿದೆ.

Most Read Articles

Kannada
Read more on ಸ್ಕೋಡಾ skoda
English summary
2020 Skoda Rapid 1.0-Litre TSI Launched In India. Read in Kannada.
Story first published: Tuesday, May 26, 2020, 21:24 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X