ಹೊಸ ಕಾನ್ಸೆಪ್ಟ್ ವಿಷನ್ ಕಾರನ್ನು ಬಿಡುಗಡೆಗೊಳಿಸಲಿದೆ ಸ್ಕೋಡಾ
ಸ್ಕೋಡಾ ಆಟೋ ಇಂಡಿಯಾ ತನ್ನ ಮುಂಬರುವ ಎಸ್‍ಯುವಿಯ ಕಾನ್ಸೆಪ್ಟ್ ಆವೃತ್ತಿಯ ಅಧಿಕೃತ ಟೀಸರ್ ಸ್ಕೆಚ್ ಚಿತ್ರಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಸ್ಕೋಡಾ ವಿಷನ್ ಐಎನ್ ಎಂದು ಕರೆಯಲ್ಪಡುವ ಈ ಕಾನ್ಸೆಪ್ಟ್ ಎಸ್‍ಯುವಿಯನ್ನು ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ 2020ರ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನ ಪಡಿಸಲಿದೆ.

ಸ್ಕೋಡಾ ಬಿಡುಗಡೆ ಮಾಡಿದ ಮೊದಲ ಟೀಸರ್ ಸ್ಕೆಚ್ ಚಿತ್ರದಲ್ಲಿ ಹೊಸ ಎಸ್‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಇಂಟಿರಿಯರ್ ಕೂಡ ಪ್ರಿಮಿಯಂ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯು ಕಿಯಾ ಸೆಲ್ಟೋಸ್ ಮತ್ತು ಹ್ಯುಂಡೈ ಕ್ರೆಟಾ ಎಸ್‍ಯುವಿಗಳಿಗೆ ನೇರವಾಗಿ ಪೈಪೋಟಿ ನೀಡುತ್ತದೆ.

ಸ್ಕೋಡಾ ವಿಷನ್ ಕಾನ್ಸೆಪ್ಟ್ ಮಿಡ್ ಎಸ್‍ಯುವಿ ಆಗರಲಿದೆ. ಹೊಸ ಸ್ಕೆಚ್ ಚಿತ್ರದಲ್ಲಿ ಸ್ಕೊಡಾ ಎಸ್‍ಯುವಿಯ ಮುಂಭಾಗ ದೊಡ್ಡ ಗ್ರಿಲ್ ಮತ್ತು ಹೆಚ್ಚು ವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್ ಅನ್ನು ಕಾಣಬಹುದು. ಈ ಎಸ್‍ಯುವಿಯಲ್ಲಿ ಚಾಲಕನ ಸೀಟ್ ಸ್ವಲ್ಪ ಎತ್ತರದಿಂದ ಕೊಡಿದೆ.

ಈ ಎಸ್‍ಯುವಿಯ ಮುಂಭಾಗವು ಸಿಗ್ನೇಚರ್ ವಿನ್ಯಾಸವನ್ನು ಹೊಂದಿದೆ. ಇನ್ನೂ ಮುಂಭಾಗ ಡ್ಯುಯಲ್ ಹೆಡ್‍ಲ್ಯಾಂಪ್, ಏರ್ ಇನ್‍ಟೆಕ್ ಮತ್ತು ಮುಂಭಾಗದ ಬಂಪರ್‍ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್‍ಯುವಿಯ ಎರಡು ಬದಿಗಳು ಮತ್ತು ಹಿಂಭಾಗದ ಪೊಫೈಲ್ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.

ಈ ಎಸ್‍ಯುವಿಯ ಸೈಡ್ ಪ್ರೊಫೈಲ್‍ನಲ್ಲಿ ಶಾರ್ಪ್ ಲೈನ್‍ಗಳನ್ನು ಹೊಂದಿದೆ. ಇದರ ಹಿಂಭಾಗದಲ್ಲಿ ಎಲ್ಇಡಿ ಟೇಲ್‍ಲೈಟ್‍ಗಳು ಮತ್ತು ರೂಫ್ ಮೌಂಟಡ್ ಸ್ಪಾಯ್ಲರ್ ಹೊಂದಿರುವುದರಿಂದ ಎಸ್‍ಯುವಿಗೆ ಸ್ಪೋರ್ಟಿ ಲುಕ್ ಅನ್ನು ನೀಡಿದೆ.

ಹೊಸ ಸ್ಕೋಡಾ ಎಸ್‍ಯುವಿಯು ಪೋಕ್ಸ್ ವ್ಯಾಗನ್ ಎಂಕ್ಯೂಬಿ ಎಒ ಐನ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ. ಹೊಸ ಸ್ಕೊಡಾ ಎಸ್‍ಯುವಿಯು ತನ್ನ ಸರಣಿಯಲ್ಲಿರುವ ಹೊಸ ಕಾಮಿಕ್ ಎಸ್‍ಯುವಿ ಆಧಾರದಲ್ಲಿ ಉತ್ಪಾದಿಸಲಿದೆ.

ಸ್ಕೋಡಾ ಕಾನ್ಸೆಪ್ಟ್ ಇಂಟಿರಿಯರ್ ಸ್ಪೋರ್ಟಿ ಥೀಮ್ ಅನ್ನು ಹೊಂದಿದೆ. ಇಂಟಿರಿಯರ್‍ಲ್ಲಿ ಸೆಂಟರ್ ಕನ್ಸೋಲ್, ಫ್ಲಾಟ್ ಬಾಟಮ್ ಸ್ಟೀಯರಿಂಗ್ ವ್ಹೀಲ್ ಮತ್ತು ದೊಡ್ಡ ಫ್ಲೋಟಿಂಗ್ ಟಚ್‍ಸ್ಕ್ರೀನ್ ಡಿಸ್‍ಪ್ಲೇಯನ್ನು ಅಳವಡಿಸಲಾಗಿದೆ.

ಹೊಸ ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ 1.0 ಲೀಟರ್ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 200 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡಿನ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಬಹುದು.

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿ ನಂತರದ ಹಂತದಲ್ಲಿ ಸ್ಕೊಡಾ ವಿಷನ್ ಐಎನ್ ಕಾನ್ಸೆಪ್ಟ್ ಎಸ್‍ಯುವಿಯನ್ನು ನಂತರದ ಹಂತದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಲಿದೆ. ವಿಷನ್ ಐಎನ್ ಪ್ರೊಡಕ್ಷನ್ ಸ್ಪೆಕ್ ಆವೃತ್ತಿಯು 2021ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಬಹುದು.

ಭಾರತೀಯ ಮಾರುಕಟ್ಟೆಗಳಲ್ಲಿ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸುವುದರಲ್ಲಿ ಸ್ಕೋಡಾ ನಿರತವಾಗಿದೆ. ಸ್ಕೋಡಾ ಇಂಡಿಯಾ ಸಂಸ್ಥೆಯು ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ವಿವಿಧ ಮಾದರಿಯ ಆರು ಹೊಸ ಕಾರು ಮಾದರಿಗಳನ್ನು ಪರಿಚಯಿಸಲು ಸಜ್ಜಾಗುತ್ತಿದೆ.


Click it and Unblock the Notifications








