Just In
- 2 hrs ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 2 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 2 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 4 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಹೊಸ ಸ್ಖೋಡಾ ಕಾಂಪ್ಯಾಕ್ಟ್ ಎಸ್ಯುವಿ
ಸ್ಕೋಡಾ ಆಟೋ ಕಂಪನಿಯು ತನ್ನ ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಾಂಪ್ಯಾಕ್ಟ್ ಎಸ್ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಸ್ಕೋಡಾ ಕಂಪನಿಯು ಈ ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಾಂಪ್ಯಾಕ್ಟ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
ಈ ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಾಂಪ್ಯಾಕ್ಟ್ ಎಸ್ಯುವಿಯನ್ನು ಭಾರತದಲ್ಲಿ ಮುಂದಿನ ವರ್ಷದ ಜನವರಿ ಮತ್ತು ಮಾರ್ಚ್ ತಿಂಗಳ ನಡುವೆ ಪರಿಚಯಿಸಬಹುದು ಎಂದು ವರದಿಗಳಾಗಿದೆ. ಈ ಹೊಸ ಎಸ್ಯುವಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್ಯುವಿಗಳಿಗೆ ನೇರ ಪೈಪೋಟಿಯನ್ನು ನೀಡಲಿದೆ. ಸ್ಕೋಡಾ ಇಂಡಿಯಾ ವಿಡಬ್ಲ್ಯೂ ಎಂಕ್ಯೂಬಿ ಎಒ ಇನ್ ಪ್ಲಾಟ್ಫಾರ್ಮ್ ಅನ್ನು ಆಧರಿಸಿ ಈ ಹೊಸ ಎಸ್ಯುವಿಯನ್ನು ಅಭಿವೃದ್ದಿಪಡಿಸಿದೆ.
ಈ ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಾಂಪ್ಯಾಕ್ಟ್ ಎಸ್ಯುವಿಯು ಇತ್ತೀಚೆಗೆ ಪುಣೆ ಹೆದ್ದಾರಿಯಲ್ಲಿ ಸ್ಪಾಟ್ ಟೆಸ್ಟ್ ನಡೆಸಿದೆ. ಸ್ಕೋಡಾದ ಜಾಗತಿಕ ಎಸ್ಯುವಿಗಳಾದ ಕಾಮಿಕ್, ಕರೋಕ್ ಮತ್ತು ಕೊಡಿಯಾಕ್ನಿಂದ ಸ್ಫೂರ್ತಿ ಪಡೆದ ಮುಂಭಾಗದ ಪ್ರೊಫೈಲ್ ಅನ್ನು ಈ ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಾಂಪ್ಯಾಕ್ಟ್ ಎಸ್ಯುವಿಯು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಭಾರತದಲ್ಲಿ ಹೊಸ ವಿಷನ್ ಕಾನ್ಸೆಪ್ಟ್ ಅನ್ನು ಬಿಡುಗಡೆಗೊಳಿಸಿದ ಬಳಿಕ ಕ್ಲಿಕ್ ಎಂಬ ಹೆಸರನ್ನು ಇಡಬಹುದು. ಕಾಮಿಕ್, ಕರೋಕ್ ಮತ್ತು ಕೊಡಿಯಾಕ್ ಎಲ್ಲಾ ಜನಪ್ರಿಯ ಹೆಸರಿನ ಮೊದಲ ಅಕ್ಷರ ಕೆ ಆಗಿದೆ. ಅದೇ ಕೆ ಎಂಬ ಮೊದಲ ಅಕ್ಷರದಲ್ಲಿ ಬರು ಹೆಸರನ್ನು ಇಡಬಹುದು.
ಈ ಕಾಂಪ್ಯಾಕ್ಟ್ ಎಸ್ಯುವಿಯು ತನ್ನ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್ಯುವಿಯ ಮಾದರಿಯಲ್ಲಿದೆ. ಹೊಸ ಸ್ಕೊಡಾ ಕಾಂಪ್ಯಾಕ್ಟ್ ಎಸ್ಯುವಿಯ ಮುಂಭಾಗ ದೊಡ್ಡ ಗ್ರಿಲ್ ಮತ್ತು ಹೆಚ್ಚು ವಿನ್ಯಾಸಗೊಳಿಸಲಾದ ಬಂಪರ್ ಅನ್ನು ಹೊಂದಿದೆ. ಈ ಎಸ್ಯುವಿಯಲ್ಲಿ ಚಾಲಕನ ಸೀಟ್ ಸ್ವಲ್ಪ ಎತ್ತರವನ್ನು ಹೊಂದಿದೆ. ಈ ಎಸ್ಯುವಿಯ ಮುಂಭಾಗವು ಸಿಗ್ನೇಚರ್ ವಿನ್ಯಾಸವನ್ನು ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಇನ್ನು ಮುಂಭಾಗ ಡ್ಯುಯಲ್ ಹೆಡ್ಲ್ಯಾಂಪ್, ಏರ್ ಇನ್ಟೆಕ್ ಮತ್ತು ಮುಂಭಾಗದ ಬಂಪರ್ನಲ್ಲಿ ಸ್ಕಫ್ ಪ್ಲೇಟ್ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್ಯುವಿಯ ಎರಡು ಬದಿಗಳು ಮತ್ತು ಹಿಂಭಾಗ ಪೊಫೈಲ್ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.
ಈ ಎಸ್ಯುವಿಯ ಸೈಡ್ ಪ್ರೊಫೈಲ್ನಲ್ಲಿ ಶಾರ್ಪ್ ಲೈನ್ಗಳಿವೆ. ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೇಲ್ಲೈಟ್ಗಳು ಮತ್ತು ರೂಫ್ ಮೌಂಟಡ್ ಸ್ಪಾಯ್ಲರ್ ಎಸ್ಯುವಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಹೊಸ ಎಸ್ಯುವಿಯ ಇಂಟಿರಿಯರ್ ಆಕರ್ಷಕವಾಗಿದೆ. ಇನ್ನೂ ಇಂಟಿರಿಯರ್ನಲ್ಲಿ ಮಲ್ಟಿ ಲೇಯರ್ಡ್ ಡ್ಯಾಶ್ಬೋರ್ಡ್ ಮತ್ತು ಅನೇಕ ಬಣ್ಣಗಳನ್ನು ಹೊಂದಿರುವ ಡ್ಯಾಶ್ಬೋರ್ಡ್ಗಳಿವೆ. ಸ್ಕೋಡಾ ಕಾನ್ಸೆಪ್ಟ್ ಇಂಟಿರಿಯರ್ ಸ್ಪೋರ್ಟಿ ಥೀಮ್ ಅನ್ನು ಹೊಂದಿದೆ.
ಇಂಟಿರಿಯರ್ಲ್ಲಿ ಸೆಂಟರ್ ಕನ್ಸೋಲ್, ಫ್ಲಾಟ್ ಬಾಟಮ್ ಸ್ಟೀಯರಿಂಗ್ ವ್ಹೀಲ್ ಮತ್ತು ದೊಡ್ಡ 12 ಇಂಚಿನ ಟಚ್ಸ್ಕ್ರೀನ್ ಡಿಸ್ಪ್ಲೇಯನ್ನು ಅಳವಡಿಸಲಾಗಿದೆ. ವರ್ಚುವಲ್ ಕಾಕ್ಪಿಟ್, ಕಾನ್ಫಿಗರ್ ಮಾಡಬಹುದಾದ ಟಿಎಫ್ಟಿ ಇನ್ಸ್ ಟ್ರೂಮೆಂಟ್ ಪ್ಯಾನೆಲ್ ಅನ್ನು ಹೊಂದಿದೆ.
ಹೊಸ ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾಂಪ್ಯಾಕ್ಟ್ ಎಸ್ಯುವಿಯು 1.5 ಲೀಟರ್ ಟಿಎಸ್ಐ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 7 ಸ್ಪೀಡ್ ಡಿಎಸ್ಜಿ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಹೊಸ ಸ್ಕೋಡಾ ವಿಷನ್ ಕಾನ್ಸೆಪ್ಟ್ ಎಸ್ಯುವಿಯು ಕೇವಲ 8.7 ಸೆಕೆಂಡುಗಳಲ್ಲಿ 0-100 ವೇಗವನ್ನು ಕ್ರಮಿಸುತ್ತದೆ.