Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೊಂಡ ಕೇವಲ 72 ಗಂಟೆಗಳಲ್ಲಿ ಸೋಲ್ಡ್ ಔಟ್ ಆದ ಸುಜುಕಿ ಜಿಮ್ನಿ
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಪೀಳಿಗೆಯ ಸುಜುಕಿ ಜಿಮ್ನಿ ಎಸ್‍ಯುವಿಯು 2018 ರಿಂದ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಈ ಐಕಾನಿಕ್ ಆಫ್-ರೋಡರ್ ಸುಜುಕಿ ಜಿಮ್ನಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ.

ಜಿಮ್ನಿಯನ್ನು ಇತ್ತೀಚೆಗೆ ಮೆಕ್ಸಿಕೊದಲ್ಲಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಿತ್ತು. ಇದು ಕೇವಲ 72 ಗಂಟೆಗಳ ಅವಧಿಯಲ್ಲಿ ಸೋಲ್ಡ್ ಔಟ್ ಆಯ್ತು. ಆರಂಭದಲ್ಲಿ ಜಿಮ್ನಿಯ 1,000 ಯೂನಿಟ್‌ಗಳನ್ನು ಮಾತ್ರ ಮೆಕ್ಸಿಕೊಕ್ಕೆ ಆಮದು ಮಾಡಿಕೊಳ್ಳಲು ಸುಜುಕಿ ಯೋಜಿಸಿದ್ದರು ಮತ್ತು ವಿತರಣೆಗಳನ್ನು 2021ರ ಮೊದಲ ತಿಂಗಳಿಗೆ ನಿಗದಿಪಡಿಸಲಾಗಿದೆ. ಇದೀಗ ಮೊದಲ ಹಂತದಲ್ಲಿ ಬಿಡುಗಡೆಗೊಳಿಸಿದ ಎಲ್ಲಾ ಯುನಿಟ್ ಗಳು ಸೋಲ್ಡ್ ಔಟ್ ಆಗಿದೆ. ಇದರಿಂದ ಗ್ರಾಹಕರ ಆಸಕ್ತಿಯ ಆಧಾರದ ಮೇಲೆ, ಟೋಕನ್ ಮೊತ್ತವನ್ನು ಪಡೆದ ನಂತರ ಹೆಚ್ಚಿನ ಯುನಿಟ್ ಗಳನ್ನು ಮೆಕ್ಸಿಕೊಗೆ ಆಮದು ಮಾಡಿಕೊಳ್ಳಲಿದೆ.

ಅಲ್ಲದೇ ವಿಶ್ವದೆಲ್ಲೆಡೆ ಸುಜುಕಿ ಜಿಮ್ನಿ ಆಫ್-ರೋಡರ್ ಬೇಡಿಕೆಯು ಹೆಚ್ಚಾಗುವುದರಿಂದ ಇದರ ಉತ್ಪಾದನೆಯನು ಹೆಚ್ಚಿಸಲು ಯೋಜಿಸಿದೆ. ಅಲ್ಲದೇ ಸುಜುಕಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯನ್ನು ಜಿಮ್ನಿ ಎಸ್‍ಯುವಿಯ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಯೋಜಿಸಿದೆ.
MOST READ: ಕ್ರ್ಯಾಶ್ ಟೆಸ್ಟ್‌ನಲ್ಲಿ ಶೂನ್ಯ ಸ್ಟಾರ್ ರೇಟಿಂಗ್ ಪಡೆದ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ ಕಾರು

ಸುಜುಕಿ ಕಂಪನಿಯು ಆರಂಭದಲ್ಲಿ ಭಾರತಕ್ಕೆ 3-ಡೋರಿನ ಜಿಮ್ನಿ ಯುನಿಟ್ ಗಳನ್ನು ಆಮದು ಮಾಡಿಕೊಳ್ಳಬಹುದು ಮತ್ತು ಮಾರುತಿ ಸುಜುಕಿಯ ಗುರುಗ್ರಾಮ್ ಆಧಾರಿತ ಸ್ಥಾವರದಲ್ಲಿ ಜೋಡಿಸಬಹುದು. ನಂತರ 2022-23ರ ವೇಳೆಗೆ ಸುಜುಕಿ ಮೋಟಾರ್ ಭಾರತದಲ್ಲಿ 3 ಮತ್ತು 5-ಡೋರಿನ ಜಿಮ್ನಿ ತಯಾರಿಸಲು ಯೋಜಿಸಿದೆ.

ಈ ಎರಡು ಮಾದರಿಗಳನ್ನು ಸ್ಥಳೀಯವಾಗಿ ಭಾರತದಲ್ಲಿ ತಯಾರಿಸಲಾಗುತ್ತದೆ. ಭಾರತದ ಗುರುಗಾಂವ್‌ನಲ್ಲಿರುವ ಕಂಪನಿಯ ಸ್ಥಾವರದಿಂದ ಜಿಮ್ನಿ ಎಸ್‍ಯುವಿಯನ್ನು ಜಪಾನ್ ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುವುದು. ಸೀಮಿತ ಸಂಖ್ಯೆಯ 3-ಡೋರಿನ ಜಿಮ್ನಿ ಎಸ್‍ಯುವಿಯನ್ನು ಜಪಾನ್‌ನಲ್ಲಿ ಸಹ ತಯಾರಿಸಲಾಗುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಮಿನಿ ಎಸ್‍ಯುವಿಯನ್ನು 2018ರಲ್ಲಿ ಜಾಗತಿಕವಾಗಿ ಅನಾವರಣಗೊಂಡಿತು. ಜಿಮ್ನಿ ಮಿನಿ ಎಸ್‍ಯುವಿಯು ಜಾಗತಿಕವಾಗಿ ಅನಾವರಣಗೊಂಡು 1.5 ವರ್ಷಗಳ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಈ ಜಿಮ್ನಿ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಕಂಪನಿ ನಿರ್ಧರಿಸಿರಲಿಲ್ಲ. ಆದರೆ ಆಟೋ ಎಕ್ಸ್ ಪೋದಲ್ಲಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆನ್ನು ಲಭಿಸಿರುವುದರಿಂದ ಭಾರತದಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದೆ. ಹೊಸ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಮಿನಿ ಎಸ್‍ಯುವಿಯಲ್ಲಿ 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಅಥವಾ 4 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಮಿನಿ ಎಸ್‍ಯುವಿಯನ್ನು ಡೀಸೆಲ್ ಅಥವಾ ಹೈಬ್ರಿಡ್ ಆಯ್ಕೆಗಳಲ್ಲಿ ಬಿಡುಗಡೆಗೊಳಿಸುವುದಿಲ್ಲ. ಭಾರತದಲ್ಲಿ ಬಿಡುಗಡೆಯಾದರೆ ಈ ಜಿಮ್ನಿ ಎಸ್‍ಯುವಿ 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿ ಎಸ್‍ಯುವಿಯ ಉತ್ತರಾಧಿಕಾರಿಯಾಗಲಿದೆ.

ಸುಜುಕಿ ಕಂಪನಿಯು 5-ಡೋರಿನ ಜಿಮ್ನಿ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ಜನಪ್ರಿಯ ಸುಜುಕಿ ಜಿಮ್ನಿ ಭಾರತದಲ್ಲಿ ಬಿಡುಗಡೆಯಾದ ಬಳಿಕ ಭರ್ಜರಿಯಾಗಿ ಮಾರಾಟವಾಗುತ್ತಿರುವ ಹೊಸ ಮಹೀಂದ್ರಾ ಥಾರ್ ಎಸ್‍ಯುವಿಗೆ ನೇರವಾಗಿ ಪೈಪೋಟಿ ನೀಡುತ್ತದೆ.