ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿನ ಎಲ್ಲಾ ಹೊಸ ಎಂಜಿನ್‌ನ ಮಾಹಿತಿಗಳು ಬಹಿರಂಗವಾಗಿವೆ.

ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಟೀಂ ಬಿಹೆಚ್‍ಪಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 140 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯ ಬೆಲೆಯು ಕೂಡ ಬಹಿರಂಗವಾಗಿದೆ. ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಟಾಪ್-ಸ್ಪೆಕ್ ರೂಪಾಂತರಕ ಬೆಲೆಯು ರೂ.7.99 ಲಕ್ಷ ದಿಂದ ರೂ.8.75 ಲಕ್ಷಗಳಾಗಿದೆ.

ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯು ಎಕ್ಸ್‌ಇ, ಎಕ್ಸ್‌ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಝಡ್ ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಇನ್ನು ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ. 5.44 ಲಕ್ಷದಿಂದ ರೂ.7.89 ಲಕ್ಷಗಳಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊರತುಪಡಿಸಿ, ಟಾಟಾ ಆಲ್‌‌ಟ್ರೊಜ್ ಇತರ ಎರಡು ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಇದರೊಂದಿಗೆ 1.5-ಲೀಟರ್, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ಲಭ್ಯವಿಲ್ಲ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಟಾಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಆಲ್‌‌ಟ್ರೊಜ್ ಕಾರನ್ನು ಬಿಡುಗಡೆಗೊಳಿಸಿತು. ಟಾಟಾ ಆಲ್‌‌ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಟಾಟಾ ಆಲ್‌‌ಟ್ರೊಜ್ ಕಾರಿನ ಮತ್ತೊಂದು ವಿಶೇಷವೆಂದರೆ ಅದರ ಡೋರುಗಳು 90 ಡಿಗ್ರಿಗಳಷ್ಟು ತೆರೆದುಕೊಳ್ಳುತ್ತವೆ. ಇದರಿಂದಾಗಿ ಈ ಕಾರಿನ ಒಳಗೆ ಸುಲಭವಾಗಿ ಪ್ರವೇಶಿಸಬಹುದಾಗಿದೆ. ಆಲ್‌‌ಟ್ರೊಜ್ ಮಾದರಿಯ ಕ್ಯಾಬಿನ್ ಕೂಡ ಆಕರ್ಷಕವಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಟಾಟಾ ಆಲ್‌‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್‌, ಎಲ್‌ಇಡಿ ಟೈಲ್‌ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್‌ಗಳನ್ನು ಹೊಂದಿವೆ.

ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಈ ಕಾರಿನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಮಾಹಿತಿ ಬಹಿರಂಗ

ಟಾಟಾ ಆಲ್‌‌ಟ್ರೊಜ್ ದೇಶಿಯ ಮಾರುಕಟ್ಟೆಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಟಾಟಾ ಆಲ್‌‌ಟ್ರೊಜ್ ಕಾರನ್ನು ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ. ಅಲ್ಲದೇ ಹಬ್ಬದ ಸೀಸನ್ ನಲ್ಲಿ ಮಾರಾಟವನ್ನು ಹೆಚ್ಚಿಸಲು ಸಹಕಾರಿಯಾಗಬಹುದು.

Article Published On: Tuesday, September 29, 2020, 12:16 [IST]
English summary
Tata Altroz Turbo Petrol Engine Specs Leaked. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+