ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಟಾಟಾ ಕಂಪನಿಯು ಹೊಸ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಸ್ಪಾಟ್ ಟೆಸ್ಟ್ ನಡೆಸಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ

ಭಾರತದಲ್ಲಿ ಟರ್ಬೋ ಪೆಟ್ರೋಲ್ ಆವೃತ್ತಿಯು ಟೆಸ್ಟ್ ಮಾಡುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಹೊಸ ಟಾಟಾ ಆಲ್‌‌ಟ್ರೊಜ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 99 ಬಿಹೆಚ್‌ಪಿ ಪವರ್ ಮತ್ತು 141 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಡ್ಯುಯಲ್-ಕ್ಲಚ್ ನೊಂದಿಗೆ ಸ್ಟ್ಯಾಂಡರ್ಡ್ 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಹೊಸ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯು ಪ್ಯಾಡಲ್ ಶಿಫ್ಟರ್‌ಗಳನ್ನು ಹೊಂದುತ್ತದೆಯೇ ಎಂದು ಕಾದುನೋಡಬೇಕಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ

ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊರತುಪಡಿಸಿ, ಟಾಟಾ ಆಲ್‌‌ಟ್ರೊಜ್ ಇತರ ಎರಡು ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಮಾರುತಿ ಎಸ್-ಪ್ರೆಸ್ಸೊ ಸಿಎನ್‍ಜಿ ಆವೃತ್ತಿ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ

ಇದರೊಂದಿಗೆ 1.5-ಲೀಟರ್, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ಲಭ್ಯವಿಲ್ಲ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ

ಟಾಟಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಆಲ್‌‌ಟ್ರೊಜ್ ಕಾರನ್ನು ಬಿಡುಗಡೆಗೊಳಿಸಿತು. ಟಾಟಾ ಆಲ್‌‌ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ

ಟಾಟಾ ಆಲ್‌‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್‌, ಎಲ್‌ಇಡಿ ಟೈಲ್‌ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್‌ಗಳನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ

ಇದರೊಂದಿಗೆ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ

ಟಾಟಾ ಆಲ್‌‌ಟ್ರೊಜ್ ಕಾರಿನ ಮತ್ತೊಂದು ವಿಶೇಷವೆಂದರೆ ಅದರ ಡೋರುಗಳು 90 ಡಿಗ್ರಿಗಳಷ್ಟು ತೆರೆದುಕೊಳ್ಳುತ್ತವೆ. ಇದರಿಂದಾಗಿ ಈ ಕಾರಿನ ಒಳಗೆ ಸುಲಭವಾಗಿ ಪ್ರವೇಶಿಸಬಹುದಾಗಿದೆ. ಆಲ್‌‌ಟ್ರೊಜ್ ಕಾರಿನ ಕ್ಯಾಬಿನ್ ಆಕರ್ಷಕವಾಗಿದೆ..

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ

ಟಾಟಾ ಆಲ್‌‌ಟ್ರೊಜ್ ದೇಶಿಯ ಮಾರುಕಟ್ಟೆಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಟಾಟಾ ಆಲ್‌‌ಟ್ರೊಜ್ ಕಾರನ್ನು ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

Most Read Articles

Kannada
English summary
Tata Altroz spied testing – Could this be the turbo petrol variant. Read In Kannada.
Story first published: Thursday, June 25, 2020, 14:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X