Just In
- 5 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 6 hrs ago
2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 6 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 6 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಹ್ಯುಂಡೈ ಐ20 ಕಾರಿಗೆ ಪೈಪೋಟಿ ನೀಡಲು ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್
ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಆಲ್‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಟಾಟಾ ಆಲ್‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ.

ಇದೀಗ ಯಾವುದೇ ಮಾರುಮಾಚುವೆಕೆ ಇಲ್ಲದೇ ಮತ್ತೊಮ್ಮೆ ಭಾರತದಲ್ಲಿ ಹೊಸ ಆಲ್‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ಸ್ಪಾಟ್ ಟೆಸ್ಟ್ ನಡೆಸಿದೆ. ಈ ಹೊಸ ಟಾಟಾ ಆಲ್‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ಇದೇ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಈ ಹೊಸ ಟಾಟಾ ಆಲ್‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ನೇರವಾಗಿ ಹೊಸ ಹ್ಯುಂಡೈ ಐ20 ಟರ್ಬೊ-ಪೆಟ್ರೋಲ್ ವೆರಿಯೆಂಟ್ ಕಾರಿಗೆ ಪೈಪೋಟಿ ನೀಡುತ್ತದೆ.

ಹೊಸ ಆಲ್‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಚಿತ್ರಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದರು. ಚಿತ್ರದಲ್ಲಿ ಸ್ಮೋಕ್ಡ್ ಟೈಲ್‌ಲೈಟ್‌ಗಳ ಪಕ್ಕದಲ್ಲಿ ಇರಿಸಲಾಗಿರುವ ‘ಐಟುಬ್ರೊ' ಬ್ಯಾಡ್ಜಿಂಗ್ ಬಹಿರಂಗವಾಗಿದೆ. ಹೊಸ ಆಲ್‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ ಸ್ಪಾಟ್ ಟೆಸ್ಟ್ ವೇಳೆ ‘ಟರ್ಬೊ' ಬ್ಯಾಡ್ಜಿಂಗ್ ಅನ್ನು ಬೂಟ್ ಲಿಡ್ ಕೆಳಕ್ಕೆ ಇರಿಸಲಾಗಿತ್ತು.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹೊಸ ಟಾಟಾ ಆಲ್‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 110 ಬಿಹೆಚ್ಪಿ ಪವರ್ ಮತ್ತು 140 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಟಾಪ್-ಸ್ಪೆಕ್ ರೂಪಾಂತರಕ ಬೆಲೆಯು ರೂ.7.99 ಲಕ್ಷ ದಿಂದ ರೂ.8.75 ಲಕ್ಷಗಳಾಗಿದೆ.

ಟಾಟಾ ಆಲ್‌ಟ್ರೊಜ್ ಎಕ್ಸ್‌ಇ, ಎಕ್ಸ್‌ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಝಡ್ ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿದೆ. ಇನ್ನು ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ. 5.44 ಲಕ್ಷದಿಂದ ರೂ.7.89 ಲಕ್ಷಗಳಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊರತುಪಡಿಸಿ, ಟಾಟಾ ಆಲ್‌ಟ್ರೊಜ್ ಇತರ ಎರಡು ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇದರೊಂದಿಗೆ 1.5-ಲೀಟರ್, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 89 ಬಿಹೆಚ್ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಟಾಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಆಲ್‌ಟ್ರೊಜ್ ಕಾರನ್ನು ಬಿಡುಗಡೆಗೊಳಿಸಿತು. ಟಾಟಾ ಆಲ್‌ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

ಟಾಟಾ ಆಲ್‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೈಲ್‌ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್‌ಗಳನ್ನು ಹೊಂದಿವೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಈ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಟಾಟಾ ಆಲ್‌ಟ್ರೊಜ್ ಕಾರನ್ನು ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ. ಅಲ್ಲದೇ ಹ್ಯುಂಡೈ ಐ20 ಕಾರಿಗೆ ಪ್ರಬಲ ಪೈಪೋಟಿ ನೀಡುತ್ತದೆ.

ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವೆರಿಯೆಂಟ್ ಅನ್ನು ಹೊರತುಪಡಿಸಿ, ಟಾಟಾ ಇನ್ನು ಎರಡು ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಶೀಘ್ರದಲ್ಲೇ ಟಾಟಾ ಕಂಪನಿಯು ಗ್ರಾವಿಟಾಸ್ ಎಸ್‍ಯುವಿಯನ್ನು ಮತ್ತು ಹೆಚ್‌ಬಿಎಕ್ಸ್ ಮಿನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ