Just In
- 5 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 6 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 6 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 7 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯ ಸನಿಹದಲ್ಲಿ ಟಾಟಾ ಆಲ್ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ
ಟಾಟಾ ಮೋಟಾರ್ಸ್ ಕಂಪನಿಯು ಹೊಸ ಆಲ್ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ವರ್ಷದ ಹಬ್ಬದ ಸೀಸನ್ನಲ್ಲಿ ಹೊಸ ಆಲ್ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.
ಟಾಟಾ ಕಂಪನಿಯು ಹೊಸ ಆಲ್ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಸ್ಪಾಟ್ ಟೆಸ್ಟ್ ನಡೆಸಿದೆ. ಭಾರತದಲ್ಲಿ ಟರ್ಬೋ ಪೆಟ್ರೋಲ್ ಆವೃತ್ತಿಯು ಟೆಸ್ಟ್ ಮಾಡುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಹೊಸ ಟಾಟಾ ಆಲ್ಟ್ರೊಜ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 99 ಬಿಹೆಚ್ಪಿ ಪವರ್ ಮತ್ತು 141 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಡ್ಯುಯಲ್-ಕ್ಲಚ್ ನೊಂದಿಗೆ ಸ್ಟ್ಯಾಂಡರ್ಡ್ 5-ಸ್ಪೀಡ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ. ಇನ್ನು ಹೊಸ ಆಲ್ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯು ಪ್ಯಾಡಲ್ ಶಿಫ್ಟರ್ಗಳನ್ನು ಹೊಂದುತ್ತದೆಯೇ ಎಂದು ಕಾದುನೋಡಬೇಕಾಗಿದೆ.
ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊರತುಪಡಿಸಿ, ಟಾಟಾ ಆಲ್ಟ್ರೊಜ್ ಇತರ ಎರಡು ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಇದರೊಂದಿಗೆ 1.5-ಲೀಟರ್, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 89 ಬಿಹೆಚ್ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ. ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿಲ್ಲ.
ಟಾಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್ಬ್ಯಾಕ್ ಆಗಿ ಆಲ್ಟ್ರೊಜ್ ಕಾರನ್ನು ಬಿಡುಗಡೆಗೊಳಿಸಿತು. ಟಾಟಾ ಆಲ್ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್ಆರ್-ವಿ ಎಸ್ಯುವಿ
ಟಾಟಾ ಆಲ್ಟ್ರೊಜ್ ಕಾರಿನ ಮತ್ತೊಂದು ವಿಶೇಷವೆಂದರೆ ಅದರ ಡೋರುಗಳು 90 ಡಿಗ್ರಿಗಳಷ್ಟು ತೆರೆದುಕೊಳ್ಳುತ್ತವೆ. ಇದರಿಂದಾಗಿ ಈ ಕಾರಿನ ಒಳಗೆ ಸುಲಭವಾಗಿ ಪ್ರವೇಶಿಸಬಹುದಾಗಿದೆ. ಆಲ್ಟ್ರೊಜ್ ಮಾದರಿಯ ಕ್ಯಾಬಿನ್ ಆಕರ್ಷಕವಾಗಿದೆ.
ಟಾಟಾ ಆಲ್ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್ಬ್ಯಾಕ್ನಲ್ಲಿ ಎಲ್ಇಡಿ ಡಿಆರ್ಎಲ್, ಎಲ್ಇಡಿ ಟೈಲ್ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್ಗಳನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಈ ಕಾರಿನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್ಬ್ಯಾಕ್ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.
ಟಾಟಾ ಆಲ್ಟ್ರೊಜ್ ದೇಶಿಯ ಮಾರುಕಟ್ಟೆಯ ಪ್ರೀಮಿಯಂ ಹ್ಯಾಚ್ಬ್ಯಾಕ್ ವಿಭಾಗದ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಟಾಟಾ ಆಲ್ಟ್ರೊಜ್ ಕಾರನ್ನು ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ.