Just In
- 1 hr ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 2 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 2 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 3 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೆ ಸಜ್ಜಾದ ಹೊಸ ಟಾಟಾ ಆಲ್ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿ
ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಆಲ್ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲು ಸಜ್ಜಾಗಿದೆ. ಟಾಟಾ ಕಂಪನಿಯು ತನ್ನ ಹೊಸ ಆಲ್ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯನ್ನು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ.
ಟೀಮ್ ಬಿಹೆಚ್ಪಿ ವರದಿಯ ಪ್ರಕಾರ, ಕಂಪನಿಯು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಹೊಸ ಆಲ್ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಸ್ಮೋಕ್ಡ್ ಟೈಲ್ಲೈಟ್ಗಳ ಪಕ್ಕದಲ್ಲಿ ಇರಿಸಲಾಗಿರುವ ‘ಐಟುಬ್ರೊ' ಬ್ಯಾಡ್ಜಿಂಗ್ ಬಹಿರಂಗವಾಗಿದೆ. ಹೊಸ ಆಲ್ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ ಸ್ಪಾಟ್ ಟೆಸ್ಟ್ ವೇಳೆ ‘ಟರ್ಬೊ' ಬ್ಯಾಡ್ಜಿಂಗ್ ಅನ್ನು ಬೂಟ್ ಲಿಡ್ ಕೆಳಕ್ಕೆ ಇರಿಸಲಾಗಿತ್ತು. ವೆಬ್ಸೈಟ್ ಚಿತ್ರದಲ್ಲಿರುವ ಟರ್ಬೊ-ಪೆಟ್ರೋಲ್ ಆವೃತ್ತಿಯು ಉತ್ಪಾದನಾ ಆವೃತ್ತಿಯಾಗಿರಬಹುದು.
ಹೊಸ ಟಾಟಾ ಆಲ್ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 108 ಬಿಹೆಚ್ಪಿ ಪವರ್ ಮತ್ತು 140 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಈ ಪ್ರೀಮಿಯಂ ಹ್ಯಾಚ್ಬ್ಯಾಕ್ನ ಟಾಪ್-ಸ್ಪೆಕ್ ರೂಪಾಂತರಕ ಬೆಲೆಯು ರೂ.7.99 ಲಕ್ಷ ದಿಂದ ರೂ.8.75 ಲಕ್ಷಗಳಾಗಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ
ಟಾಟಾ ಆಲ್ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್ಟಿ ಮತ್ತು ಎಕ್ಸ್ಝಡ್ ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದೆ. ಇನ್ನು ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ. 5.44 ಲಕ್ಷದಿಂದ ರೂ.7.89 ಲಕ್ಷಗಳಾಗಿದೆ.
ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊರತುಪಡಿಸಿ, ಟಾಟಾ ಆಲ್ಟ್ರೊಜ್ ಇತರ ಎರಡು ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಇದರೊಂದಿಗೆ 1.5-ಲೀಟರ್, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 89 ಬಿಹೆಚ್ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ.
ಟಾಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್ಬ್ಯಾಕ್ ಆಗಿ ಆಲ್ಟ್ರೊಜ್ ಕಾರನ್ನು ಬಿಡುಗಡೆಗೊಳಿಸಿತು. ಟಾಟಾ ಆಲ್ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಟಾಟಾ ಆಲ್ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್ಬ್ಯಾಕ್ನಲ್ಲಿ ಎಲ್ಇಡಿ ಡಿಆರ್ಎಲ್, ಎಲ್ಇಡಿ ಟೈಲ್ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್ಗಳನ್ನು ಹೊಂದಿವೆ.
ಈ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್ಬ್ಯಾಕ್ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.
ಟಾಟಾ ಆಲ್ಟ್ರೊಜ್ ಕಾರನ್ನು ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ. ಅಲ್ಲದೇ ಹಬ್ಬದ ಸೀಸನ್ ನಲ್ಲಿ ಮಾರಾಟವನ್ನು ಹೆಚ್ಚಿಸಲು ಸಹಕಾರಿಯಾಗಬಹುದು.