ಸ್ಪಾಟ್ ಟೆಸ್ಟ್ ನಡೆಸಿದ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿ
ಟಾಟಾ ಮೋಟಾರ್ಸ್ ಕಂಪನಿಯು ಹೊಸ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಟಾಟಾ ಕಾರುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಆಲ್‌ಟ್ರೊಜ್ ಕೂಡ ಒಂದಾಗಿದೆ.

ಈ ವರ್ಷದ ಹಬ್ಬದ ಸೀಸನ್‌ನಲ್ಲಿ ಹೊಸ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಟಾಟಾ ಕಂಪನಿಯು ಹೊಸ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಸ್ಪಾಟ್ ಟೆಸ್ಟ್ ನಡೆಸಿದೆ. ಭಾರತದಲ್ಲಿ ಟರ್ಬೋ ಪೆಟ್ರೋಲ್ ಆವೃತ್ತಿಯು ಟೆಸ್ಟ್ ಮಾಡುತ್ತಿರುವುದನ್ನು ಟೀಂ ಬಿಹೆಚ್‍ಪಿ ಬಹಿರಂಗಪಡಿಸಿದೆ. ಹೊಸ ಟಾಟಾ ಆಲ್‌ಟ್ರೊಜ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.

ಈ ಎಂಜಿನ್ 111 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಡ್ಯುಯಲ್-ಕ್ಲಚ್ ನೊಂದಿಗೆ ಸ್ಟ್ಯಾಂಡರ್ಡ್ 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. ಇನ್ನು ಹೊಸ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯು ಪ್ಯಾಡಲ್ ಶಿಫ್ಟರ್‌ಗಳನ್ನು ಹೊಂದುತ್ತದೆಯೇ ಎಂದು ಕಾದುನೋಡಬೇಕಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊರತುಪಡಿಸಿ, ಟಾಟಾ ಆಲ್‌ಟ್ರೊಜ್ ಇತರ ಎರಡು ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇದರೊಂದಿಗೆ 1.5-ಲೀಟರ್, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 89 ಬಿಹೆಚ್ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿಲ್ಲ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಟಾಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಆಲ್‌ಟ್ರೊಜ್ ಕಾರನ್ನು ಬಿಡುಗಡೆಗೊಳಿಸಿತು. ಟಾಟಾ ಆಲ್‌ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

ಟಾಟಾ ಆಲ್‌ಟ್ರೊಜ್ ಕಾರಿನ ಮತ್ತೊಂದು ವಿಶೇಷವೆಂದರೆ ಅದರ ಡೋರುಗಳು 90 ಡಿಗ್ರಿಗಳಷ್ಟು ತೆರೆದುಕೊಳ್ಳುತ್ತವೆ. ಇದರಿಂದಾಗಿ ಈ ಕಾರಿನ ಒಳಗೆ ಸುಲಭವಾಗಿ ಪ್ರವೇಶಿಸಬಹುದಾಗಿದೆ. ಆಲ್‌ಟ್ರೊಜ್ ಮಾದರಿಯ ಕ್ಯಾಬಿನ್ ಕೂಡ ಆಕರ್ಷಕವಾಗಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಟಾಟಾ ಆಲ್‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೈಲ್‌ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್‌ಗಳನ್ನು ಹೊಂದಿದೆ.

ಈ ಕಾರಿನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಟಾಟಾ ಆಲ್‌ಟ್ರೊಜ್ ದೇಶಿಯ ಮಾರುಕಟ್ಟೆಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಟಾಟಾ ಆಲ್‌ಟ್ರೊಜ್ ಕಾರನ್ನು ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ. ಅಲ್ಲದೇ ಟಾಟಾ ಕಂಪನಿಗೆ ಕಾರುಗಳ ಮಾರಾಟವನ್ನು ಹೆಚ್ಚಿಸಲು ಸಹಕಾರಿಯಾಗಬಹುದು.


Click it and Unblock the Notifications