ಕ್ರಿಸ್ಮಸ್ ವಿಶೇಷತೆಗಾಗಿ ಆಲ್‌ಟ್ರೊಜ್ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಹ್ಯಾಚ್‌ಬ್ಯಾಕ್ ಮಾದರಿಯಾದ ಆಲ್‌ಟ್ರೊಜ್ ಕಾರಿನಲ್ಲಿ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಸ್ಪೆಷಲ್ ಎಡಿಷನ್ ಕುರಿತಾಗಿ ಟೀಸರ್ ವಿಡಿಯೋ ಒಂದನ್ನು ಹಂಚಿಕೊಂಡಿದೆ.

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಸದ್ಯ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿರುವ ಆಲ್‌ಟ್ರೊಜ್ ಕಾರು ಮಾದರಿಯು ಬಿಡುಗಡೆಯ ನಂತರ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಇದೀಗ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರಿನಲ್ಲಿ ಮತ್ತೊಂದು ಸ್ಪೆಷಲ್ ಎಂಡಿಷನ್ ಅನ್ನು ಇದೇ ತಿಂಗಳು 15ರಂದು ಬಿಡುಗಡೆ ಮಾಡುತ್ತಿದೆ. ಆದರೆ ಹೊಸ ಕಾರಿನ ಕುರಿತಾಗಿ ನಿಖರ ಮಾಹಿತಿ ನೀಡದ ಟಾಟಾ ಕಂಪನಿಯು ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆಯಾ ಅಥವಾ ಬಹುನೀರಿಕ್ಷಿತ ಟರ್ಬೋ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡಲಿದೆ ಎನ್ನುವ ಮಾಹಿತಿ ನೀಡಿಲ್ಲ.
ಆದರೆ ಟೀಸರ್ ವಿಡಿಯೋದಲ್ಲಿನ ಕಾರು ಮಾದರಿಯ ಚಿತ್ರವು ಸ್ಟ್ಯಾಂಡರ್ಡ್ ಆವೃತ್ತಿಯಂತಿದ್ದು, ಮಧ್ಯಮ ಕ್ರಮಾಂಕದ ಮಾದರಿಯಲ್ಲಿ ಸ್ಪೆಷಲ್ ಎಡಿಷನ್ ಮಾದರಿಯು ಸೀಮಿತ ಅವಧಿಗಾಗಿ ಬಿಡುಗಡೆ ಮಾಡುತ್ತಿರಬಹುದು ಎನ್ನಲಾಗಿದೆ.

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಕಾರು ಮಾದರಿಯ ಟರ್ಬೋ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಯಾದ ಹ್ಯುಂಡೈ ಐ20 ಟರ್ಬೋ ಮತ್ತು ಮಾರುತಿ ಸುಜುಕಿ ಬಲೆನೊ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.
ಕ್ಲಾಸಿಕ್ ಬೈಕ್ ಪ್ರಿಯರಿಗಾಗಿ ಬಿಡುಗಡೆಯಾದ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಹೇಗಿದೆ? ಈ ವಿಡಿಯೋ ನೋಡಿ..
ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯು ಶೀಘ್ರದಲ್ಲೇ ರಸ್ತೆಗಿಳಿಯಲಿದ್ದು, ಟಾಟಾ ಕಂಪನಿಯು ಹೊಸ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ. ಹೊಸ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಳ್ಳುವುದಲ್ಲದೆ ಪ್ರತಿಸ್ಪರ್ಧಿ ಕಾರು ಮಾದರಿಯಲ್ಲಿ ಪರ್ಫಾಮೆನ್ಸ್ ಮತ್ತು ವಿವಿಧ ತಾಂತ್ರಿಕ ಅಂಶಗಳನ್ನು ಹೊಂದಿರಲಿದ್ದು, ಹೊಸ ಕಾರಿನ ಮೇಲೆ ಟಾಟಾ ಕಂಪನಿಯು ಭಾರೀ ನೀರಿಕ್ಷೆಯಿಟ್ಟುಕೊಂಡಿದೆ.

ಸದ್ಯ ಆಲ್‌ಟ್ರೊಜ್ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.

ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಹೊಸದಾಗಿ ಬಿಡುಗಡೆಯಾಗಲಿರುವ ಆಲ್‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯು 1.2-ಲೀಟರ್ ಟರ್ಬೊ ಎಂಜಿನ್ ಪಡೆದುಕೊಳ್ಳಲಿದ್ದು, ಹೊಸ ಎಂಜಿನ್ ಮಾದರಿಯು ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಗಳೊಂದಿಗೆ 110-ಬಿಹೆಚ್‍ಪಿ ಮತ್ತು 140-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಟರ್ಬೋ ಆವೃತ್ತಿಯು ಟಾಪ್ ಎಂಡ್‌ನಲ್ಲಿ ಪ್ರಮುಖ ಎರಡು ಮಾದರಿಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಐ20 ಟರ್ಬೋ ಮಾದರಿಗೆ ಭರ್ಜರಿ ಪೈಪೋಟಿ ನೀಡಿಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಟಾಟಾ ಆಲ್‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯು ಪ್ರಮುಖ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದ್ದು, ಟರ್ಬೋ ಮಾದರಿಯಲ್ಲಿ ಸಾಮಾನ್ಯ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ತುಸು ದುಬಾರಿಯಾಗಿರಲಿದೆ.

ಆಲ್‌ಟ್ರೊಜ್ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.09 ಲಕ್ಷ ಬೆಲೆ ಹೊಂದಿದ್ದು, ಟರ್ಬೋ ಪೆಟ್ರೋಲ್ ಮಾದರಿಯ ನಂತರ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!


Click it and Unblock the Notifications