ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಎಸ್‍ಯುವಿ

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಗ್ರಾವಿಟಾಸ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಟಾಟಾ ಗ್ರಾವಿಟಾಸ್ ಎಸ್‍ಯುವಿಯು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಎಸ್‍ಯುವಿ

ಗ್ರಾವಿಟಾಸ್ ಎಸ್‍ಯುವಿಯನ್ನು ತನ್ನದೇ ಸರಣಿಯ ಹ್ಯಾರಿಯರ್ ಎಸ್‍ಯುವಿಗೆ ಹೋಲಿಸಿದರೆ ಹಲವರು ಬದಲಾವಣೆಗಳನ್ನು ಹೊಂದಿದೆ. ಇತ್ತೀಚೆಗೆ ಟಾಟಾ ಗ್ರಾವಿಟಾಸ್ ಎಸ್‍ಯುವಿಯು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಆಟೋಟ್ರೇಂಡ್ ಯೂಟ್ಯಾಬ್ ಚಾನೆಲ್ ಬಹಿರಂಗಪಡಿಸಿದೆ. ಟಾಟಾ ಗ್ರಾವಿಟಾಸ್ ಮೂರು ಸಾಲಿನ ಸೀಟುಗಳ ವಿನ್ಯಾಸದಲ್ಲಿ 7 ಸಿಟುಗಳು ಅಥವಾ 6 ಸೀಟುಗಳ ಆಯ್ಕೆಯಲ್ಲಿ ಲಭ್ಯವಿರಲಿದೆ. ಎರಡನೇ ಸಾಲಿನಲ್ಲಿ ಎರಡು ಕ್ಯಾಪ್ಟನ್ ಸೀಟುಗಳನ್ನು ನೀಡಲಾಗುತ್ತದೆ. ಟಾಟಾ ಗ್ರಾವಿಟಾಸ್ ಎಸ್‍ಯುವಿಯು 4,661 ಎಂಎಂ ಉದ್ದ, 1,894 ಮಿಮೀ ಅಗಲ ಮತ್ತು 1,786 ಎಂಎಂ ಎತ್ತರವನ್ನು ಹೊಂದಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಎಸ್‍ಯುವಿ

ಟಾಟಾ ಹ್ಯಾರಿಯರ್ ಎಸ್‍ಯುವಿಗಿಂತ ಗ್ರಾವಿಟಾಸ್ ಮಾದರಿಯು 63 ಎಂಎಂ ಉದ್ದ, 72 ಎಂಎಂ ಅಗಲ ಮತ್ತು 80 ಎಂಎಂ ಎತ್ತರವನ್ನು ಹೊಂದಿದೆ. ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚುವರಿ ಹೆಡ್‌ರೂಮ್‌ಗಾಗಿ, ಗ್ರಾವಿಟಾಸ್‌ನ ರೂಫ್ ಹೆಚ್ಚಿಸಲಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಎಸ್‍ಯುವಿ

ಟಾಟಾ ಗ್ರಾವಿಟಾಸ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಹ್ಯಾರಿಯರ್ ಮಾದರಿಯಲ್ಲಿರುವಂತಹ ಅದೇ ಫೀಚರ್ ಗಳನ್ನು ಹೊಂದಿರಲಿದೆ. ಇನ್ನು ಟಾಟಾ ಗ್ರಾವಿಟಾಸ್ ಎಸ್‍ಯುವಿಯಲ್ಲಿ ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳನ್ನು ಹೊಂದಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಎಸ್‍ಯುವಿ

ಗ್ರಾವಿಟಾಸ್ ಎಸ್‍ಯುವಿಯು ಹ್ಯಾರಿಯರ್ ಮಾದರಿಯಂತೆ ಎಕ್ಸ್ಇ, ಎಕ್ಸ್ಎಂ, ಎಕ್ಸ್ ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ರೂಪಾಂತರಗಳಲ್ಲಿ ಬಿಡುಗಡೆಯಾಗಬಹುದು. ಈ ಎಸ್‍ಯುವಿಯಲ್ಲಿ 16-ಇಂಚಿನ ಅಲಾಯ್ ವ್ಹೀಲ್ಸ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ವಿಭಿನ್ನವಾದ ಬೂಟ್ ಲಿಡ್ ಮತ್ತು ಟೈಲ್ ಲ್ಯಾಂಪ್ ಅನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಎಸ್‍ಯುವಿ

ಹೊಸ ಟಾಟಾ ಗ್ರಾವಿಟಾಸ್ ಎಸ್‍ಯುವಿಯಲ್ಲಿ ಫಿಯೆಟ್ ಮೂಲದ ಅದೇ 2.0-ಲೀಟರ್ ಕ್ರೈಟೆಕ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಹೊಂದಿರಬಹುದು. ಈ ಎಂಜಿನ್ 170 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಎಸ್‍ಯುವಿ

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ಪವರ್ ಅನ್ನು ಟಯರುಗಳಿಗೆ ಕಳುಹಿಸಲಾಗುತ್ತದೆ, ಟಾಟಾ ಗ್ರಾವಿಟಾಸ್ ಎಸ್‍ಯುವಿಯು ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಗೆ ಪೈಪೋಟಿಯನ್ನು ನೀಡುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಎಸ್‍ಯುವಿ

ಗ್ರಾವಿಟಾಸ್ ಎಸ್‍ಯುವಿಯನ್ನು ಹೊರತುಪಡಿಸಿ, ಟಾಟಾ ಇನ್ನೂ ಎರಡು ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಶೀಘ್ರದಲ್ಲೇ ಟಾಟಾ ಕಂಪನಿಯು ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮತ್ತು ಹೆಚ್‌ಬಿಎಕ್ಸ್ ಮಿನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಎಸ್‍ಯುವಿ

ಇದರಲ್ಲಿ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಈ ವರ್ಷದ ದೀಪಾವಳಿ ಹಬ್ಬದ ಮೊದಲು ಬಿಡುಗಡೆಯಾಗುವ ಸಾಧ್ಯತೆಗಳಿದೆ. ಇನ್ನು ಗ್ರಾವಿಟಾಸ್ ಎಸ್‍ಯುವಿಯು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

Article Published On: Monday, September 7, 2020, 12:08 [IST]
English summary
Tata Gravitas Spied In Detail While At Petrol Pump. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+