Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಹ್ಯಾರಿಯರ್ ಎಸ್‍ಯುವಿಯ ಆಕರ್ಷಕ ಟಿವಿಸಿಯನ್ನು ಬಿಡುಗಡೆಗೊಳಿಸಿದ ಟಾಟಾ
ಟಾಟಾ ಹ್ಯಾರಿಯರ್ ಭಾರತೀಯ ಮಾರುಕಟ್ಟೆಯ ಮಧ್ಯಮ ಗಾತ್ರದ ಎಸ್‍ಯುವಿಗಳ ವಿಭಾಗದಲ್ಲಿ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಟಾಟಾ ಕಂಪನಿಯು ಹೂಸ ಹ್ಯಾರಿಯರ್ ಎಸ್‍ಯುವಿಯ ಆಕರ್ಷಕ ಟಿವಿಸಿಯನ್ನು ಬಿಡುಗಡೆಗೊಳಿಸಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷ ಒಮೆಗಾ-ಎಆರ್ಸಿ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ಹ್ಯಾರಿಯರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದರು. ಈ ಹೊಸ ಎಸ್‍ಯುವಿಯನ್ನು ಈ ವರ್ಷದ ಆರಂಭದಲ್ಲಿ ಹೆಚ್ಚು ಪವರ್ ಫುಲ್ ಎಂಜಿನ್‌ನೊಂದಿಗೆ ನವೀಕರಿಸಲಾಗಿತ್ತು. ಮಾರಾಟ ಪಟ್ಟೆಯಲ್ಲಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗದಿದ್ದರೂ ಈ ಎಸ್‍ಯುವಿಯು ಬಹಳಷ್ಟು ಗ್ರಾಹಕರನ್ನು ಆಕರ್ಷಸಿತು. ಇತ್ತೀಚೆಗೆ ಹ್ಯಾರಿಯರ್ ಎಸ್‍ಯುವಿಯ ಎಕ್ಸ್‌ಟಿ ಪ್ಲಸ್ ಎನ್ನುವ ವೆರಿಯೆಂಟ್‌ವೊಂದನ್ನು ಬಿಡುಗಡೆಗೊಳಿಸಿತು.

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಹೊಸ ಹ್ಯಾರಿಯರ್ ಎಸ್‍ಯುವಿಯ ಟಿವಿಸಿಯನ್ನು ಹಂಚಿಕೊಂಡಿದೆ. ಯಶಸ್ವಿಯಾಗಲು ಬಲವಾದ ಫೌಂಡೇಶನ್ ಹೇಗೆ ಮುಖ್ಯವಾಗಿದೆ ಎಂಬುದನ್ನು ಈ ವೀಡಿಯೋದಲ್ಲಿ ತಿಳಿಸಿದ್ದಾರೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಟಾಟಾ ಹ್ಯಾರಿಯರ್ ವಿಷಯಕ್ಕೆ ಬಂದರೆ ಇದರ ಫೌಂಡೇಶನ್ ಒಮೆಗಾರ್ಕ್ ಆಗಿದೆ. ಇದನ್ನು ಲ್ಯಾಂಡ್ ರೋವರ್‌ನ ಡಿ 8 ಪ್ಲಾಟ್‌ಫಾರ್ಮ್‌ನಿಂದ ಪಡೆಯಲ್ಪಟ್ಟಿದೆ. ಇದನ್ನು ಈಗಾಗಲೇ ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್‌ನಂತಹ ಎಸ್‍ಯುವಿಗಳಲ್ಲಿ ಬಳಸಲಾಗಿದೆ.

ಹ್ಯಾರಿಯರ್ ಎಸ್‍ಯುವಿಯ ಹೊರಭಾಗವು ಬೋಲ್ಡ್ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಡ್ಯುಯಲ್ ಫಂಕ್ಷನ್ ಎಲ್ಇಡಿ ಡಿಆರ್ಎಲ್ಗಳು, ಬಂಪರ್ ನಲ್ಲಿ ಅಳವಡಿಸಲಾದ ಹೆಡ್ ಲ್ಯಾಂಪ್ ಮತ್ತು ಮಸ್ಕ್ಯುಲರ್ ಫ್ರಂಟ್ ಗ್ರಿಲ್ ಎಲ್ಲವೂ ಆಕರ್ಷಕ ಲುಕ್ ಅನ್ನು ನೀಡುತ್ತದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವಾಗ ಈ ಎಸ್‍ಯುವಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇದರಲ್ಲಿ ಮರುವಿನ್ಯಾಸಗೊಳಿಸಲಾದ ಒಆರ್‍ವಿಎಂ ಅನ್ನು ಹೊಂದಿದೆ. ಇನ್ನೊಂದು ಬದಲಾವಣೆಯೆಂದರೆ ಡ್ಯುಯಲ್ ಟೋನ್ ಡೈಮಂಡ್ ಕಟ್ ಅಲಾಯ್ ವ್ಹೀಲ್ ಗಳನ್ನು ಅಳವಡಿಸಿದೆ. ಇನ್ನು ಹೊಸದಾಗಿ ಪನೋರಮಿಕ್ ಸನ್‌ರೂಫ್ ಫೀಚರ್ ಅನ್ನು ಪಡೆದುಕೊಂಡಿದೆ.

ಟಾಟಾ ಹ್ಯಾರಿಯರ್ ಎಸ್‍ಯುವಿಯು ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರ ಲಭ್ಯವಿದೆ. ಟಾಟಾ ಹ್ಯಾರಿಯರ್ ಎಸ್‍ಯುವಿಯಲ್ಲಿ 2.0 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಈ ಎಂಜಿನ್ 170 ಬಿಹೆಚ್‍ಪಿ ಮತ್ತು 350 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಈ ಹ್ಯಾರಿಯರ್ ಎಸ್‍ಯುವಿಯಲ್ಲಿ ಹೊಸದಾಗಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಹ್ಯಾರಿಯರ್ ಎಸ್‌ಯುವಿಯಲ್ಲಿ ಸುರಕ್ಷತೆಗಾಗಿ ಏರ್‍ಬ್ಯಾಗ್‍ಗಳು, ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸಿಸ್ಟ್ ಗಳನ್ನು ಅಳವಡಿಸಲಾಗಿದೆ.