ಪನೊರಮಿಕ್ ಸನ್‌ರೂಫ್ ಸೌಲಭ್ಯವುಳ್ಳ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ವೆರಿಯೆಂಟ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ಆರು ತಿಂಗಳ ಅವಧಿಯಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪರಿಚಯಿಸಿದ್ದು, ಇದೀಗ ಹೊಸ ಕಾರಿನಲ್ಲಿ ಎಕ್ಸ್‌ಟಿ ಪ್ಲಸ್ ಎನ್ನುವ ವೆರಿಯೆಂಟ್‌ವೊಂದನ್ನು ಬಿಡುಗಡೆ ಮಾಡಿದೆ.

ಸನ್‌ರೂಫ್ ಸೌಲಭ್ಯವುಳ್ಳ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ಬಿಡುಗಡೆ

ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಮಾದರಿಗಳ ನಡುವಿನ ಸ್ಥಾನ ಪಡೆದುಕೊಂಡಿರುವ ಎಕ್ಸ್‌ಟಿ ಪ್ಲಸ್ ಹ್ಯಾರಿಯರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 16.99 ಲಕ್ಷ ಬೆಲೆ ನಿಗದಿ ಮಾಡಿದ್ದು, ಹೊಸ ಆವೃತ್ತಿಯಲ್ಲಿ ಪನೊರಮಿಕ್ ಸನ್‌ರೂಫ್, 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಮತ್ತು ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಸನ್‌ರೂಫ್ ಸೌಲಭ್ಯವುಳ್ಳ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ಬಿಡುಗಡೆ

ಮಧ್ಯಮ ಕ್ರಮಾಂಕದಲ್ಲಿ ಖರೀದಿ ಲಭ್ಯವಿದ್ದ ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಮಾದರಿಗಳ ನಡುವಿನ ಬೆಲೆ ಅಂತರ ತಗ್ಗಿಸುವುದಕ್ಕಾಗಿ ಎಕ್ಸ್‌ಟಿ ಪ್ಲಸ್ ಮಾದರಿಯನ್ನು ಪರಿಚಯಿಸಲಾಗಿದ್ದು, ಎಕ್ಸ್‌ಟಿ ಪ್ಲಸ್ ನಂತರ ಹ್ಯಾರಿಯರ್ ಕಾರು ಒಟ್ಟು 17 ವೆರಿಯೆಂಟ್ ಪಡೆದುಕೊಂಡಂತಾಗಿದೆ.

ಸನ್‌ರೂಫ್ ಸೌಲಭ್ಯವುಳ್ಳ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ಬಿಡುಗಡೆ

ಹೊಸ ಎಕ್ಸ್‌ಟಿ ಪ್ಲಸ್ ಮಾದರಿಯಲ್ಲಿ ಪನೊರಮಿಕ್ ಸನ್‌ರೂಫ್, 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಮತ್ತು ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳನ್ನು ಹೊರತುಪಡಿಸಿ ಇನ್ನುಳಿದ ತಾಂತ್ರಿಕ ಅಂಶಗಳು ಸಾಮಾನ್ಯ ಮಾದರಿಯಲ್ಲಿವೆ.

ಸನ್‌ರೂಫ್ ಸೌಲಭ್ಯವುಳ್ಳ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ಬಿಡುಗಡೆ

ಹ್ಯಾರಿಯರ್ ಫೇಸ್‌ಲಿಫ್ಟ್ ಆವೃತ್ತಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ. ಜೊತೆಗೆ ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಹೊಸ ಕಾರಿನ ಬೆಲೆಯು ತುಸು ದುಬಾರಿಯಾಗಿದ್ದರೂ ಸಹ ಹೊಸ ಮಾದರಿಯ ಫೀಚರ್ಸ್‌ಗಳು ಫೇಸ್‌ಲಿಫ್ಟ್ ಕಾರಿಗೆ ಮತ್ತಷ್ಟು ಬಲಿಷ್ಠತೆ ನೀಡಲಿದ್ದು, ಎಂಜಿನ್ ಪರ್ಫಾಮೆನ್ಸ್‌ನಲ್ಲೂ ಸಾಕಷ್ಟು ಸುಧಾರಣೆ ತಂದಿರುವುದು ಮಾಲಿನ್ಯ ತಡೆಗೆ ಸಾಕಷ್ಟು ಸಹಕಾರಿಯಾಗಲಿದೆ.

ಸನ್‌ರೂಫ್ ಸೌಲಭ್ಯವುಳ್ಳ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ಬಿಡುಗಡೆ

ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.30 ಲಕ್ಷ ಬೆಲೆ ಪಡೆದುಕೊಂಡಿದ್ದು, ಇದರಲ್ಲಿ ಆಟೋಮ್ಯಾಟಿಕ್ ಆವೃತ್ತಿಯ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.40 ಲಕ್ಷದಿಂದ ಆರಂಭಗೊಳ್ಳಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸನ್‌ರೂಫ್ ಸೌಲಭ್ಯವುಳ್ಳ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ಬಿಡುಗಡೆ

ಇದರಲ್ಲಿ ಬ್ಲ್ಯಾಕ್ ಎಡಿಷನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದ್ದು, ಆರಂಭಿಕ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.17.85 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.30 ಲಕ್ಷ ಬೆಲೆ ಹೊಂದಿದೆ.

ಸನ್‌ರೂಫ್ ಸೌಲಭ್ಯವುಳ್ಳ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ಬಿಡುಗಡೆ

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಹ್ಯಾರಿಯರ್ ಎಸ್‌ಯುವಿ ಕಾರು 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಸನ್‌ರೂಫ್ ಸೌಲಭ್ಯವುಳ್ಳ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ಬಿಡುಗಡೆ

ಸದ್ಯ ಡೀಸೆಲ್ ಎಂಜಿನ್ ಮಾದರಿಯಲ್ಲೇ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ ಹ್ಯಾರಿಯರ್ ಕಾರು ಶೀಘ್ರದಲ್ಲೇ ಪೆಟ್ರೋಲ್ ಮಾದರಿಯನ್ನು ಪಡೆದುಕೊಳ್ಳಲಿದ್ದು, ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಬಲಿಷ್ಠ ಕಾರು ಮಾದರಿಯಾಗಿದೆ.

Article Published On: Friday, September 4, 2020, 13:18 [IST]
English summary
New Tata Harrier XT+ Variant Launched In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+