ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ವೆರಿಯೆಂಟ್ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ
ಟಾಟಾ ಮೋಟಾರ್ಸ್ ಕಂಪನಿಯು ಹ್ಯಾರಿಯರ್ ಎಸ್‍ಯುವಿಯ ಎಕ್ಸ್‌ಟಿ ಪ್ಲಸ್ ವೆರಿಯೆಂಟ್ ಅನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಟಾಟಾ ಕಂಪನಿಯು ಈ ಹೂಸ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ವೆರಿಯೆಂಟಿನ ಆಕರ್ಷಕ ಟಿವಿಸಿಯನ್ನು ಬಿಡುಗಡೆಗೊಳಿಸಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷ ಒಮೆಗಾ-ಎಆರ್ಸಿ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ಹ್ಯಾರಿಯರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದರು. ಈ ಹೊಸ ಎಸ್‍ಯುವಿಯನ್ನು ಈ ವರ್ಷದ ಆರಂಭದಲ್ಲಿ ಹೆಚ್ಚು ಪವರ್ ಫುಲ್ ಎಂಜಿನ್‌ನೊಂದಿಗೆ ನವೀಕರಿಸಲಾಗಿತ್ತು. ಮಾರಾಟ ಪಟ್ಟೆಯಲ್ಲಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗದಿದ್ದರೂ ಈ ಎಸ್‍ಯುವಿಯು ಬಹಳಷ್ಟು ಗ್ರಾಹಕರನ್ನು ಆಕರ್ಷಸಿತು. ಹ್ಯಾರಿಯರ್ ಎಸ್‍ಯುವಿಯ ಮಾರಾಟವನ್ನು ಹೆಚ್ಚಿಸಲು ಇತ್ತೀಚೆಗೆ ಎಕ್ಸ್‌ಟಿ ಪ್ಲಸ್ ಎನ್ನುವ ವೆರಿಯೆಂಟ್‌ವೊಂದನ್ನು ಬಿಡುಗಡೆಗೊಳಿಸಿತು.

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಹೊಸ ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ಎಸ್‍ಯುವಿಯ ಟಿವಿಸಿಯನ್ನು ಹಂಚಿಕೊಂಡಿದೆ. ಈ ಟಿವಿಸಿಯಲ್ಲಿ ಸನ್‌ರೂಫ್ ಫೀಚರ್ ಪ್ರಾಮುಖ್ಯತೆಯನ್ನು ನೀಡಿ ಬಿಡುಗಡೆಗೊಳಿಸಿದ್ದಾರೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಟಿವಿಸಿಯಲ್ಲಿ ಸುಂದರವಾದ ಪರಿಸರದ ನಡುವೆ ಎಸ್‍ಯುವಿಯನ್ನು ನಿಲುಗಡೆ ಮಾಡಿದಾಗ ಸನ್‌ರೂಫ್ ಅನ್ನು ಒನ್ ಟಚ್ ನಲ್ಲಿ ತೆರಿಯುತ್ತಾರೆ. ಈ ಸನ್‌ರೂಫ್ ಅನ್ನು ಆಟೋಮ್ಯಾಟಿಕ್ ಆಗಿ ಮುಚ್ಚಲು ಗ್ಲೋಬ್ ಕ್ಲೋಸ್ ಹೊಂದಿದೆ. ಹೆಚ್ಚುವರಿ ಸುರಕ್ಷತೆಗಾಗಿ ಇದು ಆಂಟಿ ಪಿಂಚ್ ಮತ್ತು ರೇನ್ ಸೆನ್ಸಿಂಗ್ ಕ್ಲೋಸರ್ ಫೀಚರ್ ಅನ್ನು ಹೊಂದಿದೆ.

ಸನ್‌ರೂಫ್ ಗ್ಲಾಸ್ ಮೇಲೆ ಬ್ಲ್ಯಾಕ್ ಲೇಪನದೊಂದಿಗೆ ಬ್ಲೈಡ್ ಕವರ್ ಮೇಲೆ ರೋಲ್ ಹೊಂದಿರುವ ಬಣ್ಣದ ಗಾಜನ್ನು ಪಡೆಯುತ್ತದೆ. ಇದು ಅತ್ಯಂತ ಬಿಸಿಲಿನ ಹವಾಮಾನ ಪರಿಸ್ಥಿತಿಗಳಲ್ಲಿ ಕ್ಯಾಬಿನ್‌ನೊಳಗೆ ಸಂಪೂರ್ಣ ನೆರಳು ನೀಡುತ್ತದೆ. ಈ ಫೀಚರ್ ಸೇರ್ಪಡೆಯ ಹೊರತಾಗಿ, ಹ್ಯಾರಿಯರ್ ಎಕ್ಸ್‌ಟಿ ಪ್ಲಸ್ ವೆರಿಯೆಂಟ್ ನಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹ್ಯಾರಿಯರ್ ಎಸ್‍ಯುವಿಯ ಹೊರಭಾಗವು ಬೋಲ್ಡ್ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಡ್ಯುಯಲ್ ಫಂಕ್ಷನ್ ಎಲ್ಇಡಿ ಡಿಆರ್ಎಲ್ಗಳು, ಬಂಪರ್ ನಲ್ಲಿ ಅಳವಡಿಸಲಾದ ಹೆಡ್ ಲ್ಯಾಂಪ್ ಮತ್ತು ಮಸ್ಕ್ಯುಲರ್ ಫ್ರಂಟ್ ಗ್ರಿಲ್ ಎಲ್ಲವೂ ಆಕರ್ಷಕ ಲುಕ್ ಅನ್ನು ನೀಡುತ್ತದೆ.

ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವಾಗ ಈ ಎಸ್‍ಯುವಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇದರಲ್ಲಿ ಮರುವಿನ್ಯಾಸಗೊಳಿಸಲಾದ ಒಆರ್‍ವಿಎಂ ಅನ್ನು ಹೊಂದಿದೆ. ಇನ್ನೊಂದು ಬದಲಾವಣೆಯೆಂದರೆ ಡ್ಯುಯಲ್ ಟೋನ್ ಡೈಮಂಡ್ ಕಟ್ ಅಲಾಯ್ ವ್ಹೀಲ್ ಗಳನ್ನು ಅಳವಡಿಸಿದೆ. ಇನ್ನು ಹೊಸದಾಗಿ ಪನೋರಮಿಕ್ ಸನ್‌ರೂಫ್ ಫೀಚರ್ ಅನ್ನು ಪಡೆದುಕೊಂಡಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್
ಟಾಟಾ ಹ್ಯಾರಿಯರ್ ಎಸ್‍ಯುವಿಯು ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರ ಲಭ್ಯವಿದೆ. ಟಾಟಾ ಹ್ಯಾರಿಯರ್ ಎಸ್‍ಯುವಿಯಲ್ಲಿ 2.0 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಎಂಜಿನ್ 170 ಬಿಹೆಚ್‍ಪಿ ಮತ್ತು 350 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಜೋಡಿಸಲಾಗಿದೆ. ಇನ್ನು ಈ ಹ್ಯಾರಿಯರ್ ಎಸ್‍ಯುವಿಯಲ್ಲಿ ಹೊಸದಾಗಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಹ್ಯಾರಿಯರ್ ಎಸ್‌ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಏರ್‍ಬ್ಯಾಗ್‍ಗಳು, ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸಿಸ್ಟ್ ಗಳನ್ನು ಅಳವಡಿಸಲಾಗಿದೆ.


Click it and Unblock the Notifications