ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ಟಾಟಾ ಮೋಟಾರ್ಸ್ ಮತ್ತು ಜಯೆಮ್ ಆಟೋಮೋಟಿವ್ಸ್ ಸಂಸ್ಥೆಗಳು ಜಂಟಿಯಾಗಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನವನ್ನು ಅಭಿವೃದ್ಧಿಪಡಿಸುತ್ತಿದೆ. ಈ ಎರಡು ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿ ಪಡಿಸಲು 2017ರಲ್ಲಿ ಪಾಲುಗಾರಿಗೆಯ ಒಪ್ಪಂದವನ್ನು ಮಾಡಿಕೊಂಡಿವೆ.

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ಈ ಜಂಟಿ ಸಹಭಾಗಿತ್ವದಲ್ಲಿ ಜಯೆಮ್ ನಿಯೋ ಬ್ರ್ಯಾಂಡ್ ಅಡಿಯಲ್ಲಿ ನ್ಯಾನೋ ಹ್ಯಾಚ್‌ಬ್ಯಾಕ್‌ನ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡುವ ಗುರಿಯನ್ನು ಹೊಂದಿದೆ. ಈ ಕಾರು ಈಗಗಾಲೇ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಆದರೆ ಕಳೆದ ಎರಡು ವರ್ಷಗಳಿಂದ ಈ ಹೊಸ ಟಾಟಾ ನ್ಯಾನೂ ಎಲೆಕ್ಟ್ರಿಕ್ ಕಾರಿನ ಬಗ್ಗೆ ಕಂಪನಿಯು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಿಲ್ಲ.

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ಈ ಹೊಸ ಎಲೆಕ್ಟ್ರಿಕ್ ಕಾರು ಇತ್ತೀಚೆಗೆ ಪುಣೆಯ ಬಳಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಜಯೆಮ್ ನಿಯೋ ಎಂದು ಕರೆಯಲ್ಪಡುವ ಟಾಟಾ ನ್ಯಾನೋ ಎಲೆಕ್ಟ್ರಿಕ್ ಕಾರಿನ ಸ್ಪೈ ಚಿತ್ರಗಳು ಬಹಿರಂಗವಾಗಿವೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ಚಿತ್ರದಲ್ಲಿ ಈ ಎಲೆಕ್ಟ್ರಿಕ್ ಕಾರು ನಿಯೋ ಎಂಬ ಬ್ರ್ಯಾಡ್ಜಿಂಗ್ ಅನ್ನು ಹೊಂದಿದೆ. ಇನ್ನು ಸ್ಪೈ ಚಿತ್ರದಲ್ಲಿ ಈ ಎಲ್ಕ್ಟ್ರಿಕ್ ಕಾರಿನಲ್ಲಿ ಡಿಜಟಲ್ ಇನ್ಸ್ ಟ್ರೂಮೆಂಟ್ ಅನ್ನು ಒಳಗೊಂಡಿದೆ.

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ಜಯೆಮ್ ನಿಯೋ ದೇಶದಲ್ಲಿ ಸಿಟಿ ಟ್ಯಾಕ್ಸಿ ವಾಹನವಾಗಿ ಬಿಡುಗಡೆಗೊಳಿಸಲು ಉದ್ದೇಶಿಸಲಾಗಿತ್ತು. ಆರಂಭದಲ್ಲಿ ಕಂಪನಿಯು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನ ಓಲಾ ಎಲೆಕ್ಟ್ರಿಕ್ 400 ಯುನಿಟ್ ಗಳನ್ನು ಒದಗಿಸಬೇಕಿತ್ತು. ಆದರೆ ಈ ಯೋಜನೆಗಳು ವಿಳಂಭವಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ಟಾಟಾ ಮೋಟಾರ್ಸ್ ಮತ್ತು ಜಯೆಮ್ ಆಟೋ ಸಂಸ್ಥೆಗಳು ದೇಶದಲ್ಲಿ ನ್ಯಾನೋ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಅನ್ನು ಪರಿಚಯಿಸಲು ಸಜ್ಜಾಗುತ್ತಿದೆ. ಇದರ ಪ್ರಯುಕ್ತ ದೇಶದಲ್ಲಿ ಈ ಹೊಸ ಎಲೆಕ್ಟ್ರಿಕ್ ಕಾರು ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಫ್ಲೀಟ್ ಆಪರೇಟರ್‌ಗಳಿಗೆ ಇದನ್ನು ಮೊದಲಿಗೆ ಬಿಡುಗಡೆಗೊಳಿಸಬಹುದು.

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ಈ ಹೊಸ ಎಲೆಕ್ಟ್ರಿಕ್ ಕಾರನ್ನು ಜಯೆಮ್ ನಿಯೋ ಎಂಬ ಹೆಸರಿನಲ್ಲಿ ಬಿಡುಗಡೆಗೊಳಿಸಬಹುದು. ಈ ಜಯೆಮ್ ನಿಯೋ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಟಾಟಾ ನ್ಯಾನೊನಂತೆಯೇ ಒಂದೇ ರೀತಿಯ ವಿನ್ಯಾಸವನ್ನು ಹೊಂದಿದೆ. ಒಳಭಾಗದಲ್ಲಿ ಒಂದೇ ರೀತಿಯ ವಿನ್ಯಾಸವನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ಈ ಹೊಸ ನಿಯೋ ಕಾರಿನಲ್ಲಿ 17.7 ಕಿ.ವ್ಯಾ ಬ್ಯಾಟರಿ ಪ್ಯಾಕ್‌ ಮತ್ತು ಎಲೆಕ್ಟ್ರಿಕ್ ಮೋಟಾರ್ ಅನ್ನು ಜೋಡಿಸಲಾಗುತ್ತದೆ. ಈ ಎಲೆಕ್ಟ್ರಿಕ್ ಪವರ್‌ಟ್ರೇನ್ 23 ಬಿಹೆಚ್‌ಪಿ ಪವರ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ನಿಯೋ ಒಂದೇ ಬ್ಯಾಟರಿ ಚಾರ್ಜ್‌ನಲ್ಲಿ 203 ಕಿಲೋಮೀಟರ್‌ಗಳಷ್ಟು ಪ್ರಯಾಣಿಸುವ ಸಾಮರ್ಥ್ಯ ಹೊಂದಿರುತ್ತದೆ. ಇನ್ನು ಈ ಕಾರು 85 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿರುತ್ತದೆ.

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಬೇಡಿಕೆಯ ಹೆಚ್ಚಳದಿಂದಾಗಿ ಟಾಟಾ ನ್ಯಾನೋ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸಲು ಮುಂದಾಗಿರಬಹುದು. ಆದರೆ ಹೊಸ ಟಾಟಾ ನ್ಯಾನೊ ಎಲೆಕ್ಟ್ರಿಕ್ ಕಾರು ಹೊಸ ಸುರಕ್ಷತಾ ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ.

ಎಲೆಕ್ಟ್ರಿಕ್ ರೂಪದಲ್ಲಿ ಮಾರುಕಟ್ಟೆಗೆ ಬರುತ್ತಿದೆ ಟಾಟಾ ನ್ಯಾನೋ ಕಾರು

ಅತಿ ಕಡಿಮೆ ಬೆಲೆ, ಸಣ್ಣ ಕಾರು ಎಂಬ ಹೆಗ್ಗಳಿಕೆಯೊಂದಿಗೆ ಭಾರತದ ಮಾರುಕಟ್ಟೆಗೆ ಬಿಡುಗಡೆಗೊಂಡ ಟಾಟಾ ನ್ಯಾನೋ ಇದೀಗ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ. ಆದರೆ ಹೊಸ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿ ನ್ಯಾನೋ ಎಲೆಕ್ಟ್ರಿಕ್ ಕಾರನ್ನು ಅಭಿವೃದ್ದಿ ಪಡಿಸುವುದು ಉತ್ಪಾದಕರಿಗೆ ಸವಾಲು ಆಗಿರುತ್ತದೆ.

Image Courtesy: SMILEY TAMILAN TECH And Pravin Nair/Rushlane Spylane

Most Read Articles

Kannada
English summary
Tata Nano Electric Spotted Testing Revealing. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X