ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರಲ್ಲಿ ಪೂರ್ಣ ಪ್ರಮಾಣದ ಎಸ್‍ಯುವಿಗಳು ಮತ್ತು ಮೈಕ್ರೋ ಎಸ್‌ಯುವಿಗಳನ್ನು ಒಳಗೊಂಡಿವೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಟಾಟಾ ಮೋಟಾರ್ಸ್ ಕಂಪನಿಯು ಇದರ ನಡುವೆ ತನ್ನ ಟಿಗೋರ್ ಇವಿ ಕಾಂಪ್ಯಾಕ್ಟ್-ಸೆಡಾನ್‌ನ ಫೇಸ್‌ಲಿಫ್ಟೆಡ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಟಾಟಾ ಟೊಗೋರ್ ಇವಿ ಫೇಸ್‌ಲಿಫ್ಟ್ ಮಾದರಿಯು ಇತ್ತೀಚೆಗೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡಿಸಿದೆ. ಈ ಹೊಸ ಟಾಟಾ ಟೊಗೋರ್ ಎಲೆಕ್ಟ್ರಿಕ್ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಹೊಸ ಟಾಟಾ ಟಿಗೋರ್ ಫೇಸ್‌ಲಿಫ್ಟೆಡ್ ಎಲೆಕ್ಟ್ರಿಕ್ ಸೆಡಾನ್ ಹಲವಾರು ನವೀಕರಣಗಳನ್ನು ಹೊಂದಿದೆ ಮತ್ತು ಈ ಮೊದಲು ಹಲವಾರು ಬಾರಿ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಇದೀಗ ಈ ಹೊಸ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್ ಮಾದರಿಯು ಬಾರತದಲ್ಲಿ ಮತ್ತೊಮ್ಮೆ ಸಂಪೂರ್ಣವಾಗಿ ಮರೆಮಾಚಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡಿರುವುದು ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್ ಲೋ ವೆರಿಯೆಂಟ್ ಎಂದು ನಿರೀಕ್ಷಿಸುತ್ತೇವೆ. ಏಕೆಂದರೆ ಅದು ಸ್ಟೀಲ್ ವ್ಜೀಲ್ಸ್ ಮತ್ತು ವ್ಹೀಲ್ ಕ್ಯಾಪ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಇನ್ನು ಹೊಸ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್ ಮಾದರಿಯ ಹಿಂಭಾಗದಲ್ಲಿ ಹೊಸ ಶಾರ್ಕ್ ಫಿನ್ ಆಂಟೆನಾವನ್ನು ನೋಡಬಹುದು, ಆದರೆ ಕಾರಿನ ಒಟ್ಟಾರೆ ಸಿಲೂಯೆಟ್ ಅನ್ನು ಉಳಿಸಿಕೊಳ್ಳಲಾಗಿದೆ. ಆದರೆ ಈ ಮಾದರಿಯನ್ನು ಸಂಪೂರ್ಣವಾಗಿ ಮರೆಮಾಚಿರುವುದರಿಂದ ಹೊರಭಾಗದ ವಿನ್ಯಾಸದ ಮಾಹಿತಿಗಳು ಬಹಿರಂಗವಾಗಿಲ್ಲ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಆದರೆ ಹೊಸ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್ ಮಾದರಿಯ ವಿನ್ಯಾಸದಲ್ಲಿ ಕೆಲವು ಅಪ್ದೇಟ್ ಗಳನ್ನು ಮಾಡಬಹುದು. ಇನ್ನು ಹೊಸ ಟಾಟಾ ಟಿಗೋರ್ ಎಲೆಕ್ಟ್ರಿಕ್-ಸೆಡಾನ್ ನಲ್ಲಿ ನವೀಕರಿಸಿದ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಇನ್ನು ಹೊಸ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್ ಮಾದರಿಯ ಇಂಟಿರಿಯರ್ ನಲ್ಲಿ 3-ಸ್ಪೋಕ್ ಸ್ಟೀಯರಿಂಗ್ ವ್ಹೀಲ್, ಟ್ವಿನ್-ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಡ್ಯುಯಲ್-ಟೋನ್ ಸೀಟುಗಳನ್ನು ಒಳಗೊಂಡಿವೆ. ಇನ್ನು ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪ್ರಿ-ಫೇಸ್‌ಲಿಫ್ಟ್ ಮಾದರಿಯಿಂದ ಕೊಂಡೊಯ್ಯುವ ನಿರೀಕ್ಷೆಯಿದೆ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಯನ್ನು ಒಳಗೊಂಡಿರುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಟಾಟಾ ಕಾರುಗಳು ಸುರಕ್ಷತೆಯಲ್ಲಿ ಒಂದು ಹೆಚ್ಚು ಮುಂದೆ ಇರುತ್ತದೆ, ಟಾಟಾ ತನ್ನ ಕಾರುಗಳಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಗಳನ್ನು ನೀಡುತ್ತಾರೆ. ಅದರಂತೆ ಹೊಸ ಟಿಗೋರ್ ಎಲೆಕ್ಟ್ರಿಕ್ ಕಾರಿನಲ್ಲಿ ರಿಮೋಟ್ ಲಾಕಿಂಗ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ ಮತ್ತು ರಿಯರ್ ಪಾರ್ಕಿಂಗ್ ಸೆನ್ಸರ್‌ಗಳಂತಹ ಸುರಕ್ಷತಾ ಫೀಚರ್ ಗಳನ್ನು ಒಳಗೊಂಡಿರುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಫೇಸ್‌ಲಿಫ್ಟೆಡ್ ಟಿಗೋರ್ ಇವಿಯಲ್ಲಿ 72ವಿ ಮೂರು-ಹಂತದ ಎಸಿ ಇಂಡಕ್ಷನ್ ಮೋಟರ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 21.5 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್‌ ಅನ್ನು ಕೂಡ ಸೇರಿಸಲಾಗುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಇನ್ನು ಹೊಸ ಟಿಗೋರ್ ಇವಿಯಲ್ಲಿ ಇಕೋ ಮತ್ತು ಸ್ಪೋರ್ಟ್ ಎಂಬ ಎರಡು ಡ್ರೈವಿಂಗ್ ಮೋಡ್ ಗಳನ್ನು ಹೊಂದಿವೆ. ಇನ್ನು ಇದರ ಸಂಯೋಜಿತ ಮೋಟಾರ್ ಯುನಿಟ್ 40 ಬಿಹೆಚ್‍ಪಿ ಪವರ್ ಮತ್ತು 105 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ ಸಿಂಗಲ್-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ನೀಡಲಾಗುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟಾಟಾ ಟಿಗೋರ್ ಇವಿ ಫೇಸ್‌ಲಿಫ್ಟ್

ಇನ್ನು ಹೊಸ ಫೇಸ್‌ಲಿಫ್ಟೆಡ್ ಟಿಗೋರ್ ಇವಿಯು ಒಂದೇ ಬಾರಿ ಪೂರ್ಣ ಪ್ರಮಾಣ ಚಾರ್ಜ್ ಮಾಡಿದರೆ 213 ಕಿ.ಮೀ ಚಲಿಸುತ್ತದೆ. ಹೊಸ ಟಿಗೋರ್ ಇವಿಯ ಬ್ಯಾಟರಿಯನ್ನು ಫಾಸ್ಟ್ ಚಾರ್ಚರ್ ಬಳಿಸಿದರೆ ಕೇವಲ ಗಂಟೆಗಳಲ್ಲಿ ಶೇಕಡಾ 0 ರಿಂದ 80 ರವರೆಗೆ ಚಾರ್ಜ್‌ ಆಗುತ್ತದೆ. ಸಾಮಾನ್ಯ ಚಾರ್ಜರ್ ಬಳಸಿದರೆ ಪೂರ್ಣ ಪ್ರಮಾಣದ ಚಾರ್ಜ್‌ ಅಗಲು ಸುಮಾರು 11.5 ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ.

Most Read Articles

Kannada
English summary
Tata Tigor EV Facelift Spotted Testing Once Again. Read In Kannada.
Story first published: Thursday, December 24, 2020, 17:15 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X